
ಟಿ20 ವಿಶ್ವಕಪ್‌ನಲ್ಲಿ ಶುಕ್ರವಾರ ಎರಡು ಪಂದ್ಯಗಳು ನಡೆಯಲಿದ್ದು ಎರಡನೇ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಆತಿಥೆಯ ಆಸ್ಟ್ರೇಲಿಯಾ ತಂಡ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದರೂ ಎರಡನೇ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಇತ್ತ ಇಂಗ್ಲೆಂಡ್ ತಂಡ ಮೊದಲ ಐರ್ಲೆಂಡ್ ವಿರುದ್ಧ ಸೋಲು ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ.
ಸೂಪರ್ 12 ಹಂತದ ಮೊದಲ ಗುಂಪಿನಲ್ಲಿನ ಎರಡು ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಆರಂಭ ಹೇಳಿಕೊಳ್ಳುವಂತಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಈ ಎರಡು ತಮಡಗಳೂ ಪರಸ್ಪರ ಮುಖಾಮುಖಿಯಾಗಿಗುತ್ತಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಯಾವ ತಂಡಕ್ಕೆ ಮೇಲುಗೈ ದೊರೆಯಲಿದೆ ಎಂಬುದು ಈಗ ಅಭಿಮಾನಿಗಳ ಕುತೂಹಲ ಕೆರಳುವಂತೆ ಮಾಡಿದೆ.
ಪಂದ್ಯದ ಸಮಯ ನೇರಪ್ರಸಾರ ಮಾಹಿತಿ:ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಶುಕ್ರವಾರ ಮೆಲ್ನರ್ನ್ ಕ್ರಿಕೆಟ್ ಗ್ರೌಂಡ್(ಎಂಸಿಜಿ)ಯಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು ಮಧ್ಯಾಹ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಹವಾಮಾನ ವರದಿ: ಪಂದ್ಯದ ದಿನ ಮೆಲ್ಬರ್ನ್‌ನಲ್ಲಿ 13 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ. ಇನ್ನು ಪಂದ್ಯದ ಸಂದರ್ಭದಲ್ಲಿ ಮಳೆಯಾಗುವ ಸಾಧ್ಯತೆ ಶೇಕಡಾ 18ರಷ್ಟಿದೆ.
ಪಿಚ್ ರಿಪೋರ್ಟ್: ಈ ಮೆಲ್ಬರ್ನ್ ಪಿಚ್‌ನಲ್ಲಿ ಬ್ಯಾಟ್ ಹಾಗೂ ಬೌಲಿಂಗ್ ವಿಭಾಗಕ್ಕೆ ಸಮತೋಲಿತವಾಗಿ ನೆರವು ನೀಡಲಿದೆ. ಪಂದ್ಯದ ಆರಂಭಿಕ ಹಂತದಲ್ಲಿ ವೇಗಿಗಳಿಗೆ ಬೌನ್ಸ್ ನೆರವು ನೀಡಲಿದೆ. ಆದರೆ ಈ ಅಂಗಳದಲ್ಲಿ ಸ್ಪಿನ್ನರ್‌ಗಳಿಗೆ ಯಶಸ್ಸು ಅಷ್ಟಕ್ಕಷ್ಟೇ ಎನ್ನುವಂತಿದೆ ಈ ಹಿಂದಿನ ದಾಖಲೆಗಳು.
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಡಂ ಝಂಪಾ, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್
ಇಂಗ್ಲೆಂಡ್ ಸಂಪೂರ್ಣ ಸ್ಕ್ವಾಡ್: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ಫಿಲಿಪ್ ಸಾಲ್ಟ್, ಟೈಮಲ್ ಮಿಲ್ಸ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್
ಆಸ್ಟ್ರೇಲಿಯಾ ಸಂಪೂರ್ಣ ಸ್ಕ್ವಾಡ್: ಆರೋನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಪ್ಯಾಟ್ ಕಮ್ಮಿನ್ಸ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಕೇನ್ ರಿಚರ್ಡ್‌ಸನ್, ಆಡಮ್ ಝಂಪಾ, ಕ್ಯಾಮರೂನ್ ಗ್ರೀನ್, ಸ್ಟೀವನ್ ಸ್ಮಿತ್