ಟಿ20 ವಿಶ್ವಕಪ್: ರೋಹಿತ್ ಶರ್ಮಾ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದ ಇಂಗ್ಲೆಂಡ್ ಕ್ರಿಕೆಟಿಗ

ಚುಟುಕು ಕ್ರಿಕೆಟ್‌ನ ಮಹಾಸಮರಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಎಲ್ಲಾ ತಂಡಗಳು ಕೂಡ ಅಂತಿಮ ಹಂತದ ಸಿದ್ಧತೆಯನ್ನು ನಡೆಸುತ್ತಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಯಾವ ತಂಡ ಅದ್ಭುತ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬುದು ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಸದ್ಯದ ಕುತೂಹಲವಾಗಿದೆ. ಈ ಮಹತ್ವದ ಟೂರ್ನಿಯಲ್ಲಿ ತಮ್ಮ ತಂಡವನ್ನು ಗೆಲ್ಲಿಸಲೇಬೇಕೆಂದು ಎಲ್ಲಾ ತಂಡಗಳ ಪ್ರತಿಯೊಬ್ಬ ಆಟಗಾರರು ಕೂಡ ಭಾರೀ ತಯಾರಿಯನ್ನು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಗ್ರೇಮ್ ಸ್ವಾಮ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವಕಪ್‌ಗೆ ಮುನ್ನ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ನಡೆದ ಸರಣಿಯಲ್ಲಿ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಮ್ಮ ಲಯವನ್ನು ಕಂಡುಕೊಂಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ನೆಲದಲ್ಲಿ ರೋಹಿತ್ ಪ್ರದರ್ಶನ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದ್ದೇ ಇದೆ.

ಭಾರತ ತಮ್ಮ ಹೊಸ ಜಹೀರ್ ಖಾನ್ ಅನ್ನು ಕಂಡುಕೊಂಡಿದೆ; ಈ ಬೌಲರ್ ಬಗ್ಗೆ ಪಾಕ್ ಮಾಜಿ ಕ್ರಿಕೆಟಿಗಭಾರತ ತಮ್ಮ ಹೊಸ ಜಹೀರ್ ಖಾನ್ ಅನ್ನು ಕಂಡುಕೊಂಡಿದೆ; ಈ ಬೌಲರ್ ಬಗ್ಗೆ ಪಾಕ್ ಮಾಜಿ ಕ್ರಿಕೆಟಿಗ

ಭವಿಷ್ಯ ನುಡಿದ ಗ್ರೇಮ್ ಸ್ವಾನ್

ಭವಿಷ್ಯ ನುಡಿದ ಗ್ರೇಮ್ ಸ್ವಾನ್

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಖಂಡಿತವಾಗಿಯೂ ಒಂದು ಶತಕವನ್ನು ಭಾರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅನೇಕ ದಾಖಲೆ ಹೊಂದಿರುವ ರೋಹಿತ್ ಶರ್ಮಾ ಚುಟುಕು ಮಾದರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಲ್ಕು ಶತಕ ಬಾರಿಸಿರುವ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಆರೆ ಕಳೆದ ನಾಲ್ಕು ವರ್ಷಗಳಲ್ಲಿ ರೋಹಿತ್ ಶರ್ಮಾ ಬ್ಯಾಟ್‌ನಿಂದ ಚುಟುಕು ಮಾದರಿಯಲ್ಲಿ ಶತಕ ಬಂದಿಲ್ಲ. ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ ರೋಹಿತ್ ಶತಕ ಬಾರಿಸುವ ವಿಶ್ವಾಸವನ್ನು ಗ್ರೇಮ್ ಸ್ವಾನ್ ವ್ಯಕ್ತಪಡಿಸಿದ್ದಾರೆ.

"ಶತಕ ಬಾರಿಸಲಿದ್ದಾರೆ ರೋಹಿತ್"

ಖಾಸಗಿ ಸುದ್ದಿ ವಾಹಿನಿ ಜೊತೆಗೆ ಗ್ರೇಮ್ ಸ್ವಾನ್ ಪ್ರತಿಕ್ರಿಯಿಸಿದ್ದು ಈ ಸಂದರ್ಭದಲ್ಲಿ ರೋಹಿತ್ ವಿಚಾರವಾಗಿ ವಿಶ್ವಾಸದ ಮಾತುಗಳನ್ನಾಡಿದ್ದಾರೆ. "ಈ ಬಾರಿಯ ವಿಶ್ವಕಪ್‌ನಲ್ಲಿ ಶತಕ ಬಾರಿಸುವ ಆಟಗಾರರಲ್ಲಿ ರೋಹಿತ್ ಶರ್ಮಾ ಕೂಡ ಖಂಡಿತವಾಗಿಯೂ ಇರಲಿದ್ದಾರೆ. ನನಗೆ ಅದರ ಬಗ್ಗೆ ಯಾವುದೇ ಅನುಮಾನಗಳೂ ಇಲ್ಲ. ನನಗೆ ರೋಹಿತ್ ಬಗ್ಗೆ ಯಾವುದೇ ಆತಂಕವೂ ಇಲ್ಲ. ತಂಡವನ್ನು ಮು್ನನಡೆಸಲು ಅವರು ಅತ್ಯಂತ ಸೂಕ್ತ ಆಟಗಾರನಾಗಿದ್ದಾರೆ. ಅವರ ಅತ್ಯುತ್ತಮ ಫಾರ್ಮ್‌ನಲ್ಲಿ ಇಲ್ಲದಿದ್ದರೂ ಭಾರತ ತಂಡ ಅತ್ಯುತ್ತಮವಾಗಿ ರನ್‌ಗಳಿಸುತ್ತಿದೆ" ಎಂದಿದ್ದಾರೆ ಗ್ರೇಮ್ ಸ್ವಾನ್.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮುನ್ನಡೆಸುತ್ತಿರುವ ರೋಹಿತ್

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮುನ್ನಡೆಸುತ್ತಿರುವ ರೋಹಿತ್

ಸದ್ಯ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ನಡೆಯುತ್ತಿದ್ದು ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡುವ ಮೂಲಕ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎರಡನೇ ಪಂದ್ಯ ಭಾನುವಾರ ನಡೆಯಲಿದ್ದು ಈ ಪಂದ್ಯ ಗುವಾಹಟಿಯಲ್ಲಿ ಆಯೋಜನೆಯಾಗಲಿದೆ. ಈ ಸರಣಿಯ ಬಳಿಕ ವಿಶ್ವಕಪ್‌ನಲ್ಲಿ ಭಾಗಿಯಾಗಲಿರುವ ಭಾರತ ತಂಡ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದು ವಿಶ್ವಕಪ್‌ನ ಆರಂಭಕ್ಕೂ ಮುನ್ನ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿರುವ ಭಾರತ ತಂಡ

ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿರುವ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬೂಮ್ರಾ(ಗಾಯಗೊಂಡಿದ್ದು ಲಭ್ಯತೆ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ), ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

For Quick Alerts
ALLOW NOTIFICATIONS
For Daily Alerts
Story first published: Saturday, October 1, 2022, 15:22 [IST]
Other articles published on Oct 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X