For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಐರ್ಲೆಂಡ್ ಮುಖಾಮುಖಿ: ಸಂಭಾವ್ಯ ತಂಡ, ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

T20 World Cup Australia vs Ireland: pitch report weather forecast and Probable XI details

ಸೋಮವಾರ ಟಿ20 ವಿಶ್ವಕಪ್‌ನಲ್ಲಿ 31 ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಆತಿಥೆಯ ಆಸ್ಟ್ರೇಲಿಯಾ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಕುತೂಹಲ ಮೂಡಿಸಿದೆ. ಆತಿಥೇಯ ಆಸ್ಟ್ರೇಲಿಯಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಮೂರು ಪಂದ್ಯಗಳಲ್ಲಿ ಮೂರು ಅಂಕಗಳನ್ನು ಮಾತ್ರವೇ ಗಳಿಸಿಕೊಂಡಿದ್ದು ಸೆಮಿಫೈನಲ್ ಹಂತಕ್ಕೇರಲು ಈ ಪಂದ್ಯ ಮಹತ್ವದ್ದಾಗಿರಲಿದೆ.

ಆಸ್ಟ್ರೇಲಿಯಾ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೋಲು ಅನುಭವಿಸಿತ್ತು. ಅದಾದ ಬಲಿಕ ಎರಡನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಕಮ್‌ಬ್ಯಾಕ್ ಮಾಡಿತು. ಆದರೆ ಇಂಗ್ಲೆಮಡ್ ವಿರುದ್ಧದ ಬಹು ನಿರೀಕ್ಷಿತ ಮೂರನೇ ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ಎರಡು ತನಡಗಳು ಈ ಪಂದ್ಯದಲ್ಲಿ ಅಂಕವನ್ನು ಹಂಚಿಕೊಂಡಿದೆ. ಹೀಗಾಘಿ ಆಸ್ಟ್ರೇಲಿಯಾ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದ್ದು ಜೊತೆಗೆ ನೆಟ್‌ರನ್‌ರೇಟ್‌ನಲ್ಲಿಯೂ ಪ್ರಗತಿ ಸಾಧಿಸಬೇಕಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ: ಆಸ್ಟ್ರೇಲಿಯಾ ಹಾಗೂ ಐರ್ಲೆಂಡ್ ತಂಡಗಳು ಸೋಮವಾರ ಬ್ರಿಸ್ಬೇನ್‌ನ ಗಾನಾ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು ಮಧ್ಯಾಹ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್: ಹವಾಮಾನ ವರದಿ: ಪಂದ್ಯದ ದಿನ ಬ್ರಿಸ್ಬೇನ್‌ನಲ್ಲಿ 22-31 ಡಿಗ್ರಿ ಮಧ್ಯೆ ಉಷ್ಣಾಂಶವಿರಲಿ. ಆದರೆ ಮಳೆಯಾಗುವ ಸಾಧ್ಯೆಯಿಲ್ಲ ಎನ್ನುತ್ತಿದೆ ಹವಾಮಾನ ವರದಿ.
ಪಿಚ್ ರಿಪೋರ್ಟ್: ಗಾಬಾ ಪಿಚ್ ಬೌಲರ್‌ಗಳಿಗೆ ಹಾಗೂ ಬೌಲರ್‌ಗಳಿಗೆ ಸಮಾನ ಅವಕಾಶ ನೀಡುವ ಕ್ರೀಡಾಂಗಣವಾಗಿದೆ. ಬ್ಯಾಟರ್‌ಗಳು ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರೆ ನಂತರ ಪಿಚ್‌ನ ಲಾಭವನ್ನು ಪಡೆಯಬಹುದು.

ಆಸ್ಟ್ರೇಲಿಯಾ ಆಡುವ ಬಳಗ : ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಆಶ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್

Story first published: Sunday, October 30, 2022, 18:01 [IST]
Other articles published on Oct 30, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+