ಟಿ20 ವಿಶ್ವಕಪ್: ತನ್ನ ದಾಖಲೆ ಮುರಿದ ವಿರಾಟ್ ಕೊಹ್ಲಿಗೆ ಶುಭ ಹಾರೈಸಿದ ಜಯವರ್ದನೆ

ಟೀಮ್ ಇಂಡಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ಅಬ್ಬರದ ಪ್ರದರ್ಶನ ನಿಡಿ ಮಿಂಚುತ್ತಿದ್ದಾರೆ. ಆಡಿದ ನಾಲ್ಕು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಮೂರು ಬಾರಿ ಅಜೇಯ ಅರ್ಧ ಶತಕ ದಾಖಲಿಸಿರುವುದು ಕೊಹ್ಲಿ ಪ್ರಚಂಡ ಫಾರ್ಮ್‌ಗೆ ಸಾಕ್ಷಿಯಾಗಿದೆ. ಈ ಪ್ರದರ್ಶನದ ಜೊತೆಗೆ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಶ್ರೀಲಂಕಾದ ದಿಗ್ಗಜ ಆಟಗಾರ ಮಹೇಲ ಜಯವರ್ದನೆ ಹೆಸರಿನಲ್ಲಿದ್ದ ಈ ದಾಖಲೆಯನ್ನು ಮುರಿದ ಕೊಹ್ಲಿ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ಜಯವರ್ದನೆ ದಾಖಲೆ ಮುರಿದ ಬಳಿಕ ಸ್ತಃ ಜಯವರ್ದನೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ವಿರಾಟ್ ಕೊಹ್ಲಿಗೆ ಶುಭ ಹಾರೈಸಿದ್ದಾರೆ. "ದಾಖಲೆಗಳು ಇರುವುದೇ ಮುರಿಯುವುದಕ್ಕೆ. ನನ್ನ ದಾಖಲೆಯನ್ನು ಓರ್ವ ವ್ಯಕ್ತಿ ಯಾವಾಗಲೂ ಮುರಿಯುತ್ತಾ ಸಾಗುಯತ್ತಿದ್ದಾರೆ. ಅದು ವಿರಾಟ್ ನೀವೇ ಆಗಿದ್ದೀರಿ. ಅದ್ಭುತ ಗೆಳೆಯಾ. ಅಭಿನಂದನೆಗಳು. ನೀವು ಯಾವಾಗಲೂ ಸೇನಾನಿಯಂತೆ. ಫಾರ್ಮ್ ಎಂಬುದು ತಾತ್ಕಾಲಿಕ. ಆದರೆ ಕ್ಲಾಸ್ ಶಾಶ್ವತ. ಅದ್ಭುತ ಪ್ರದರ್ಶನ" ಎಂದು ಮಹೇಲ ಜಯವರ್ದನೆ ವಿರಾಟ್ ಕೊಹ್ಲಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಸೋತು ಆರಂಭದಲ್ಲಿ ಬ್ಯಾಟಿಂಗ್ ನಡೆಸಿತು. ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ ಹಾಗೂ ಸೂರ್ಯಕುಮಾರ್ ಯಾದವ್ ಅವರ ಸ್ಪೋಟಕ 30 ರನ್‌ಗಳ ಕೊಡುಗೆಯಿಂದಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 184 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಇದನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡಕ್ಕೆ ಅತ್ಯಂತ ಸ್ಪೋಟಕ ಆರಂಭ ದೊರೆಯಿತು. ಆರಂಭಿಕ ಆಟಗಾರ ಲಿಟನ್ ದಾಸ್ ಕೇವಲ 27 ಎಸೆತಗಳಲ್ಲಿ 60 ರನ್ ಬಾರಿಸಿ ತಂಡಕ್ಕೆ ಮೇಲುಗೈ ಒದಗಿಸಿದ್ದರು.
ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ಪಂದ್ಯವನ್ನು 16 ಓವರ್‌ಗಳಿಗೆ ಇಳಿಸಿದ್ದು ಡಕ್ವರ್ತ್ ಲೂಯೀಸ್ ನಿಯಮದ ಅನ್ವಯ ಬಾಂಗ್ಲಾದೇಶಕ್ಕೆ 150 ರನ್‌ಗಳನ್ನು ಗಳಿಸುವ ಗುರಿ ನಿಗದಿಯಾಗಿತ್ತು. ಆದರೆ ಮಳೆ ನಿಂತು ಪಂದ್ಯ ಪುನಾರಂಭವಾದ ಬಳಿಕ ಭಾರತ ಪಂದ್ಯದಲ್ಲಿ ಹಿಡಿತ ಸಾಧಿಸಲು ಯಶಸ್ವಿಯಾಯಿತು. ಅಂತಿಮವಾಗಿ ಭಾರತ ತಂಡ 5 ರನ್‌ಗಳ ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ದೀಪಕ್ ಹೂಡಾ
ಬಾಂಗ್ಲಾದೇಶ ಆಡುವ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ
ಬೆಂಚ್: ಮೆಹಿದಿ, ಎಹಮಿನ್‌ಬಾ ಹಸನ್, ಮಿಸ್ಸಾ ಮಿಸ್ , ಸೌಮ್ಯ ಸರ್ಕಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications