For Quick Alerts
ALLOW NOTIFICATIONS  
For Daily Alerts
 

T20 World Cup: ಜೋಸ್ ಇಂಗ್ಲಿಸ್ ಬದಲಿಗೆ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಬ್ಬ ಸ್ಫೋಟಕ ಆಟಗಾರ ಸೇರ್ಪಡೆ

T20 World Cup: Cameron Green Replaces Injured Injured Josh Inglis In Australias 15-Man Squad

ಟಿ20 ವಿಶ್ವಕಪ್ ಆಸ್ಟ್ರೇಲಿಯಾ 15 ಮಂದಿಯ ತಂಡಕ್ಕೆ ಸ್ಫೋಟಕ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಸೇರ್ಪಡೆಯಾಗಿದ್ದಾರೆ. ಜೋಸ್ ಇಂಗ್ಲಿಸ್ ಗಾಯಗೊಂಡು ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಳಿಕ ಅವರ ಸ್ಥಾನಕ್ಕೆ ಗ್ರೀನ್ ಅವರನ್ನು ಹೆಸರಿಸಲಾಗಿದೆ.

ಭಾರತದ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಆಟಗಾರ ಕ್ಯಾಮರೂನ್ ಗ್ರೀನ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಮ್ಯಾಥ್ಯೂ ವೇಡ್‌ಗೆ ಬ್ಯಾಕ್‌ಅಪ್ ವಿಕೆಟ್‌ಕೀಪರ್ ಇಲ್ಲದೆ ಆಸ್ಟ್ರೇಲಿಯಾ ವಿಶ್ವಕಪ್‌ನಲ್ಲಿ ಆಡಲಿದೆ. ಆಸ್ಟ್ರೇಲಿಯ ತನ್ನ ಆರಂಭಿಕ ಪಂದ್ಯವನ್ನು ಶನಿವಾರ ಸಿಡ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

ಇಂಗ್ಲಿಸ್ ಸಿಡ್ನಿಯಲ್ಲಿನ ಗಾಲ್ಫ್ ಕೋರ್ಸ್‌ನಲ್ಲಿ ಕೈಗೆ ಗಾಯ ಮಾಡಿಕೊಂಡರು, ನಂತರ ಸ್ಥಳೀಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದರು. ಈಗ ಅವರು ತಮ್ಮ ಗಾಯಕ್ಕೆ ಶಸ್ತ್ರಚಿಕಿತ್ಸೆಯನ್ನು ಪಡೆಯುವ ಅಗತ್ಯವಿದೆ. ಅವರ ಬದಲಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿಯನ್ನು ಆಯ್ಕೆ ಮಾಡುವ ನಿರೀಕ್ಷೆ ಇತ್ತು. ಆದರೆ, ಕ್ಯಾಮರೂನ್ ಗ್ರೀನ್‌ರ ಆಲ್‌ರೌಂಡರ್ ಆಟವನ್ನು ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಗಿದೆ. ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಇಬ್ಬರು ಬೌಲಿಂಗ್ ಆಲ್-ರೌಂಡರ್‌ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

T20 World Cup: Cameron Green Replaces Injured Injured Josh Inglis In Australias 15-Man Squad

ಭಾರತದ ವಿರುದ್ಧ ಅತ್ಯುತ್ತಮ ಪ್ರದರ್ಶನ

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆತನನ್ನು ಸೇರಿಸಿಕೊಳ್ಳಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು ಒತ್ತಾಯಿಸಿದ್ದರು. ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮಿನ್ಸ್ ಕೂಡ ಗ್ರೀನ್ ಆಟವನ್ನು ಶ್ಲಾಘಿಸಿದ್ದರು. ಆದರೆ, ಆಸ್ಟ್ರೇಲಿಯಾದಲ್ಲಿ ನಡೆದ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಅವರು ವಿಫಲರಾಗಿದ್ದರು.

ಭಾರತದ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾ ಹಿರಿಯ ಆಟಗಾರ ಡೇವಿಡ್ ವಾರ್ನರ್ ಅನುಪಸ್ಥಿತಿಯಲ್ಲಿ ನಾಯಕ ಆರೊನ್ ಫಿಂಚ್ ಜೊತೆ ಇನ್ನಿಂಗ್ಸ್ ಆರಂಭಿಸಿದ 23 ವರ್ಷದ ಕ್ಯಾಮರೂನ್ ಗ್ರೀನ್ ಸ್ಟಾರ್ ಆಟಗಾರನಾಗಿ ಹೊರ ಹೊಮ್ಮಿದ್ದರು. ಸರಣಿಯ ಮೊದಲನೇ ಪಂದ್ಯದಲ್ಲೇ 30 ಎಸೆತಗಳಲ್ಲಿ 61 ರನ್ ಗಳಿಸಿ ಮಿಂಚಿದರು. ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 209 ರನ್‌ಗಳನ್ನು ಯಶಸ್ವಿಯಾಗಿ ಚೇಸ್ ಮಾಡಿ ಪಂದ್ಯವನ್ನು ಗೆದ್ದಿತ್ತು.

ನಂತರ ಸರಣಿಯ ಮೂರನೇ ಪಂದ್ಯದಲ್ಲಿ ಭಾರತದ ಬೌಲರ್ ಗಳನ್ನು ಕಾಡಿದ ಗ್ರೀನ್ ಭಾರತದ ವಿರುದ್ಧ ವೇಗವಾದ ಅರ್ಧಶತಕ ದಾಖಲಿಸಿದರು. 19 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು ಅಂತಿಮವಾಗಿ 21 ಬಾಲ್‌ಗಳಲ್ಲಿ 52 ರನ್ ಗಳಿಸಿದರು.

T20 World Cup: Cameron Green Replaces Injured Injured Josh Inglis In Australias 15-Man Squad

ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ

ಆರನ್ ಫಿಂಚ್ (ನಾಯಕ), ಆಶ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಕ್ಯಾಮರೂನ್ ಗ್ರೀನ್ .

Story first published: Thursday, October 20, 2022, 15:52 [IST]
Other articles published on Oct 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+