T20 World Cup: ಭಾರತದ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ

ಭಾರತದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ.
ವೆಸ್ಟರ್ನ್ ಆಸ್ಟ್ರೇಲಿಯಾ XI ವಿರುದ್ಧ ರೋಹಿತ್ ಶರ್ಮಾ ಬಳಗ ಎರಡು ಅನಧಿಕೃತ ಅಭ್ಯಾಸ ಪಂದ್ಯಗಳನ್ನು ಆಡಿದರು, ಒಂದನ್ನು ಗೆದ್ದರು ಮತ್ತು ಇನ್ನೊಂದರಲ್ಲಿ ಸೋತರು. ಮತ್ತೊಂದೆಡೆ ಆಸ್ಟ್ರೇಲಿಯಾ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಕಳೆದುಕೊಂಡಿದೆ. ಎರಡೂ ತಂಡಗಳೂ ಕೂಡ ಈ ಪಂದ್ಯದಲ್ಲಿ ಗೆಲವು ಸಾಧಿಸಲು ನೋಡುತ್ತಿವೆ. ಟೂರ್ನಿಯ ಆರಂಭಕ್ಕೆ ಎರಡೂ ತಂಡಗಳು ತಮ್ಮ ಆಡುವ ಬಳಗವನ್ನು ಅಂತಿಮಗೊಳಿಸಲು, ಈ ಪಂದ್ಯ ಪರೀಕ್ಷೆಯಾಗಲಿದೆ.
ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದೆ. ಡೇವಿಡ್ ವಾರ್ನರ್, ಆಡಮ್ ಝಂಪಾ, ಮ್ಯಾಥ್ಯೂ ವೇಡ್, ಜೋಶ್ ಹೇಜಲ್‌ವುಡ್ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ.
ಇನ್ನು ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಹರ್ಷಲ್ ಪಟೇಲ್ ಮತ್ತು ಚಹಾಲ್‌ರನ್ನು ಆಡುವ ಬಳಗದಿಂದ ಕೈಬಿಡಲಾಗಿದೆ.

ಗಬ್ಬಾದಲ್ಲಿ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇಲ್ಲ. ಆದರೆ, ಮೋಡ ಕವಿದ ವಾತಾವರಣವಿರುತ್ತದೆ. ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಪಿಚ್ ಸಹಕಾರಿಯಾಗಿರುತ್ತದೆ. ಹೆಚ್ಚಿನ ವೇಗ ಮತ್ತು ಬೌನ್ಸ್ ದೊರೆಯುವ ಸಾಧ್ಯತೆ ಇದೆ. ಮೊದಲು ಬ್ಯಾಟಿಂಗ್ ಮಾಡುವ ತಂಡದ ಸರಾಸರಿ ಸ್ಕೋರ್ 170 ಆಗಿದೆ.
ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಣೆ ಮಾಡಬಹುದು. ಡಿಸ್ನಿ ಹಾಟ್ ಸ್ಟಾರ್ ಕೂಡ ಡಿಜಿಟಲ್ ವೇದಿಕೆಯಲ್ಲಿ ಈ ಪಂದ್ಯವನ್ನು ಪ್ರಸಾರ ಮಾಡಲಿದೆ.
ಉಭಯ ತಂಡಗಳ ಆಡುವ ಬಳಗ
ಭಾರತ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಪಂತ್, ದಿನೇಶ್ ಕಾರ್ತಿಕ್, ಅಶ್ವಿನ್, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ : ಆರನ್ ಫಿಂಚ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್ , ಟಿಮ್ ಡೇವಿಡ್, ಆಶ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್‌ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications