Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್: ಆಸ್ಟ್ರೇಲಿಯಾಗೆ ಆಘಾತ ನೀಡುತ್ತಾ ಶ್ರೀಲಂಕಾ?: ಕುತೂಹಲ ಮೂಡಿಸಿದೆ ಕದನ

t20 World cup, Australia vs Sri Lanka: match preview, match timings, ans probable XI

ಟಿ20 ವಿಶ್ವಕಪ್‌ನಲ್ಲಿ ಇಂದು ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿದೆ. ಮಂಗಳವಾರ ನಡೆಯುತ್ತಿರುವ ಏಕೈಕ ಪಂದ್ಯ ಇದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಹಾಲಿ ಚಾಂಪಿಯನ್ ಹಾಗೂ ಆತಿಥೇಯ ತಂಡವಾಗಿರುವ ಆಸ್ಟ್ರೇಲಿಯಾ ಮೊದಲ ಪಂದ್ಯದಲ್ಲಿಯೇ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ.

ಇತ್ತ ಶ್ರೀಲಂಕಾ ತಂಡ ಅರ್ಹತಾ ಸುತ್ತಿನಿಂದ ಗೆದ್ದು ಸೂಪರ್ 12ಗೆ ಪ್ರವೇಶಿಸಿದೆ. ಈ ಮಹತ್ವದ ಘಟ್ಟದಲ್ಲಿ ಮೊದಲ ಪಂದ್ಯವನ್ನು ಐರ್ಲೆಂಡ್ ತಂಡದ ವಿರುದ್ಧ ಶ್ರೀಲಂಕಾ ಆಡಿದ್ದು ಈ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಈ ಮೂಲಕ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೂ ಆಘಾತ ನೀಡುವ ಆತ್ಮವಿಶ್ವಾಸ ಗಳಿಸಿಕೊಂಡಿದ್ದು ಈ ಪ್ರಯತ್ನದಲ್ಲಿ ಲಂಕಾ ಪಡೆ ಎಷ್ಟರ ಮಟ್ಟಿಗೆ ಯಶಸ್ಸು ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಆಸ್ಟ್ರೇಲಿಯಾ vs ಶ್ರೀಲಂಕಾ ಹೆಡ್ ಟು ಹೆಡ್: ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳು ಟಿ20 ಮಾದರಿಯಲ್ಲಿ ಈವರೆಗೆ 25 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಆಸ್ಟ್ರೇಲಿಯಾ ತಂಡ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಮೇಲುಗೈ ಸಾಧಿಸಿದ್ದರೆ ಶ್ರೀಲಂಕಾ ತಂಡ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈಗ ಈ ಎರಡು ತಂಡಗಳ ನಡುವೆ ಸಾಕಷ್ಟು ಪೈಪೋಟಿಯ ಪಂದ್ಯವನ್ನು ನಿರೀಕ್ಷಿಸಲಾಗುತ್ತಿದೆ. ಮಂಗಳವಾರ ಪರ್ತ್ ಕ್ರೀಡಾಂಗಣದಲ್ಲಿ ಈ ತಂಡಗಳು ಮುಖಾಮುಖಿಯಾಗುತ್ತಿದೆ.

ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಶ್ರೀಲಂಕಾ ಸಂಭಾವ್ಯ ಆಡುವ ಬಳಗ: ಕುಸಾಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅಶೆನ್ ಬಂಡಾರ, ಭಾನುಕಾ ರಾಜಪಕ್ಸೆ, ದಾಸುನ್ ಶನಕ (ನಾಯಕ, ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಲಹಿರು ಕುಮಾರ, ಬಿನೂರ ಫೆರ್ನಾಂಡೋ

ಪಂದ್ಯದ ಸಮಯ ಹಾಗೂ ನೇರಪ್ರಸಾರ ಮಾಹಿತಿ: ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಸೂಪರ್ 12 ಹಂತದ ಪಂದ್ಯ ಮಂಗಳವಾರ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 4:30ಕ್ಕೆ ಈ ಪಂದ್ಯ ಆಯೋಜನೆಯಾಗಲಿದ್ದು 4 ಗಂಟೆಯ ವೇಳೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಶ್ರೀಲಮಕಾ ಸಂಪೂರ್ಣ ಸ್ಕ್ವಾಡ್ ಹೀಗಿದೆ: ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅಶೆನ್ ಬಂಡಾರ, ಭಾನುಕಾ ರಾಜಪಕ್ಸೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಬಿನೂರ ಫೆರ್ನಾಂಡೋ, ಲಹಿರು ಕುಮಾರ, ಜೆಫ್ರಿ ವಾಂಡರ್ಸೆ, ಕಸುನ್ ರಜಿತಾ, ಪ್ರಮೋದ್ ಮದುಶನ್, ಪಾತುಮ್ ನಿಸ್ಸಾಂಕ

ಆಸ್ಟ್ರೇಲಿಯಾ ಸಂಪೂರ್ಣ ಸ್ಕ್ವಾಡ್ ಹೀಗಿದೆ: ಆರೋನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್, ಸ್ಟೀವನ್ ಸ್ಮಿತ್, ಆಷ್ಟನ್ ಅಗರ್, ಕ್ಯಾಮರೂನ್ ಗ್ರೀನ್, ಕೇನ್ ರಿಚರ್ಡ್ಸನ್

Story first published: Tuesday, October 25, 2022, 12:51 [IST]
Other articles published on Oct 25, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+