ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌: ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ಪ್ರಮುಖ ಆಟಗಾರನಿಗೆ ಕೋವಿಡ್ ದೃಢ

T20 World Cup: Australia bowler Adam Zampa tests Covid positive ahead of match against Sri Lanka

ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಪಂದ್ಯದ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯುಂಟು ಮಾಡುವಂತಾ ಸುದ್ದಿ ಹೊರಬಿದ್ದಿದೆ. ಆಸ್ಟ್ರೇಲಿಯಾ ತಮಡದ ಪ್ರಮುಖ ಆಟಗಾರ ವೈಟ್‌ಬಾಲ್ ಕ್ರಿಕೆಟ್‌ನ ಪ್ರಮುಖ ಸ್ಪಿನ್ನರ್ ಆಡಂ ಜಂಪಾ ಅವರ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಆದರೆ ಅವರಿಗೆ ಸಣ್ಣ ಪುಟ್ಟ ಲಕ್ಷಣಗಳು ಮಾತ್ರವೇ ಕಂಡುಬಂದಿದೆ ಎಂದು ತಂಡದ ವಕ್ತಾರ ಮಾಹಿತಿ ಹಂಚಿಕೊಂಡಿದ್ದಾರೆ.

ಕೋವಿಡ್ ಲಕ್ಷಣಗಳಿದ್ದರು ಕೂಡ ಆಸ್ಟ್ರೇಲಿಯಾ ಮ್ಯಾನೇಜ್‌ಮೆಂಡ್ ಶ್ರೀಲಂಕಾ ವಿರುದ್ಧದ ಈ ಮಹತ್ವದ ಪಂದ್ಯಕ್ಕೆ ಯುವ ಸ್ಪಿನ್ನರ್ ಅವರು ಲಭ್ಯವಿದ್ದಾರೆ ಎಂದು ಹೇಳಿಕೊಂಡಿತ್ತು. ಆದರೆ ಕೋವಿಡ್ ವರದಿ ಈಗ ಪಾಸಿಟಿವ್ ಬಂದಿರುವ ಕಾರಣ ಜಂಪಾ ಈ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ ಎಂದು ಕ್ರಿಕೆಟ್.ಕಾಮ್.ಎಯು ವರದಿ ಮಾಡಿದೆ.

IND vs PAK: ಸಚಿನ್ ಮಾತ್ರವಲ್ಲ, ಕೋಚ್ ದ್ರಾವಿಡ್ ದಾಖಲೆಯನ್ನೂ ಪುಡಿಪುಡಿ ಮಾಡಿದ ವಿರಾಟ್ ಕೊಹ್ಲಿIND vs PAK: ಸಚಿನ್ ಮಾತ್ರವಲ್ಲ, ಕೋಚ್ ದ್ರಾವಿಡ್ ದಾಖಲೆಯನ್ನೂ ಪುಡಿಪುಡಿ ಮಾಡಿದ ವಿರಾಟ್ ಕೊಹ್ಲಿ

ಉತ್ತಮ ಫಾರ್ಮ್‌ನಲ್ಲಿರುವ ಜಂಪಾ

ಉತ್ತಮ ಫಾರ್ಮ್‌ನಲ್ಲಿರುವ ಜಂಪಾ

ಆಸಿಸ್ ಸ್ಪಿನ್ನರ್ ಆಡಂ ಜಂಪಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದು ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಸಿಸ್ ತಂಡದ ಪರವಾಗಿ ಮಿಂಚಿದ್ದರು. ಆಸ್ಟ್ರೇಲಿಯಾದ ಈ ವಿಶ್ವಕಪ್ ತಂಡದಲ್ಲಿ ಜಂಪಾ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಒಂದು ವೇಳೆ ಈ ಪಂದ್ಯದಲ್ಲಿ ಆಡಂ ಜಂಪಾ ಆಡುವ ಬಳಗದಿಂದ ಹೊರಗುಳಿಯುವುದು ಅನಿವಾರ್ಯವಾದರೆ ಎಡಗೈ ಸ್ಪಿನ್ನರ್ ಆಷ್ಟನ್ ಅಗರ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಐಸಿಸಿಯ ನೂತನ ನಿಯಮದ ಪ್ರಕಾರ ಆಟಗಾರರಿಗೆ ಕೊವಿಡ್ ದೃಢಪಟ್ಟರೂ ಸಣ್ಣಪುಟ್ಟ ಲಕ್ಷಣಗಳು ಮಾತ್ರವೇ ಇದ್ದರೆ ಪಂದ್ಯಗಳಲ್ಲಿ ಆಡುವ ಅವಕಾಶವನ್ನು ನೀಡಲಾಗುತ್ತದೆ. ಆದರೆ ಈ ಬಗ್ಗೆ ಮ್ಯಾನೇಜ್‌ಮೆಂಟ್ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.

ಆಸ್ಟ್ರೇಲಿಯಾ ತಂಡಕ್ಕೆ ಅಗ್ನಿ ಪರೀಕ್ಷೆ

ಆಸ್ಟ್ರೇಲಿಯಾ ತಂಡಕ್ಕೆ ಅಗ್ನಿ ಪರೀಕ್ಷೆ

ಮಂಗಳವಾರ ನಡೆಯುವ ಆಸ್ಟ್ರೇಲಿಯಾ ಹಾಗೂ ಶ್ರಿಲಂಕಾ ನಡುವಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಹಾಲಿ ಚಾಂಪಿಯನ್ ಹಾಗೂ ಆತಿಥೇಯ ತಂಡವಾಗಿರುವ ಆಸ್ಟ್ರೇಲಿಯಾ ಮೊದಲ ಪಂದ್ಯದಲ್ಲಿಯೇ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಮತ್ತೊಂದೆಡೆ ಶ್ರೀಲಂಕಾ ತಂಡ ಅರ್ಹತಾ ಸುತ್ತಿನಿಂದ ಗೆದ್ದು ಸೂಪರ್ 12ಗೆ ಪ್ರವೇಶಿಸಿದೆ. ಈ ಮಹತ್ವದ ಘಟ್ಟದಲ್ಲಿ ಮೊದಲ ಪಂದ್ಯವನ್ನು ಐರ್ಲೆಂಡ್ ತಂಡದ ವಿರುದ್ಧ ಶ್ರೀಲಂಕಾ ಆಡಿದ್ದು ಈ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಈ ಮೂಲಕ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೂ ಆಘಾತ ನೀಡುವ ಆತ್ಮವಿಶ್ವಾಸ ಗಳಿಸಿಕೊಂಡಿದ್ದು ಈ ಪ್ರಯತ್ನದಲ್ಲಿ ಲಂಕಾ ಪಡೆ ಎಷ್ಟರ ಮಟ್ಟಿಗೆ ಯಶಸ್ಸು ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ವೆಸ್ಟ್ ಇಂಡೀಸ್: ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಫಿಲ್ ಸೈಮನ್ಸ್

ಆಸ್ಟ್ರೇಲಿಯಾ vs ಶ್ರೀಲಂಕಾ ಹೆಡ್ ಟು ಹೆಡ್ ಹಾಗೂ ಸಂಪೂರ್ಣ ಸ್ಕ್ವಾಡ್

ಆಸ್ಟ್ರೇಲಿಯಾ vs ಶ್ರೀಲಂಕಾ ಹೆಡ್ ಟು ಹೆಡ್ ಹಾಗೂ ಸಂಪೂರ್ಣ ಸ್ಕ್ವಾಡ್

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳು ಟಿ20 ಮಾದರಿಯಲ್ಲಿ ಈವರೆಗೆ 25 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಆಸ್ಟ್ರೇಲಿಯಾ ತಂಡ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಮೇಲುಗೈ ಸಾಧಿಸಿದ್ದರೆ ಶ್ರೀಲಂಕಾ ತಂಡ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈಗ ಈ ಎರಡು ತಂಡಗಳ ನಡುವೆ ಸಾಕಷ್ಟು ಪೈಪೋಟಿಯ ಪಂದ್ಯವನ್ನು ನಿರೀಕ್ಷಿಸಲಾಗುತ್ತಿದೆ. ಮಂಗಳವಾರ ಪರ್ತ್ ಕ್ರೀಡಾಂಗಣದಲ್ಲಿ ಈ ತಂಡಗಳು ಮುಖಾಮುಖಿಯಾಗುತ್ತಿದೆ.

ಶ್ರೀಲಂಕಾ ಸಂಪೂರ್ಣ ಸ್ಕ್ವಾಡ್ ಹೀಗಿದೆ: ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅಶೆನ್ ಬಂಡಾರ, ಭಾನುಕಾ ರಾಜಪಕ್ಸೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಬಿನೂರ ಫೆರ್ನಾಂಡೋ, ಲಹಿರು ಕುಮಾರ, ಜೆಫ್ರಿ ವಾಂಡರ್ಸೆ, ಕಸುನ್ ರಜಿತಾ, ಪ್ರಮೋದ್ ಮದುಶನ್, ಪಾತುಮ್ ನಿಸ್ಸಾಂಕ

ಆಸ್ಟ್ರೇಲಿಯಾ ಸಂಪೂರ್ಣ ಸ್ಕ್ವಾಡ್ ಹೀಗಿದೆ: ಆರೋನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್, ಸ್ಟೀವನ್ ಸ್ಮಿತ್, ಆಷ್ಟನ್ ಅಗರ್, ಕ್ಯಾಮರೂನ್ ಗ್ರೀನ್, ಕೇನ್ ರಿಚರ್ಡ್ಸನ್

Story first published: Tuesday, October 25, 2022, 15:46 [IST]
Other articles published on Oct 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X