Ind Vs Pak: ಕೆಎಲ್ ರಾಹುಲ್, ರೋಹಿತ್ ಶರ್ಮಾಗೆ ಎಚ್ಚರಿಕೆಯಿಂದ ಇರಿ ಎಂದ ಆಸ್ಟ್ರೇಲಿಯಾ ಮಾಜಿ ಕ್ರಿಕೆಟರ್

ಟಿ20 ವಿಶ್ವಕಪ್‌ನಲ್ಲಿ ಸೂಪರ್ 12 ಹಂತದ ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಟಾಮ್ ಮೂಡಿ ಭಾರತದ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್‌ಗೆ ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನದ ಶಾಹೀನ್ ಅಫ್ರಿದಿ ಯಾರ್ಕರ್ ಎಸೆಯುವ ಮೂಲಕ ಅಫ್ಘಾನಿಸ್ತಾನ ಬ್ಯಾಟರ್ ರಹಮನುಲ್ಲಾ ಗುರ್ಬಾಜ್ ಅವರನ್ನು ಔಟ್ ಮಾಡಿದ್ದರು. ಶಾಹಿನ್ ಅಫ್ರಿದಿ ಯಾರ್ಕರ್ ಗೆ ಗುರ್ಬಾಜ್ ಕಾಲಿಗೆ ಪೆಟ್ಟಾಗಿತ್ತು. ಈ ಪಂದ್ಯದಲ್ಲಿ ಶಾಹೀನ್ ಶಾ ಅಫ್ರಿದಿ ಎರಡು ವಿಕೆಟ್ ಪಡೆದು ಮಿಂಚಿದ್ದರು.
ಕಳೆದ ವರ್ಷ ಟಿ 20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಭರ್ಜರಿ ಪ್ರದರ್ಶನ ನೀಡಿದ್ದರು. ಭಾರತದ ಅಗ್ರ ಕ್ರಮಾಂಕದ ಬ್ಯಾಟರ್ ಗಳಾದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದರು. ಈ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್‌ಗಳ ಜಯ ಸಾಧಿಸಿತ್ತು.

ಕೆಎಲ್ ರಾಹುಲ್, ರೋಹಿತ್ ಶರ್ಮಾಗೆ ಎಚ್ಚರಿಕೆ
ಟಿ20 ವಿಶ್ವಕಪ್‌ನ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಬೌಲಿಂಗ್ ಬಗ್ಗೆ ಭಾರತದ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಎಚ್ಚರಿಕೆಯಿಂದ ಇರಬೇಕು ಎಂದು ಟಾಮ್ ಮೂಡಿ ಅಭಿಪ್ರಾಯಪಟ್ಟಿದ್ದಾರೆ.
ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ತಾವು ಫಾರ್ಮ್‌ನಲ್ಲಿರುವ ಬಗ್ಗೆ ಸೂಚನೆ ನೀಡಿದ್ದಾರೆ. ಭಾರತದ ಆರಂಭಿಕರು ಎಡಗೈ ವೇಗಿ ವಿರುದ್ಧ ಎಚ್ಚರಿಕೆಯಿಂದ ಬ್ಯಾಟ್ ಮಾಡಬೇಕು, ಇಲ್ಲವಾದಲ್ಲಿ ವಿಕೆಟ್ ಕಳೆದುಕೊಳ್ಳುವ ಅಪಾಯವಿದೆ ಎಂದು ಹೇಳಿದ್ದಾರೆ.
ನಮೀಬಿಯಾ ಟಿ20 ವಿಶ್ವಕಪ್ ಕನಸನ್ನ ನುಚ್ಚು ನೂರು ಮಾಡಿದ UAE: 7 ರನ್‌ಗಳಿಂದ UAE ಗೆಲುವು

ಸಂಪೂರ್ಣ ಫಿಟ್ ಆಗಿರುವ ಶಾಹೀನ್ ಅಫ್ರಿದಿ
ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಶಾಹೀನ್ ಶಾ ಅಫ್ರಿದಿ ಮೊಣಕಾಲಿನ ಗಾಯಕ್ಕೆ ಒಳಗಾದರು. ಅದಾದ ನಂತರ ಕ್ರಿಕೆಟ್‌ನಿಂದ ದೂರವುಳಿದಿದ್ದ ಅವರು ಲಂಡನ್‌ನಲ್ಲಿ ಗಾಯಕ್ಕೆ ಚಿಕಿತ್ಸೆ ಪಡೆದರು.
ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಏಷ್ಯಾಕಪ್‌ನಲ್ಲೂ ಶಾಹೀನ್ ಅಫ್ರಿದಿ ಭಾಗವಹಿಸಲಿಲ್ಲ. ಅದಾದ ನಂತರ ಲಂಡನ್‌ನಲ್ಲಿ ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ನೇರವಾಗಿ ಬ್ರಿಸ್ಬೇನ್‌ನಲ್ಲಿ ರಾಷ್ಟ್ರೀಯ ತಂಡವನ್ನು ಸೇರಿಕೊಂಡರು. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅವರ ಯಾರ್ಕರ್ ಎಸೆತಗಳು ಕರಾರುವಕ್ಕಾಗಿದ್ದವು. ಅವರು ಎಷ್ಟು ಫಿಟ್ ಆಗಿದ್ದಾರೆ ಎನ್ನುವುದನ್ನು ಆ ಪಂದ್ಯದಲ್ಲಿ ಸಾಬೀತುಪಡಿಸಿದರು.

ಉಭಯ ತಂಡಗಳ ವಿವರ
ಭಾರತ : ರೊಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್ , ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಶಮಿ.
ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಹೈದರ್ ಅಲಿ, ಶಾನ್ ಮಸೂದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್, ಫಖರ್ ಜಮಾನ್, ಶಾಹೀನ್ ಶಾ ಅಫ್ರಿದಿ, ಫಖಾರ್ ಜಮಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications