ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲುವಿಗೆ ಕಾರಣ ಹೇಳಿದ ಹರ್ಭಜನ್ ಸಿಂಗ್

T20 World Cup: Harbhajan Singh explain the reason for Pakistan win against New Zealand

ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ನ್ಯೂಜಿಲೆಂಡ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎಲ್ಲಾ ವಿಭಾಗಗಳಲ್ಲಿಯೂ ಅಮೋಘ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡಕ್ಕೆ ಯಾವ ಹಂತದಲ್ಲಿಯೂ ಅವಕಾಶವನ್ನೇ ನೀಡಲಿಲ್ಲ. ಈ ಮೂಲಕ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ ಬಾಬರ್ ಪಡೆ.

ಪಾಕಿಸ್ತಾನ ತಂಡ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲ್ಲಲು ಕಾರಣವಾದ ಅಂಶ ಯಾವುದು ಎಂಬುದನ್ನು ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಉಲ್ಲೇಖಿಸಿದ್ದಾರೆ. ಪಾಕಿಸ್ತಾನದ ಆಟಗಾರರು ಸಿಡ್ನಿಯ ಪಿಚ್ಚನ್ನು ನ್ಯೂಜಿಲೆಂಡ್ ಆಟಗಾರರಿಗಿಂತ ಉತ್ತಮವಾಗಿ ಅರ್ಥ ಮಾಡಿಕೊಂಡಿದ್ದರು. ಈ ಕಾರಣದಿಂದಾಗಿಯೇ ಪಾಕ್ ಪಡೆ ಈ ಪಂದ್ಯದಲ್ಲಿ ಯಶಸ್ಸು ಸಾಧ್ಯವಾಯಿತು ಎಂದಿದ್ದಾರೆ.

FIFA World Cup 2022: ನೇಮರ್ ನಾಯಕತ್ವದ 5 ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡ ಪ್ರಕಟFIFA World Cup 2022: ನೇಮರ್ ನಾಯಕತ್ವದ 5 ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡ ಪ್ರಕಟ

"ಅವರು ಇಂದಿನ ಪಿಚ್ ಬಗ್ಗೆ ಉತ್ಮವಾದ ಜ್ಞಾನ ಹೊಂದಿದ್ದರು. ಇಂಥಾ ಪಿಒಚ್‌ನಲ್ಲಿ ಯಾವ ಲೈನ್‌ನಲ್ಲಿ ಬೌಲಿಂಗ್ ದಾಳಿ ನಡೆಸಬೇಕು ಎಂಬ ಸ್ಪಷ್ಟ ಅರಿವು ಅವರಲ್ಲಿತ್ತು. ಶಾಹೀನ್ ಅಫ್ರದಿ ಮೊದಲ ಓವರನ್ನು ಅದ್ಭುತವಾಗಿ ಮಾಡುದ್ದರು. ಮೊದಲ ಓವರ್‌ನಲ್ಲಿಯೇ ವಿಕೆಟ್ ಪಡೆಯುವುದು ಅವರಿಗೆ ಅಭ್ಯಾಸವಾಗಿಬಿಟ್ಟಿದೆ. ಅದು ಎದುರಾಳಿ ತಮಡದ ರನ್‌ರೇಟ್ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತದೆ. ಮೂರು ವಿಕೆಟ್‌ಗಳನ್ನು ಆರಂಭದಲಲ್ಇಯೇ ಪಡೆಯಲು ಸಾಧ್ಯವಾಗಿದ್ದು ಪಾಕಿಸ್ತಾನ ಗೆಲುವು ಸಾಧಿಸಲು ಕಾರಣವಾದ ಮತ್ತೊಂದು ಪ್ರಮುಖ ಅಂಶ ಎಂದಿದ್ದಾರೆ ಹರ್ಭಜನ್ ಸಿಂಗ್.

ಇನ್ನು ನ್ಯೂಜಿಲೆಂಡ್ ವಿರುದ್ಧದ ಈ ಗೆಲುವಿನಿಂದಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಸಹಜವಾಗಿಯೇ ಹರ್ಷಗೊಂಡಿದ್ದಾರೆ. ಈ ಗೆಲುವಿನ ಬಳಿಕ ಮಾತನಾಡಿದ ಬಾಬರ್ ಅಜಂ ಸಿಡ್ನಿ ಸ್ಟೇಡಿಯಂನಲ್ಲಿ ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿದರು. ಸಿಡ್ನಿಯಲ್ಲಿ ನೆರೆದಿದ್ದ ಅಪಾರ ಪ್ರಮಾಣದ ಅಭಿಮಾನಿಗಳು ತಮಗೆ ತವರಿನಲ್ಲಿ ಆಡಿದ ಅನುಭವ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಬಾಬರ್ ಅಜಂ.

ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಪಾಕಿಸ್ತಾನ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಮೂರು ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಸಾಧಾರಣ ಮೊತ್ತಕ್ಕೆ ನ್ಯೂಜಿಲೆಂಡ್ ತಂಡವನ್ನು ಕಟ್ಟಿ ಹಾಕಿದ ಪಾಕಿಸ್ತಾನ ತಂಡ ಬಳಿಕ ರನ್ ಬೆನ್ನಟ್ಟುವಾದ ಆರಂಭಿಕರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಪಾಕ್ ಪಡೆ ಭರ್ಜರಿಯಾಗಿ ರನ್ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು.

ನ್ಯೂಜಿಲೆಂಡ್ ಆಡುವ ಬಳಗ : ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್

ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ

Story first published: Thursday, November 10, 2022, 5:30 [IST]
Other articles published on Nov 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X