Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ENG Vs NZ : ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್

T20 World Cup: England Have Won The Toss And Have Opted To Bat Against New Zealand

ಟಿ20 ವಿಶ್ವಕಪ್‌ 2022ರ ಸೂಪರ್ 12 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ, ಕೊನೆಯ ಪಂದ್ಯದಲ್ಲಿ ಆಡಿದ ತಂಡವನ್ನೇ ಉಳಿಸಿಕೊಂಡಿವೆ.

ನ್ಯೂಜಿಲೆಂಡ್ ಇದುವರೆಗೂ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಗಳಿಸಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಒಟ್ಟು 5 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ನ್ಯೂಜಿಲೆಂಡ್ ಚಾಂಪಿಯನ್ನರಾದ ಆಸ್ಟ್ರೇಲಿಯಾ ತಂಡವನ್ನು ಮೊದಲನೇ ಪಂದ್ಯದಲ್ಲಿ ಸೋಲಿಸುವ ಮೂಲಕ ಭರ್ಜರಿ ಆರಂಭವನ್ನು ಪಡೆದಿತ್ತು. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಯಿತು. ನಂತರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಇಂಗ್ಲೆಂಡ್ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಉತ್ತಮ ಆರಂಭವನ್ನು ಹೊಂದಿತ್ತು. ಆದರೆ, ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಡಿಎಲ್‌ಎಸ್‌ ನಿಯಮದ ಪ್ರಕಾರ 5 ರನ್‌ಗಳಿಂದ ಸೋಲನುಭವಿಸುವ ಮೂಲಕ ಆಘಾತ ಅನುಭವಿಸಿತು. ಮಳೆಯಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ರದ್ದಾಯಿತು. ಇಂಗ್ಲೆಂಡ್ ತಂಡ ಸೆಮಿಫೈನಲ್ ತಲುಪಬೇಕಾದರೆ ಅವರಿಗೆ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವುದು ಮುಖ್ಯವಾಗಿದೆ. ಸ್ಫೋಟಕ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಇಂಗ್ಲೆಂಡ್ ನ್ಯೂಜಿಲೆಂಡ್ ಬೌಲಿಂಗ್ ಎದುರಿಸುವುದು ದೊಡ್ಡ ಸವಾಲಾಗಿದೆ.

ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ ಸೆಮಿಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದ್ದು, ಪಂದ್ಯದಲ್ಲಿ ಗೆಲುವು ಸಾಧಿಸಲು ರಣ ತಂತ್ರ ರೂಪಿಸಿದೆ. ಫಿನ್ ಅಲೆನ್, ಗ್ಲೆನ್ ಫಿಲಿಪ್, ಡಿವೋನ್ ಕಾನ್ವೆ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅದರಲ್ಲೂ ಅವರ ವೇಗದ ಬೌಲಿಂಗ್ ಎದುರಾಳಿಗಳಿಗೆ ಮಾರಕವಾಗಿದೆ.

ಉಭಯ ತಂಡಗಳ ಆಡುವ ಬಳಗ

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

ನ್ಯೂಜಿಲೆಂಡ್: ಫಿನ್ ಅಲನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್

Story first published: Tuesday, November 1, 2022, 13:20 [IST]
Other articles published on Nov 1, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+