ಗುರುವಾರ, ಜೂನ್ 6ರಂದು ಡಲ್ಲಾಸ್‌ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ನ ಯುಎಸ್ಎ ವಿರುದ್ಧ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಬೃಹತ್ ದಾಖಲೆ ನಿರ್ಮಿಸಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಬಾಬರ್ ಅಜಂ ಮತ್ತು ಶಾದಾಬ್ ಖಾನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ, ಯುಎಸ್ಎ ತಂಡಕ್ಕೆ 160 ರನ್‌ಗಳ ಗುರಿ ನೀಡಿತು.

ಯುಎಸ್ಎ ವಿರುದ್ಧದ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ತಮ್ಮ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಈ ದಾಖಲೆಯನ್ನು ನಿರ್ಮಿಸಿದ್ದಾರೆ.

ಬಾಬರ್ ಅಜಂ 113 ಇನ್ನಿಂಗ್ಸ್‌ಗಳಲ್ಲಿ 41.25ರ ಸರಾಸರಿ ಮತ್ತು 129.58ರ ಸ್ಟ್ರೈಕ್ ರೇಟ್‌ನಲ್ಲಿ 4043 ರನ್ ಗಳಿಸಿದ್ದಾರೆ. ಇದರಲ್ಲಿ ಬಲಗೈ ಬ್ಯಾಟರ್ 3 ಶತಕ ಮತ್ತು 36 ಅರ್ಧಶತಕಗಳನ್ನು ಬಾರಿಸಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ಆಡಿದ 110 ಇನ್ನಿಂಗ್ಸ್‌ಗಳಲ್ಲಿ 51.11ರ ಸರಾಸರಿ ಮತ್ತು 137.95ರ ಸ್ಟ್ರೈಕ್ ರೇಟ್‌ನಲ್ಲಿ 4038 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 1 ಶತಕ ಮತ್ತು 37 ಅರ್ಧಶತಕಗಳನ್ನು ಸಿಡಿಸಿದ್ದಾರೆ.
ಮತ್ತೊಂದೆಡೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಆಡಿದ 144 ಇನ್ನಿಂಗ್ಸ್‌ಗಳಿಂದ 4026 ರನ್‌ಗಳೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ರೋಹಿತ್ ಶರ್ಮಾ 32.20ರ ಸರಾಸರಿ ಮತ್ತು 139.98ರ ಸ್ಟ್ರೈಕ್ ರೇಟ್‌ನಲ್ಲಿ 4000ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಇದೇ ವೇಳೆ 5 ಶತಕ ಹಾಗೂ 30 ಅರ್ಧಶತಕ ಬಾರಿಸಿದ್ದಾರೆ.
ಇನ್ನು 2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧದ ಭಾರತ ತಂಡದ ಆರಂಭಿಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಔಟಾದರು. ಮತ್ತೊಂದೆಡೆ, ರೋಹಿತ್ ಶರ್ಮಾ ತಮ್ಮ ತಂಡದ 8 ವಿಕೆಟ್ ಗೆಲುವಿನಲ್ಲಿ 52 ರನ್‌ಗಳೊಂದಿಗೆ ಫಾರ್ಮ್‌ಗೆ ಮರಳಿದರು.