ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಟೀಮ್ ಇಂಡಿಯಾ ಆಟಗಾರರಿಗೆ ಹೆಚ್ಚಿನ ಸಿದ್ಧತೆಯ ಅವಶ್ಯಕತೆಯಿಲ್ಲ: ರವಿ ಶಾಸ್ತ್ರಿ

t20 world cup: Dont need too much preparation, Coach Ravi Shastri ahaed of t20 world cup

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಈಗಾಗಲೇ ಒಂದು ಅಭ್ಯಾಸ ಪಂದ್ಯವನ್ನು ಆಡಿದ್ದು ಬುಧವಾರ ಎರಡನೇ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಮೂಲಕ ಟಿ20 ವಿಶ್ವಕಪ್‌ಗೆ ಸಿದ್ಧತೆಯನ್ನು ಮಾಡಿಕೊಳ್ಳಲಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಕೋಚ್ ರವಿ ಶಾಸ್ತ್ರಿ ಟೀಮ್ ಇಂಡಿಯಾ ಆಟಗಾರರ ಸಿದ್ಧತೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಟೀಮ್ ಇಂಡಿಯಾದ ಆಟಗಾರರು ಐಪಿಎಲ್‌ನಲ್ಲಿ ತೊಡಗಿಸಿಕೊಂಡಿದ್ದ ಕಾರಣ ಅವರಿಗೆ ಹೆಚ್ಚಿನ ಸಿದ್ಧತೆಯ ಅವಶ್ಯಕತೆಯಿಲ್ಲ ಎಂದಿದ್ದಾರೆ ಕೋಚ್ ರವಿ ಶಾಸ್ತ್ರಿ.

ಟಿ20 ವಿಶ್ವಕಪ್: ರಾಹುಲ್, ಇಶಾನ್ ಕಿಶನ್ ಅಬ್ಬರ; ಅಭ್ಯಾಸ ಪಂದ್ಯದಲ್ಲಿ ಆಂಗ್ಲರಿಗೆ ಸೋಲುಣಿಸಿದ ಭಾರತಟಿ20 ವಿಶ್ವಕಪ್: ರಾಹುಲ್, ಇಶಾನ್ ಕಿಶನ್ ಅಬ್ಬರ; ಅಭ್ಯಾಸ ಪಂದ್ಯದಲ್ಲಿ ಆಂಗ್ಲರಿಗೆ ಸೋಲುಣಿಸಿದ ಭಾರತ

ಮೊದಲ ಅಭ್ಯಾಸ ಪಂದ್ಯದ ಸಂದರ್ಭದಲ್ಲಿ ಪಂದ್ಯದ ಅಧಿಕೃತ ನೇರಪ್ರಸಾರಕರಾದ ಸ್ಟಾರ್‌ಸ್ಟೋರ್ಟ್ಸ್ ಜೊತೆಗೆ ರವಿ ಶಾಸ್ತ್ರಿ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ರಣತಂತ್ರಗಳ ವಿಚಾರವಾಗಿ, ಟಾಸ್ ಅಥವಾ ತಂಡದ ಸದಸ್ಯರ ಆಯ್ಕೆಯಲ್ಲಿ ಯಾವುದೇ ಸಿದ್ಧ ರಣತಂತ್ರಗಳನ್ನು ಮಾಡಿಕೊಂಡಿಲ್ಲ. ಈ ನಿರ್ಧಾರಗಳು ಪಿಚ್‌ನ ಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದಿದ್ದಾರೆ ರವಿ ಶಾಸ್ತ್ರಿ.

ಕಳೆದ 2 ತಿಂಗಳುಗಳಿಂದ ನಮ್ಮ ಆಟಗಾರರು ಐಪಿಎಲ್‌ನಲ್ಲಿ ಸಕ್ರಿಯವಾಗಿದ್ದು ಆಟವಾಡಿದ್ದಾರೆ. ಹಾಗಾಗಿ ಅವರಿಗೆ ಹೆಚ್ಚು ತಯಾರಿ ಬೇಕು ಎಂದು ನನಗೆ ಅನಿಸುವುದಿಲ್ಲ. ಈ ಸಂದರ್ಭದಲ್ಲಿ ಅವರೆಲ್ಲಾ ತಮಡವಾಗಿ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಪ್ರಮುಖವಾಗುತ್ತದೆ. ಅದರ ಕಡೆಗೆ ನಾವು ಹೆಚ್ಚಿನ ಗಮನ ನೀಡಿದ್ದೇವೆ ಎಂದು ಕೋಚ್ ರವಿ ಶಾಸ್ತ್ರಿ ಪ್ರತಿಕ್ರಿಯೆ ನೀಡಿದ್ದಾರೆ.

ಟಿ20 ವಿಶ್ವಕಪ್‌: ಕಾರಣ ತಿಳಿಸಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವ ನಿರ್ಧಾರದಿಂದ ಹಿಂದೆ ಸರಿದ ಕೊಹ್ಲಿ!ಟಿ20 ವಿಶ್ವಕಪ್‌: ಕಾರಣ ತಿಳಿಸಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವ ನಿರ್ಧಾರದಿಂದ ಹಿಂದೆ ಸರಿದ ಕೊಹ್ಲಿ!

ಈ ಅಭ್ಯಾಸ ಪಂದ್ಯದ ಮೂಲಕ ಆಟಗಾರರು ತಮ್ಮ ಲಯವನ್ನು ಕಂಡುಕೊಳ್ಳಲು ಸಹಾಯವಾಗುತ್ತದೆ. ಇದರೊಂದಿಗೆ ಅವರು ಶಕ್ತಿಯನ್ನು ಗಳಿಸಬಹುದಾಗಿದೆ. ಅಭ್ಯಾಸ ಪಂದ್ಯವಾಗಿರುವ ಕಾರಣ ಇಲ್ಲಿ ಎಲ್ಲರೂ ಬ್ಯಾಟಿಂಗ್ ಮಾಡಬಹುದಾಗಿದೆ ಹಾಗೂ ಬೌಲಿಂಗ್ ಕೂಡ ಮಾಡಬಹುದಾಗಿದೆ. ಇದರಿಮದಾಗಿ ಯಾರು ಯಾವ ರೀತಿಯಲ್ಲಿ ಪ್ರದರ್ಶನ ನಿಡುತ್ತಿದ್ದಾರೆ ಎಂಬುದನ್ನು ಅರಿತುಕೊಳ್ಳಲು ನಮಗೆ ಕೂಡ ಇದು ಸಹಾಯವಾಗುತ್ತದೆ. ಆದರೆ ಇದರಿಂದಾಗಿ ಯಾವುದೇ ರಣತಂತ್ರಗಳನ್ನು ನಾವು ಮಾಡಿಕೊಳ್ಳುವುದಿಲ್ಲ ಎಂದು ರವಿ ಶಾಸ್ತ್ರಿ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಯೋಜನೆಗಳು ಹೇಗೆ ಕಾರ್ಯನಿರ್ವಹಿಸುತ್ತದೆ, ತಂಡದ ಸಂಯೋಜನೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳುತ್ತೇವೆ ಎಂದು ರವಿ ಶಾಸ್ತ್ರಿ ಹೇಳಿದ್ದಾರೆ. ಇನ್ನು ಟಾಸ್ ನಿರ್ಧಾರಕ್ಕೆ ಸಂಬಂಧಪಟ್ಟಂತೆ ಮೈದಾನದ ಮೇಲೆ ಇಬ್ಬನಿಯ ಪ್ರಮಾಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಮೊದಲು ಬ್ಯಾಟಿಂಗ್ ನಡೆಸಬೇಕೋ ಅಥವಾ ಬೌಲಿಂಗ್ ನಡೆಸಬೇಕೋ ಎಂಬುದನ್ನು ನಿರ್ಧಾರ ಮಾಡುತ್ತೇವೆ ಎಂದು ರವಿ ಶಾಸ್ತ್ರಿ. ಅಲ್ಲದೆ ಇದನ್ನು ಮಾನದಂಡವಾಗಿಟ್ಟುಕೊಮಡು ನಾವು ಹೆಚ್ಚುವರು ಸ್ಪಿನ್ನರ್‌ನನ್ನು ಕಣಕ್ಕಿಳಿಸಬೇಕೋ ಅಥವಾ ವೇಗಿಯನ್ನು ಕಣಕ್ಕಿಳಿಸಬೇಕೋ ಎಂಬುದನ್ನು ನಿರ್ಧರಿಸುತ್ತೇವೆ ಎಂದು ಟೀಮ್ ಇಂಡಿಯಾದ ಕೋಚ್ ರವಿ ಶಾಸ್ತ್ರಿ ಹೇಳಿಕೆ ನೀಡಿದ್ದಾರೆ.

ಟಿ20 ವಿಶ್ವಕಪ್: ಪಾರ್ಥೀವ್ ಪಟೇಲ್ ಹೆಸರಿಸಿದ ಟೀಮ್ ಇಂಡಿಯಾದ ಪ್ಲೇಯಿಂಗ್ XIಟಿ20 ವಿಶ್ವಕಪ್: ಪಾರ್ಥೀವ್ ಪಟೇಲ್ ಹೆಸರಿಸಿದ ಟೀಮ್ ಇಂಡಿಯಾದ ಪ್ಲೇಯಿಂಗ್ XI

ಟಿ20 ವಿಶ್ವಕಪ್‌ನಲ್ಲಿ ಭಾರತದ ಸ್ಕ್ವಾಡ್ ಹೀಗಿದೆ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ ಮೀಸಲು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್

Story first published: Wednesday, October 20, 2021, 10:21 [IST]
Other articles published on Oct 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X