T20 World Cup: ನ್ಯೂಜಿಲೆಂಡ್ ಮಣಿಸಿದ ಇಂಗ್ಲೆಂಡ್, ಆಸ್ಟ್ರೇಲಿಯಾ ಸೆಮಿಫೈನಲ್ ಹಾದಿ ಕಠಿಣ

ಸೆಮಿಫೈನಲ್ ತಲುಪಲು ಗೆಲುವು ಸಾಧಿಸಲೇಬೇಕಾದ ಪಂದ್ಯದಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ 20 ರನ್‌ಗಳ ಜಯ ಸಾಧಿಸಿದೆ. ಇಂಗ್ಲೆಂಡ್ ಗೆಲುವಿನ ಮೂಲಕ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸುವುದು ಮತ್ತಷ್ಟು ಕಠಿಣವಾಗಿದ್ದು. ನ್ಯೂಜಿಲೆಂಡ್ ಕೂಡ ಮುಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಇಂಗ್ಲೆಂಡ್ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನ್ಯೂಜಿಲೆಂಡ್ ಬ್ಯಾಟರ್ ಗಳನ್ನು ಕಾಡಿದರು.
ಕ್ರಿಸ್ ವೋಕ್ಸ್ 4 ಓವರ್ ಗಳಲ್ಲಿ 33 ರನ್ ನೀಡಿ 2 ವಿಕೆಟ್ ಪಡೆದರು. ಸ್ಯಾಮ್ ಕರಾನ್ 4 ಓವರ್ ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರೆ, ಮಾರ್ಕ್ ವುಡ್ ಮತ್ತು ಬೆನ್ ಸ್ಟೋಕ್ಸ್ ತಲಾ ಒಂದು ವಿಕೆಟ್ ಪಡೆದರು. ನ್ಯೂಜಿಲೆಂಡ್ ಪರವಾಗಿ ಗ್ಲೆನ್ ಫಿಲಿಪ್ಸ್ ಮಾತ್ರ 36 ಎಸೆತಗಳಲ್ಲಿ 62 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು.

ಅರ್ಧಶತಕ ಗಳಿಸಿದ ಬಟ್ಲರ್, ಅಲೆಕ್ಸ್ ಹೇಲ್ಸ್
ಮೊದಲು ಬ್ಯಾಟಿಂಗ್ ಆರಂಭಿಸಿ ಇಂಗ್ಲೆಂಡ್ ತಂಡಕ್ಕೆ ನಾಯಕ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಉತ್ತಮ ಆರಂಭವನ್ನೇ ಒದಗಿಸಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ರನ್ ಗಳಿಸಲು ಆರಂಭಿಸಿದ ಈ ಜೋಡಿ ನಂತರ ಬೌಂಡರಿ ಗಳಿಸಲು ಆರಂಭಿಸಿದರು.
ಅಲೆಕ್ಸ್ ಹೇಲ್ಸ್ 40 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್ ಸಹಿತ 52 ರನ್ ಗಳಿಸಿದರು. ನಾಯಕ ಜೋಸ್ ಬಟ್ಲರ್ 47 ಎಸೆತಗಳಲ್ಲಿ 73 ರನ್ ಗಳಿಸಿ ಸ್ಫೋಟಕ ಆಟವಾಡಿದರು. 7 ಬೌಂಡರಿ, 2 ಸಿಕ್ಸರ್ ಸಿಡಿಸುವ ರನ್ ಗಳಿಸುವ ವೇಗವನ್ನು ಹೆಚ್ಚಿಸಿದರು. ಲಿಯಾಮ್ ಲಿವಿಂಗ್ ಸ್ಟೋನ್ 14 ಎಸೆತಗಳಲ್ಲಿ 20 ರನ್ ಗಳಿಸಿದರು. ನ್ಯೂಜಿಲೆಂಡ್ ಪರವಾಗಿ ಲಾಕಿ ಫರ್ಗ್ಯೂಸನ್ 4 ಓವರ್ ಗಳಲ್ಲಿ 45 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಟಿಮ್ ಸೌಥೀ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ ತಲಾ ಒಂದು ವಿಕೆಟ್ ಪಡೆದರು.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋಲಲು ಈ ಆಟಗಾರ ಕಾರಣ ಎಂದ ಗವಾಸ್ಕರ್

ಗ್ಲೆನ್ ಫಿಲಿಪ್ಸ್ ಹೋರಾಟ ವ್ಯರ್ಥ
180 ರನ್‌ಗಳ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಫಿನ್ ಅಲೆನ್ 11 ಎಸೆತಗಳಲ್ಲಿ 16 ರನ್ ಗಳಿಸಿ ಔಟಾದರು. ಡಿವೋನ್ ಕಾನ್ವೆ 9 ಎಸೆತಗಳಲ್ಲಿ 3 ರನ್ ಗಳಿಸಿ ನಿರಾಸೆ ಅನುಭವಿಸಿದರು. ನಾಯಕ ಕೇನ್ ವಿಲಿಯಮ್ಸನ್ ನಿಧಾನಗತಿಯ ಆಟ ನ್ಯೂಜಿಲೆಂಡ್ ಫಲಿತಾಂಶದ ಮೇಲೆ ಪರಿಣಾಮ ಬೀರಿತು.
ಗ್ಲೆನ್ ಫಿಲಿಪ್ಸ್ ವೇಗವಾಗಿ ರನ್ ಗಳಿಸುತ್ತಿದ್ದರೆ ಮತ್ತೊಂದೆಡೆ ಕೇನ್ ವಿಲಿಯಮ್ಸನ್ ನಿಧಾನ ಗತಿಯ ಬ್ಯಾಟಿಂಗ್ ನಡೆಸಿದರು. 40 ಎಸೆತಗಳಲ್ಲಿ ಕೇವಲ 3 ಬೌಂಡರಿ ಮೂಲಕ 40 ರನ್ ಗಳಿಸಿ ಔಟಾದರು. ಮತ್ತೊಂದೆಡೆ ಏಕಾಂಗಿ ಹೋರಾಟ ನಡೆಸಿದ ಗ್ಲೆನ್ ಫಿಲಿಪ್ಸ್ 36 ಎಸೆತಗಳಲ್ಲಿ 62 ರನ್ ಗಳಿಸಿ ಔಟಾದರು.

ಇಂಗ್ಲೆಂಡ್, ನ್ಯೂಜಿಲೆಂಡ್ ಪ್ಲೇಯಿಂಗ್ XI
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ನ್ಯೂಜಿಲೆಂಡ್: ಫಿನ್ ಅಲನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications