ENG Vs NZ : ಕಿವೀಸ್ ಪಡೆಗೆ ಆಂಗ್ಲರ ಸವಾಲು, ಗೆದ್ದರೆ ಮಾತ್ರ ಇಂಗ್ಲೆಂಡ್‌ಗೆ ಮುಂದಿನ ಹಾದಿ ಸುಲಭ

ಟಿ20 ವಿಶ್ವಕಪ್ 2022ರ ಸೂಪರ್ 12 ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ನ್ಯೂಜಿಲೆಂಡ್ ಇದುವರೆಗೂ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಗಳಿಸಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಒಟ್ಟು 5 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಅದರಲ್ಲೂ ನ್ಯೂಜಿಲೆಂಡ್ ಚಾಂಪಿಯನ್ನರಾದ ಆಸ್ಟ್ರೇಲಿಯಾ ತಂಡವನ್ನು ಮೊದಲನೇ ಪಂದ್ಯದಲ್ಲಿ ಸೋಲಿಸುವ ಮೂಲಕ ಭರ್ಜರಿ ಆರಂಭವನ್ನು ಪಡೆದಿತ್ತು. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಯಿತು. ನಂತರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
ಇಂಗ್ಲೆಂಡ್ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಉತ್ತಮ ಆರಂಭವನ್ನು ಹೊಂದಿತ್ತು. ಆದರೆ, ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಡಿಎಲ್‌ಎಸ್ ನಿಯಮದ ಪ್ರಕಾರ 5 ರನ್‌ಗಳಿಂದ ಸೋಲನುಭವಿಸುವ ಮೂಲಕ ಆಘಾತ ಅನುಭವಿಸಿತು. ಮಳೆಯಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ರದ್ದಾಯಿತು. ಇಂಗ್ಲೆಂಡ್ ತಂಡ ಸೆಮಿಫೈನಲ್ ತಲುಪಬೇಕಾದರೆ ಅವರಿಗೆ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವುದು ಮುಖ್ಯವಾಗಿದೆ.
ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ ಸೆಮಿಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದ್ದು, ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತದೆ.

ಅದ್ಭುತ ಫಾರ್ಮ್‌ನಲ್ಲಿರುವ ನ್ಯೂಜಿಲೆಂಡ್
ವಿಶ್ವಕಪ್‌ನಲ್ಲಿ ಜೀವಂತವಾಗಿರಲು ಇಂಗ್ಲೆಂಡ್ ಈ ಪಂದ್ಯವನ್ನು ಗೆಲ್ಲಲೇಬೇಕು. ನ್ಯೂಜಿಲೆಂಡ್ ಉತ್ತಮ ಫಾರ್ಮ್‌ನಲ್ಲಿದ್ದು, ಅವರ ವಿರುದ್ಧ ಗೆಲುವು ಸಾಧಿಸುವುದು ಸುಲಭವಲ್ಲ. ಈ ಬಾರಿಯ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅದ್ಭುತ ಪ್ರದರ್ಶನ ನೀಡಿದೆ. ವಿಶ್ವಕಪ್‌ಗೆ ಮೊದಲು, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 100 ಕ್ಕಿಂತ ಕಡಿಮೆ ರನ್‌ಗಳಿಗೆ ಆಲೌಟ್ ಆಯಿತು. ನಂತರ ಪಾಕಿಸ್ತಾನದ ವಿರುದ್ಧ ತವರಿನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಸೋತರು. ಆದರೆ, ವಿಶ್ವಕಪ್ ಆರಂಭವಾದ ನಂತರ ಅವರು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲಾ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಈ ವಿಶ್ವಕಪ್‌ನಲ್ಲಿ ಅವರು ಅದ್ಭುತವಾಗಿ ಬೌಲಿಂಗ್ ಮಾಡಿದ್ದಾರೆ. ಫಿನ್ ಅಲೆನ್, ಗ್ಲೆನ್ ಫಿಲಿಪ್, ಡಿವೋನ್ ಕಾನ್ವೆ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅದರಲ್ಲೂ ಅವರ ವೇಗದ ಬೌಲಿಂಗ್ ಎದುರಾಳಿಗಳಿಗೆ ಮಾರಕವಾಗಿದೆ.

ಸಂಭಾವ್ಯ ಆಡುವ ಬಳಗ
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ನ್ಯೂಜಿಲೆಂಡ್: ಫಿನ್ ಅಲನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications