ಶ್ರೀಲಂಕಾ vs ಅಫ್ಘಾನಿಸ್ತಾನ ಮುಖಾಮುಖಿ: ಸಂಭಾವ್ಯ ತಂಡ, ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

ನವೆಂಬರ 1ರಂದು ನಡೆಯಲಿರುವ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿಯ ವಿಶ್ವಕಪ್‌ನ 32ನೇ ಪಂದ್ಯ ಇದಾಗಿದ್ದು ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಮೊದಲ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಸೋಲಿನಿಂದಿಗೆ ಆರಂಭಿಸಿದ ಅಫ್ಘಾನಿಸ್ತಾನ ತಂಡಕ್ಕೆ ನಂತರ ಅದೃಷ್ಟ ಸಂಪೂರ್ಣವಾಗಿ ಕೈಕೊಟ್ಟಿದೆ.
ಅಫ್ಘಾನಿಸ್ತಾನ ತಂಡ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದರೆ ಮುಂದಿನ ಎರಡು ಪಂದ್ಯಗಳು ಮಳೆಗೆ ಆಹುತಿಯಾಗಿರುವುದು ತಿರುಗಿ ಬೀಳಲು ಅವಕಾಶವನ್ನೇ ನೀಡಲಿಲ್ಲ. ಮಂಗಳವಾರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಾದರೂ ಆಡುವ ಅವಕಾಶ ದೊರೆಯುವ ನಿರೀಕ್ಷೆಯಲ್ಲಿದೆ ಮೊಹಮ್ಮದ್ ನಬಿ ಪಡೆ. ಇತ್ತ ಶ್ರೀಲಂಕಾ ಮೂರು ಪಂದ್ಯಗಳ ಪೈಕಿ ಒಂದು ಗೆಲುವು ಸಾಧಿಸಿದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಪಂದ್ಯದ ಸಮಯ ನೇರಪ್ರಸಾರ ಮಾಹಿತಿ: ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮಂಗಳವಾರ ಬ್ರಿಸ್ಬೇನ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್: ಹವಾಮಾನ ವರದಿ: ಪಂದ್ಯದ ದಿನ ಬ್ರಿಸ್ಬೇನ್ನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಈ ಪಂದ್ಯ ಕೂಡ ಮಳೆಗೆ ಆಹುತಿಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಪಿಚ್ ರಿಪೋರ್ಟ್: ಪರ್ತ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವನ್ನು ನೀಡುವ ಪಿಚ್ ಆಗಿದೆ. ಬ್ಯಾಟರ್‌ಗಳಿಗೆ ಚೆಂಡು ನೇರವಾಗಿ ಬ್ಯಾಟ್‌ಗೆ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ), ಮೊಹಮ್ಮದ್ ನಬಿ (ನಾಯಕ), ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ಉಸ್ಮಾನ್ ಘನಿ, ನಜಿಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಫಜಲ್ಹಕ್ ಫಾರೂಕಿ, ಖೈಸ್ ಅಹ್ಮದ್, ನವೀನ್-ಉಲ್-ಹಕ್, ದರ್ವಿಶ್ ರಸೂಲಿ, ಮೊಹಮ್ಮದ್ ಸಲೀಮ್ ಸಫಿ
ಶ್ರೀಲಂಕಾ ತಂಡ: ಕುಸಲ್ ಮೆಂಡಿಸ್ (wk), ದಸುನ್ ಶನಕ (c), ಪಾತುಮ್ ನಿಸ್ಸಾಂಕ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ಕಸುನ್ ರಜಿತ, ಪ್ರಮೋದ್ ಮದುಶನ್, ಜೆಫ್ರಿ ವಾಂಡರ್ಸೆ, ಅಶೆನ್ ಬಂಡಾರ, ಅಸಿತ ಫೆರ್ನಾಂಡೋ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications