ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌: ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡ್ತಾರಾ? ಬಿಸಿಸಿಐ ಮೂಲಗಳಿಂದ ಖಚಿತ ಮಾಹಿತಿ

T20 World Cup: Hardik Pandya wont Bowl in t20 world cup: confirmes BCCI official

ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸುದೀರ್ಘ ಕಾಲದಿಂದ ಬೌಲಿಂಗ್ ಮಾಡದೆ ಸ್ಪೆಶಲಿಸ್ಟ್ ಬ್ಯಾಟ್ಸ್‌ಮನ್ ಆಗಿ ತಂಡದಲ್ಲಿ ಮುಂದುವರಿದಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್‌ಗೆ ಮುನ್ನ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಸಮರ್ಥರಾಗಬಹುದು ಎಂಬ ವಿಶ್ವಾಸದ ಮಾತುಗಳು ವ್ಯಕ್ತವಾಗಿತ್ತು. ಆದರೆ ಈ ಬಾರೊಇಯ ಐಪಿಎಲ್‌ನಲ್ಲಿಯೂ ಹಾರ್ದಿಕ್ ಪಾಂಡ್ಯ ಒಂದೇ ಒಂದು ಓವರ್ ಬೌಲಿಂಗ್ ಮಾಡದಿರುವುದು ಟಿ20 ವಿಶ್ವಕಪ್‌ನಲ್ಲಿಯೂ ಹಾರ್ದಿಕ್ ಬೌಲಿಂಗ್ ನಡೆಸುವ ಬಗ್ಗೆ ಅನುಮಾನಗಳು ಏಳುವಂತೆ ಮಾಡಿತ್ತು.

ಇದೀಗ ಈ ಅನುಮಾನಗಳಿಗೆ ಸ್ಪಷ್ಟನೆ ದೊರೆತಿದೆ. ಟೀಮ್ ಇಂಡಿಯಾ ತಂಡದಲ್ಲಿ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ ಈ ಬಾರಿಯ ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡುವುದಿಲ್ಲ. ಬಿಸಿಸಿಐನ ವೈದ್ಯಕೀಯ ಸಿಬ್ಬಂದಿಗಳು ಮುಂಬೈ ಇಂಡಿಯನ್ಸ್ ವೈದ್ಯಕೀಯ ಸಿಬ್ಬಂದಿಗಳಿಂದ ಹಾರ್ದಿಕ್ ಪಾಂಡ್ಯ ಅವರ ವೈದ್ಯಕೀಯ ವರದಿಗಳನ್ನು ಪಡೆದುಕೊಂಡಿದ್ದಾರೆ. ಈ ವರದಿಯ ಪ್ರಕಾರ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ನಡೆಸುವುದು ಅಸಂಭವ ಎನ್ನಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಈತನೇ ಟೀಮ್ ಇಂಡಿಯಾಗೆ ಆಧಾರ: ಕನ್ನಡಿಗನ ಬಗ್ಗೆ ಬ್ರೇಟ್ ಲೀಗೆ ಭರವಸೆಟಿ20 ವಿಶ್ವಕಪ್‌ನಲ್ಲಿ ಈತನೇ ಟೀಮ್ ಇಂಡಿಯಾಗೆ ಆಧಾರ: ಕನ್ನಡಿಗನ ಬಗ್ಗೆ ಬ್ರೇಟ್ ಲೀಗೆ ಭರವಸೆ

ಟೀಮ್ ಇಂಡಿಯಾ ಸ್ಕ್ವಾಡ್ ಬದಲಾವಣೆಗೂ ಇದೆ ಕಾರಣ: ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾದ ಬಳಿಕವೇ ಬಿಸಿಸಿಐ ಟೀಮ್ ಇಂಡಿಯಾ ಸ್ಕ್ವಾಡ್‌ನಲ್ಲಿ ಬದಲಾವಣೆ ಮಾಡಿಕೊಳ್ಳಲು ಬಯಸಿತು ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಕಳೆದ ಬುಧವಾರ ಟೀಮ್ ಇಂಡಿಯಾದ ವಿಶ್ವಕಪ್‌ನ ತಂಡದಲ್ಲಿದ್ದ ಆಕ್ಷರ್ ಪಟೇಲ್ ಅವರನ್ನು ಮೀಸಲು ಆಟಗಾರನಾಗಿ ಸ್ಕ್ವಾಡ್‌ನಿಂದ ಹೊರಗಿಟ್ಟಿದ್ದು ಶಾರ್ದೂಲ್ ಠಾಕೂರ್ ಅವರನ್ನು 15 ಸದಸ್ಯರ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

"ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಆತ ಸಂಪೂರ್ಣ ಬ್ಯಾಟ್ಸ್‌ಮನ್ ಆಗಿ ವಿಶ್ವಕಪ್‌ನಲ್ಲಿ ಆಡಲಿದ್ದಾರೆ. ವಿಶ್ವಕಪ್‌ನ ಅಂತ್ಯದ ವೇಳೆಗಾಗುವಾಗ ಅವರು ಚೇತರಿಸಿಕೊಂಡು ಬೌಲಿಂಗ್ ಮಾಡಲೂ ಬಹುದು. ಆದರೆ ಈಗಿನ ಸ್ಥಿತಿಯಲ್ಲಿ ಅವರು ಬೌಲಿಂಗ್ ಮಾಡುವುದು ಅಸಾಧ್ಯ. ಅಕ್ಷರ್ ಪಟೇಲ್ ವಿಚಾರವಾಗಿ ನಮಗೆ ಬೇಸರವಿದೆ. ಆದರೆ ತಂಡದಲ್ಲಿ ಸಮತೋಲನ ಕಾಪಾಡಿಕೊಳ್ಳುವ ಸಲುವಾಗಿ ಶಾರ್ದೂಲ್‌ಗೆ ನಾವು ಮಣೆಹಾಕಬೇಕಾಯಿತು" ಎಂದು ಬಿಸಿಸಿಐನ ಅಧಿಕಾರಿಯೊಬ್ಬರ ಹೇಳಿಕೆಯನ್ನು ಇನ್‌ಸೈಡ್ ಸ್ಪೋರ್ಟ್ ಉಲ್ಲೇಖಿಸಿ ವರದಿ ಮಾಡಿದೆ.

ಐಪಿಎಲ್‌ 2021: ಕೆಟ್ಟ ದಾಖಲೆ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್ಐಪಿಎಲ್‌ 2021: ಕೆಟ್ಟ ದಾಖಲೆ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್

ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಆಡಲಿರುವ ಭಾರತ ತಂಡ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ರಾಹುಲ್ ಚಹಾರ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್, ಅಕ್ಷರ್ ಪಟೇಲ್

Story first published: Thursday, October 14, 2021, 22:32 [IST]
Other articles published on Oct 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X