T20 World Cup: ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 62 ರನ್‌ಗಳ ಜಯಗಳಿಸಿದ ಅಫ್ಘಾನಿಸ್ತಾನ

ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಸೋಮವಾರ ಬಾಂಗ್ಲಾದೇಶದ ವಿರುದ್ಧ ಅಫ್ಘಾನಿಸ್ತಾನ 62 ರನ್‌ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.
ರಹಮಾನುಲ್ಲಾ ಗುರ್ಬಾಜ್ 19 ಎಸೆತಗಳಲ್ಲಿ 27 ರನ್ ಗಳಿಸಿದರು. ಇಬ್ರಾಹಿಂ ಜದ್ರಾನ್ 39 ಎಸೆತಗಳಲ್ಲಿ 3 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ 46 ರನ್ ಗಳಿಸಿದರು. ದರ್ವೇಜ್ ರಸೂಲಿ 12, ನಜೀಬುಲ್ಲಾ ಜದ್ರಾನ್ 5 ರನ್, ಉಸ್ಮಾನ್ ಘನಿ 7, ಒಮರಜೈ 1 ರನ್ ಗಳಿಸಿ ಔಟಾದರು.
ನಂತರ ಬಂದ ನಾಯಕ ಮೊಹಮ್ಮದ್ ನಬಿ 17 ಎಸೆತಗಳಲ್ಲಿ ಅಜೇಯ 41 ಬಾರಿಸುವ ಮೂಲಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಒಂದು ಬೌಂಡರಿ 5 ಭರ್ಜರಿ ಸಿಕ್ಸರ್ ಗಳಿದ್ದವು. ಅಂತಿಮವಾಗಿ ಅಫ್ಘಾನಿಸ್ತಾನ ತಂಡ 7 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಬಾಂಗ್ಲಾದೇಶದ ಪರವಾಗಿ ತಸ್ಕಿನ್ ಅಹ್ಮದ್ ಮೂರು ವಿಕೆಟ್ ಪಡೆದರು. ಹಸನ್ ಮಹಮೂದ್ ಮತ್ತು ಶಕೀಬ್ ಅಲ್ ಹಸನ್ ತಲಾ ಎರಡು ವಿಕೆಟ್ ಪಡೆದರು.

ಅಫ್ಘಾನಿಸ್ತಾನದ ಅತ್ಯುತ್ತಮ ಬೌಲಿಂಗ್
161 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶದ ಆರಂಭಿಕರಾದ ನಜ್ಮುಲ್ ಹೊಸೈನ್ ಶಾಂಟೊ ಮತ್ತು ಮೆಹಿದಿ ಹಸನ್ ಮಿರಾಜ್ ಮೊದಲ ಎರಡು ಓವರ್‌ಗಳಲ್ಲಿ 18 ರನ್ ಗಳಿಸಿ ಭರ್ಜರಿ ಆರಂಭದ ಮುನ್ಸೂಚನೆ ನೀಡಿದರು. ಆದರೆ, ಫಜಲ್‌ಹಕ್ ಫರಿಕಿ ಅವರನ್ನು ಔಟ್ ಮಾಡುವ ಮೂಲಕ ಅಫ್ಘಾನಿಸ್ತಾನಕ್ಕೆ ಮುನ್ನಡೆಯನ್ನು ನೀಡಿದರು. 4 ಓವರ್‌ಗಳ ಅಂತ್ಯಕ್ಕೆ ಬಾಂಗ್ಲಾದೇಶ 24 ರನ್ ಗಳಿಸಿ 2 ವಿಕೆಟ್ ಕಳೆದುಕೊಂಡಿತು, ಮುಜೀಬ್ ಉರ್ ರೆಹಮಾನ್ ಎಸೆತದಲ್ಲಿ ಸೌಮ್ಯ ಸರ್ಕಾರ್ ಸ್ಟಂಪ್ ಔಟ್ ಆದರು.
ಮುಹಮ್ಮದ್ ಹೊಸೈನ್ 22 ಎಸೆತಗಳಲ್ಲಿ 29 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಅಫ್ಘಾನಿಸ್ತಾನದ ಬೌಲಿಂಗ್ ಎದುರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 20 ಓವರ್ ಗಳಲ್ಲಿ 98 ರನ್ ಗಳಿಸುವ ಮೂಲಕ 62 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಉಭಯ ತಂಡಗಳ ವಿವರ
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಯಾಸಿರ್ ಅಲಿ, ಅಫೀಫ್ ಹೊಸೈನ್, ಶಾಕಿಬ್ ಅಲ್ ಹಸನ್ (ನಾಯಕ), ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನೂರುಲ್ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ , ಎಬಾಡೋತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ನಸುಮ್ ಅಹ್ಮದ್
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಹಜರತುಲ್ಲಾ ಝಜೈ, ನಜಿಬುಲ್ಲಾ ಝದ್ರಾನ್, ದರ್ವಿಶ್ ರಸೂಲಿ, ಉಸ್ಮಾನ್ ಘನಿ, ಮೊಹಮ್ಮದ್ ನಬಿ (ನಾಯಕ), ಇಬ್ರಾಹಿಂ ಜದ್ರಾನ್, ಫರೀದ್ ಅಹ್ಮದ್ ಮಲಿಕ್, ರಶೀದ್ ಖಾನ್, ಕೈಸ್-ಉಲ್-ಅಹ್ಮದ್ ಹಕ್, ಮುಜೀಬ್ ಉರ್ ರಹಮಾನ್, ಅಜ್ಮತುಲ್ಲಾ ಒಮರ್ಜಾಯ್, ಫಜಲ್ಹಕ್ ಫಾರೂಕಿ, ಮೊಹಮ್ಮದ್ ಸಲೀಮ್ ಸಫಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications