T20 World Cup: ವಿಶ್ವಕಪ್ ಗೆ ನನ್ನ ಕಡೆಗಣಿಸದಂತೆ ಸಾರಿದ ಆಲ್ ರೌಂಡರ್
ಟಿ20 ವಿಶ್ವಕಪ್ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಟೀಮ್ ಇಂಡಿಯಾ ಹರಸಾಹವನ್ನು ಪಡುತ್ತಿದೆ. ಆಟಗಾರರು ದೇಶೀಯ ಟೂರ್ನಿಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಯಂಗ್ ಪ್ಲೇಯರ್ಸ್ ತಮ್ಮನ್ನು ಟಿ20 ವಿಶ್ವಕಪ್ ತಂಡದಲ್ಲಿ ಆಯ್ಕೆ ಮಾಡುವುದನ್ನು ಕಡೆಗಣಿಸ ಬೇಡಿ ಎಂದು ಸಾರಿ ಹೇಳುತ್ತಿದ್ದಾರೆ.
ಯುವ ಆಲ್‌ರೌಂಡರ್ ಸಿಕ್ಕ ಅವಕಾಶದಲ್ಲಿ ಅಬ್ಬರಿಸುತ್ತಾ ಇರುವುದು ತಂಡಕ್ಕೆ ಪ್ಲಸ್ ಪಾಯಿಂಟ್. ದೇಶೀಯ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ತಂಡದ ಚಿಂತೆಯನ್ನು ಹೆಚ್ಚಿಸಿದೆ. ಈಗ ಟೀಮ್ ಇಂಡಿಯಾದ ಯುವ ಆಲ್‌ರೌಂಡರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ನೀಡುತ್ತಿದ್ದು, ತಮ್ಮನ್ನು ತಂಡದ ಆಯ್ಕೆಯಲ್ಲಿ ಕಡೆಗಣಿಸಿದಂತೆ ಸಾರಿದ್ದಾರೆ. ಇನ್ನು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಬ್ಬರಿಸುತ್ತಿದ್ದಾರೆ

ಟೀಮ್ ಇಂಡಿಯಾ ಪರ ಆಡುವ ಅವಕಾಶವನ್ನು ಪಡೆದಿರುವ ಆಲ್‌ರೌಡರ್ ಅಕ್ಷರ್ ಪಟೇಲ್.. ಟೀಮ್ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಅಕ್ಷರ್ ಪಟೇಲ್ ಅಬ್ಬರಿಸುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಪಟೇಲ್ 2 ವಿಕೆಟ್ ಪಡೆದರೆ, ಬ್ಯಾಟಿಂಗ್‌ನಲ್ಲಿ 44 ರನ್ ಸಿಡಿಸಿದ್ದಾರೆ. ಇನ್ನು ಎಡನೇ ಇನ್ನಿಂಗ್ಸ್ನಲ್ಲಿ ಒಂದು ವಿಕೆಟ್ ಪಡೆದು ಬೀಗಿದರೆ, ಬ್ಯಾಟಿಂಗ್‌ನಲ್ಲಿ 17 ರನ್ ಸಿಡಿಸಿದರು.
ಇನ್ನು ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಪಟೇಲ್ ಬ್ಯಾಟಿಂಗ್‌ನಲ್ಲಿ 27 ರನ್ ಸಿಡಿಸಿದ್ದಾರೆ. ಅಲ್ಲದೆ ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಿ 1 ವಿಕೆಟ್ ಪಡೆದಿದ್ದಾರೆ. ಅಲ್ಲದೆ ಎರಡನೇ ಇನ್ನಿಂಗ್ಸ್‌ನಲ್ಲಿ 45 ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. ಇನ್ನು ಟೀಮ್ ಇಂಡಿಯಾದ ರನ್‌ಗಳನ್ನು ಹಿಗ್ಗಿಸುವಲ್ಲಿ ಶ್ರಮಿಸಿದ್ದಾರೆ.
ಹಾರ್ದಿಕ್ ಪಾಂಡ್ಯ ಸ್ಥಾನದ ಮೇಲೆ ಕಣ್ಣು
ಏಕದಿನ ವಿಶ್ವಕಪ್ ವೇಳೆ ಬಾಂಗ್ಲಾದೇಶದ ವಿರುದ್ಧ ಆಡುವಾಗ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ, ಇನ್ನು ಚೇತರಿಸಿಕೊಂಡಿಲ್ಲ. ಇವರು ಇನ್ನು ಗಾಯದಿಂದ ಗುಣಮುಖರಾಗಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಸಹ ಐಪಿಎಲ್‌ನಲ್ಲಿ ಆಡುತ್ತಾರಾ? ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುತ್ತಾರಾ? ಎಂಬುದೇ ದೊಡ್ಡ ಪ್ರಶ್ನೆ ಆಗಿದೆ.

ಹಾರ್ದಿಕ್ ಪಾಂಡ್ಯ ಅವರು ಅಲಭ್ಯರಾದಲ್ಲಿ ಅವರ ಸ್ಥಾನವನ್ನು ತುಂಬುವುದು ಯಾರು, ಎಂಬ ಪ್ರಶ್ನೆ ಯಾರು ಉದ್ಭವಿಸಿದೆ. ಈ ಪ್ರಶ್ನೆಗೆ ಹುಡುಕಾಟ ಜೋರಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಶಿವಂ ದುಬೆ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಅಲ್ಲದೆ ಮಿಡ್ಲ್ ಆರ್ಡರ್ ಬ್ಯಾಟಿಂಗ್ ಹಾಗೂ ಮಧ್ಯಮ ವೇಗದ ಬೌಲಿಂಗ್ ಮಾಡಿ ಸೈ ಎಸಿಕೊಂಡಿರುವ ಶಿವಂ ದುಬೆ ತಮ್ಮನ್ನು ಸಹ ಕಡೆಗಣಿಸ ಬೇಡಿ ಎಂದು ತಿಳಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಅವರ ಸ್ಥಾನವನ್ನು ತುಂಬಲು ನಾನು ರೆಡಿ ಎಂದು ಸಾರಿ ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಅವರ ಸ್ಥಾನದ ಮೇಲೆ ಅಕ್ಷರ್ ಪಟೇಲ್ ಸಹ ಕಣ್ಣು ನೆಟ್ಟಿದ್ದಾರೆ. ಇವರು ಸಹ ಸ್ಪಿನ್ ಆಲ್‌ರೌಂಡರ್ ಸ್ಥಾನವನ್ನು ತುಂಬಲು ತಯಾರಿ ನಡೆಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications