ಇಂಗ್ಲೆಂಡ್ vs ಐರ್ಲೆಂಡ್: ನೆರೆಹೊರೆಯವರ ಕಾದಾಟದಲ್ಲಿ ಗೆಲ್ಲೋರು ಯಾರು? ಸಂಭಾವ್ಯ ಆಡುವ ಬಳಗ

ಟಿ20 ವಿಶ್ವಕಪ್‌ನಲ್ಲಿ ಬುಧವಾರ ಎರಡು ಪಂದ್ಯಗಳು ನಡೆಯಲಿದೆ. ಮೆಲ್ಬರ್ನ್‌ನ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು ಕುತೂಹಲ ಮೂಡಿಸಿದೆ. ಇಂಗ್ಲೆಂಡ್ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಸೋಲುಣಿಸಿ ಆತ್ಮವಿಶ್ವಾಸದಲ್ಲಿ ಕಾಣಿಸುತ್ತಿದ್ದರೆ ಐರ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿ ಹಿನ್ನಡೆ ಅನುಭವಿಸಿದೆ.

ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡಕ್ಕೆ ಸಾಕಷ್ಟು ಗಾಯದ ಸಮಸ್ಯೆಗಳು ಕಾಡುತ್ತಿದ್ದರೂ ತಂಡ ಬಲಿಷ್ಠವಾಗಿಯೇ ಕಾಣಿಸುತ್ತಿದೆ. ಹೀಗಾಗಿ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಇಂಗ್ಲೆಂಡ್ ಕೂಡ ಒಂದಾಗಿದೆ. ಮತ್ತೊಂದೆಡೆ ಐರ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದರೂ ತಂಡದಲ್ಲಿ ಹಲವು ಸ್ಪೋಟಕ ಆಟಗಾರರು ಇದ್ದಾರೆ ಎಂಬುದು ಹಮನಾರ್ಹ ಸಂಗತಿ. ಐರ್ಲೆಂಡ್ ಅನೇಕ ಸಂದರ್ಭಗಳಲ್ಲಿ ದೊಡ್ಡ ತಂಡಗಳಿಗೆ ಆಘಾತ ನೀಡಿರುವ ಉದಾಹರಣೆಯಿದ್ದು ಮತ್ತೊಂದು ಅಂಥಾದ್ದೇ ಪ್ರದರ್ಶನದ ನಿರೀಕ್ಷೆಯಲ್ಲಿದೆ.

ಪಿಚ್ ರಿಪೋರ್ಟ್: ಮೆಲ್ಬರ್ನ್ ಕ್ರಿಕೆಟ್ ಮೈದಾನದ ಪಿಚ್ ಸಮತೋಲಿತ ಪಿಚ್ ಆಗಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಕ್ಕೂ ಉತ್ತಮ ನೆರವು ನೀಡುವಂತಾ ಪಿಚ್ ಎನಿಸಿಕೊಂಡಿದೆ. ಆರಂಭಿಕ ಹಂತದಲ್ಲಿ ಬ್ಯಾಟರ್‌ಗಳಿಗೆ ಕಠಿಣವೆನಿಸಿದರೂ ನಂತರ ಸರಾಗವಾಗಿ ಬ್ಯಾಟಿಂಗ್ ನಡೆಸುವ ಅವಕಾಶ ದೊರೆಯಲಿದೆ.

IND vs PAK: ಸಚಿನ್ ಮಾತ್ರವಲ್ಲ, ಕೋಚ್ ದ್ರಾವಿಡ್ ದಾಖಲೆಯನ್ನೂ ಪುಡಿಪುಡಿ ಮಾಡಿದ ವಿರಾಟ್ ಕೊಹ್ಲಿIND vs PAK: ಸಚಿನ್ ಮಾತ್ರವಲ್ಲ, ಕೋಚ್ ದ್ರಾವಿಡ್ ದಾಖಲೆಯನ್ನೂ ಪುಡಿಪುಡಿ ಮಾಡಿದ ವಿರಾಟ್ ಕೊಹ್ಲಿ

ಹವಾಮಾನ ವರದಿ: ಹವಾಮಾನ ವರದಿಯ ಪ್ರಕಾರ ಬುಧವಾರ ಮೆಲ್ಬರ್ನ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಅಭಿಮಾನಿಗಳು ಸಂಪೂರ್ಣ ಪಂದ್ಯಕ್ಕೆ ಮಳೆ ಅಡ್ಡಿಯಾಗದಿರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ: ಇಂಗ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ನಡುವಿನ ಈ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ. ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಹಾಟ್‌ಸ್ಟಾರ್‌ನಲ್ಲಿ ಪಂದ್ಯ ನೇರಪ್ರಸಾರವಾಗಲಿದೆ.

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ವೆಸ್ಟ್ ಇಂಡೀಸ್: ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಫಿಲ್ ಸೈಮನ್ಸ್ಟಿ20 ವಿಶ್ವಕಪ್‌ನಿಂದ ಹೊರಬಿದ್ದ ವೆಸ್ಟ್ ಇಂಡೀಸ್: ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಫಿಲ್ ಸೈಮನ್ಸ್

ಐರ್ಲೆಂಡ್ ಸಂಭಾವ್ಯ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಸಿಮಿ ಸಿಂಗ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, October 25, 2022, 17:24 [IST]
Other articles published on Oct 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X