
ಟಿ20 ವಿಶ್ವಕಪ್‌ನಲ್ಲಿ ಬುಧವಾರ ಸೆಮಿಫೈನಲ್‌ನ ಮೊದಲ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದೆ. ಎರಡು ಬಲಿಷ್ಠ ತಂಡಗಳು ಕೂಡ ಫೈನಲ್ ಹಂತಕ್ಕೇರಿ ಪ್ರಶಸ್ತಿಗಾಗಿ ಕಾದಾಡಲು ಸೆಮಿಫೈನಲ್ ಹೋರಾಟದಲ್ಲಿ ಶಕ್ತಿ ಮೀರಿ ಪ್ರಯತ್ನಿಸಲಿದೆ. ಅದ್ಭುತ ಪ್ರದರ್ಶನ ನೀಡಿ ಆತ್ಮ ವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ವಿರುದ್ಧವೂ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿದೆ. ಆದರೆ ನ್ಯೂಜಿಲೆಂಡ್ ಇಂಗ್ಲೆಂಡ್‌ಗೆ ಪ್ರತಿತಂತ್ರವನ್ನು ಹೆಣೆದಿದ್ದು ಬುಧವಾರದ ಪಂದ್ಯದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಗ್ರೂಫ್ 1ರಲ್ಲಿ ಇಂಗ್ಲೆಂಡ್ ತಂಡ ಆಡಿದ ಐದು ಪಂದ್ಯಗಳ ಪೈಕಿ ಒಂದು ಸೋಲು ಅನುಭವಿಸಿ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿತ್ತು. ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಗ್ರೂಫ್ 2ಲ್ಲಿ ಆಡಿದ ಐದು ಪಂದ್ಯಗಳಲ್ಲಿ ಒಂದು ಸೋಲು ಅನುಭವಿಸಿತ್ತು. ಆದರೆ ಎರಡನೇ ತಂಡವಾಗಿ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಹೀಗಾಗಿ ಈ ಎರಡು ತಂಡಗಳು ಈ ನಾಕೌಟ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿದೆ.
ಪಂದ್ಯದ ಮಾಹಿತಿ:
ಸೆಮಿಫೈನಲ್-1
ಇಂಗ್ಲೆಂಡ್ vs ನ್ಯೂಜಿಲೆಂಡ್,
ಸ್ಥಳ: ಶೇಕ್ ಝಾಯೇದ್ ಸ್ಟೇಡಿಯಮ್, ಅಬುಧಾಬಿ
ಸಮಯ: ನವೆಂಬರ್ 10, ಭಾರತೀಯ ಕಾಲಮಾನ, ಸಂಜೆ 7:30ಕ್ಕೆ ಆರಂಭ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಡಿಸ್ನಿ ಹಾಟ್ ಸ್ಟಾರ್
ಪಿಚ್ ರಿಪೋರ್ಟ್: ಅಬುದಾಭಿ ಪಿಚ್ ಹೆಚ್ಚಿನ ಸಂದರ್ಭದಲ್ಲಿ ವೇಗದ ಬೌಲರ್‌ಗಳಿಗೆ ನೆರವು ನೀಡಿದೆ. ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರಬೇಕಾದರೆ ಆರಂದಲ್ಲಿ ಕೆಲ ಕಾಲ ಎಚ್ಚರಿಕೆಯಿಂದ ಆಡುವುದು ಅಗತ್ಯ. ಪಿಚ್‌ನಲ್ಲಿ ನೆಲೆಯೂರಿದ ನಂತರ ಬ್ಯಾಟಿಂಗ್‌ನ ವೇಗವನ್ನು ಹೆಚ್ಚಿಸಿಕೊಳ್ಳಬಹುದು. ಇಬ್ಬನಿ ಆಟದ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರಲಿದೆ. ಹೀಗಾಗಿ ಟಾಸ್ ಗೆದ್ದ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ನಿಶ್ಚಿತ.
ಸಂಭಾವ್ಯ ತಂಡ ಇಂಗ್ಲೆಂಡ್: ಜೇಮ್ಸ್ ವಿನ್ಸ್/ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಟಾಮ್ ಕರನ್/ಮಾರ್ಕ್ ವುಡ್
ಸಂಭಾವ್ಯ ತಂಡ ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್