Australia vs Ireland: ಐರ್ಲೆಂಡ್ ವಿರುದ್ಧ ಗೆದ್ದ ಕಾಂಗರೂ ಪಡೆ, ಸೆಮಿಫೈನಲ್ ಆಸೆ ಜೀವಂತ

ಟಿ20 ವಿಶ್ವಕಪ್ 2022 1ನೇ ಗುಂಪಿನ ಪಂದ್ಯದಲ್ಲಿ, ಐರ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 42 ರನ್‌ಗಳ ಸುಲಭದ ಜಯ ಸಾಧಿಸಿತು. ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ ತನ್ನ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆದ ಪಂದ್ಯದಲ್ಲಿ ಐರ್ಲೆಂಡ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲೇ ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡರು, ನಾಯಕ ಆರನ್ ಫಿಂಚ್ ಅತ್ಯುತ್ತಮ ಆಟವಾಡಿದರು. ಅರ್ಧಶತಕ ಗಳಿಸುವ ಮೂಲಕ ಆಸ್ಟ್ರೇಲಿಯಾ ಉತ್ತಮ ಮೊತ್ತ ಕಲೆಹಾಕಲು ನೆರವಾದರು.
ನಾಯಕ ಫಿಂಚ್‌ಗೆ ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್ ಉತ್ತಮವಾಗಿ ಸಾಥ್ ನೀಡಿದರು. ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಐರ್ಲೆಂಡ್ ಪರವಾಗಿ ಬ್ಯಾರಿ ಮೆಕಾರ್ಥಿ 4 ಓವರ್ ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರು. ಜೋಶ್ವಾ ಲಿಟಲ್ 4 ಓವರ್ ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರು. 179 ರನ್‌ಗಳ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 18.1 ಓವರ್ ಗಳಲ್ಲಿ 137 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲನುಭವಿಸಿತು.

ಉತ್ತಮ ಮೊತ್ತ ಕಲೆಹಾಕಿದ ಆಸ್ಟ್ರೇಲಿಯಾ
ಮೊದಲು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಐರ್ಲೆಂಡ್ ಆರಂಭಿಕ ಆಘಾತ ನೀಡಿತು. ಡೇವಿಡ್ ವಾರ್ನರ್ ಕೇವಲ 3 ರನ್ ಗಳಿಸುವಷ್ಟರಲ್ಲಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಂತರ ನಾಯಕ ಆರನ್ ಫಿಂಚ್ ಮಿಚೆಲ್ ಮಾರ್ಷ್ ಉತ್ತಮ ಜೊತೆಯಾಟ ಆಡಿದರು.
ಮಿಚೆಲ್ ಮಾರ್ಷ್ 22 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ನಂತರ ಬಂದ ಮ್ಯಾಕ್ಸ್‌ವೆಲ್ 9 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟೋಯಿನಿಸ್ ನಾಯಕ ಫಿಂಚ್ ಜೊತೆಗೂಡಿ ಸ್ಫೋಟಕ ಆಟವಾಡಿದರು. ಸ್ಟೋಯಿನಿಸ್ 25 ಎಸೆತಗಳಲ್ಲಿ 35 ರನ್ ಗಳಿಸಿದರೆ, ಆರನ್ ಫಿಂಚ್ 44 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.
ENG Vs NZ : ಕಿವೀಸ್ ಪಡೆಗೆ ಆಂಗ್ಲರ ಸವಾಲು, ಗೆದ್ದರೆ ಮಾತ್ರ ಇಂಗ್ಲೆಂಡ್‌ಗೆ ಮುಂದಿನ ಹಾದಿ ಸುಲಭ

ಲೋಕ್ರನ್ ಟಕರ್ ಏಕಾಂಗಿ ಹೋರಾಟ ವ್ಯರ್ಥ
179 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡಕ್ಕೆ ಆಸ್ಟ್ರೇಲಿಯಾ ಬೌಲರ್ ಗಳು ಆರಂಭದಲ್ಲೇ ಆಘಾತ ನೀಡಿದರು. ನಾಯಕ ಆಂಡ್ರ್ಯೂ ಬಾಲ್ಬಿರ್ನಿ ಅವರನ್ನು ಪ್ಯಾಟ್ ಕಮಿನ್ಸ್ ಬೌಲ್ಡ್ ಮಾಡಿದರೆ, ಮುಂದಿನ ಓವರ್ ನಲ್ಲಿ ಮ್ಯಾಕ್ಸ್‌ವೆಲ್ ಪೌಲ್ ಸ್ಟರ್ಲಿಂಗ್, ಹ್ಯಾರಿ ಟೆಕ್ಟರ್ ಅವರನ್ನು ಔಟ್ ಮಾಡುವ ಮೂಲಕ ಐರ್ಲೆಂಡ್ ತಂಡವನ್ನು ಕಾಡಿದರು.
ನಂತರ ಮಿಚೆಲ್ ಸ್ಟಾರ್ಕ್ ಒಂದೇ ಓವರ್ ನಲ್ಲಿ ಕ್ಯಾಂಫರ್ ಮತ್ತು ಡಾಕ್ರೆಲ್ ಅವರನ್ನು ಬೌಲ್ಡ್ ಮಾಡುವ ಮೂಲಕ ಐರ್ಲೆಂಡ್ ಸೋಲು ಖಚಿತವಾಯಿತು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೆ, ಲೋರ್ಕನ್ ಟಕರ್ ಏಕಾಂಗಿ ಹೋರಾಟ ನಡೆಸಿದರು. 48 ಎಸೆತಗಳಲ್ಲಿ ಅಜೇಯ 71 ರನ್ ಗಳಿಸಿದರು. ಅವರಿಗೆ ಯಾವೊಬ್ಬ ಬ್ಯಾಟರ್ ಕೂಡ ಸಾಥ್ ನೀಡಲಿಲ್ಲ. ಅಂತಿಮವಾಗಿ ಐರ್ಲೆಂಡ್ 137 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.
ಮ್ಯಾಕ್ಸ್‌ವೆಲ್, ಸ್ಟಾರ್ಕ್, ಕಮ್ಮಿನ್ಸ್, ಝಂಪಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ಮಾರ್ಕಸ್ ಸ್ಟೊಯಿನಿಸ್ ಒಂದು ವಿಕೆಟ್ ಪಡೆದರು.

ಐರ್ಲೆಂಡ್, ಆಸ್ಟ್ರೇಲಿಯಾ ಪ್ಲೇಯಿಂಗ್ XI
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಫಿಯಾನ್ ಹ್ಯಾಂಡ್, ಜೋಶುವಾ ಲಿಟಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications