For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಆಸ್ಟ್ರೇಲಿಯಾ vs ನ್ಯೂಜಿಲೆಂಡ್ ಪಂದ್ಯಕ್ಕೆ ಕ್ಷಣಗಣನೆ: ಸಂಭಾವ್ಯ ಆಡುವ ಬಳಗ, ಇತರ ಮಾಹಿತಿ

T20 world cup: Australia vs New Zealand: Playing XI, Pitch Report, match Time details

ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನ ಪಂದ್ಯಗಳು ಮುಕ್ತಾಯವಾಗಿದ್ದು ಸೂಪರ್ 12 ಹಂತದ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಮೊದಲ ಪಂದ್ಯ ಆರಂಭವಾಗಲಿದ್ದು ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಸಿಡ್ನಿಯಲ್ಲಿರುವ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಅರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿದ್ದು ಬಲಿಷ್ಠ ಆಟಗಾರರ ಪಡೆಯೊಂದಿಗೆ ಟೂರ್ನಿಯಲ್ಲಿ ಮಿಂಚಲು ಸಜ್ಜಾಗಿದೆ. ಮತ್ತೊಂದೆಡೆ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ಕೂಡ ಸಾಕಷ್ಟು ಪ್ರತಿಭಾವಂತ ಆಟಗಾರರೊಂದಿಗೆ ವಿಶ್ವಕಪ್‌ನಲ್ಲಿ ಪಾರಮ್ಯ ಮೆರೆಯುವ ವಿಶ್ವಾಸದಲ್ಲಿದೆ.

ಹವಾಮಾನ ವರದಿ, ಪಿಚ್ ರಿಪೋರ್ಟ್, ಪಂದ್ಯದ ಸಮಯ

ಹವಾಮಾನ ವರದಿ: ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಹವಾಮಾನ ವರದಿಯ ಪ್ರಕಾರ ಮಳೆಯಾಗುವ ಸಾಧ್ಯತೆ ಶೇಕಡಾ 79ರಷ್ಟಿದೆ.

ಪಿಚ್ ವರದಿ: ಸಿಡ್ನಿ ಕ್ರಿಕೆಟ್ ಗ್ರೌಂಡ್‌ನ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚಿನ ನೆರವು ನೀಡಲಿದ್ದು ರನ್‌ಗಳಿಸಲು ಉತ್ತಮ ಅವಕಾಶ ದೊರೆಯಲಿದೆ. ಆರಂಭದಲ್ಲಿ ವೇಗಿಗಳಿಗೆ ಪಿಚ್ ನೆರವು ನೀಡುವ ಸಾಧ್ಯತೆ ಕಡಿಮೆಯಿದ್ದು ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳಿಗೆ ಮಿಂಚುವ ಅವಕಾಶವಿದೆ. ಟಾಸ್ ಗೆದ್ದ ತಂಡ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಲಿದೆ.

ಪಂದ್ಯದ ಸಮಯ: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12.30ಕ್ಕೆ ಆರಂಭವಾಗಲಿದೆ. 12 ಗಂಟೆಗೆ ಈ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ.

ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ನ್ಯೂಜಿಲೆಂಡ್: ಮ್ಯಾಟಿನ್ ಗಪ್ಟಿಲ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ, ಟಿಮ್ ಸೌಥಿ

ಸಂಪೂರ್ಣ ಸ್ಕ್ವಾಡ್ ಹೀಗಿದೆ
ಆಸ್ಟ್ರೇಲಿಯಾ: ಆರನ್ ಫಿಂಚ್ (ನಾಯಕ), ಪ್ಯಾಟ್ ಕಮಿನ್ಸ್ (ಉಪನಾಯಕ), ಆಷ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಕ್ಯಾಮರೂನ್ ಗ್ರೀನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆಡಮ್ ಜಂಪಾ

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೌಥಿ, ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್, ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಮಾರ್ಟಿನ್ ಗಪ್ಟಿಲ್, ಲಾಚ್ಲಾನ್ ಫರ್ಗುಸನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್‌ಮನ್, ಮೈಕೆಲ್ ಬ್ರೇಸ್‌ವೆಲ್, ಟ್ರೆಂಟ್ ಬೌಲ್ಟ್, ಫಿನ್ ಅಲೆನ್

Story first published: Friday, October 21, 2022, 20:44 [IST]
Other articles published on Oct 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+