ಈ ಆಟಗಾರನಿಗಿಂತ ಶಾರ್ದೂಲ್ ಠಾಕೂರ್ ಉತ್ತಮ: ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ನಿರ್ಣಾಯಿ ಕದನ ಇಂದು ನಡೆಯಲಿದೆ. ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ತಮ್ಮ ಆರಂಭದ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೋಲು ಕಂಡಿರುವ ಕಾರಣದಿಂದಾಗಿ ಈ ಟೂರ್ನಿಯಲ್ಲಿ ಮುಂದುವರಿಯಲು ಇಂದಿನ ಪಂದ್ಯದ ಗೆಲುವು ಮಹತ್ವದ್ದಾಗಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಶಾರ್ದೂಲ್ ಠಾಕೂರ್‌ಗೆ ಅವಕಾಶ ನೀಡುವುದು ಉತ್ತಮ ಎಂಬ ಅಭಿಪ್ರಾಯವನ್ನು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾ ಈ ಬಾರಿಯ ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಎಲ್ಲಾ ಬೌಲರ್‌ಗಳು ಕೂಡ ಸಂಒಪೂರ್ಣ ವೈಫಲ್ಯವನ್ನು ಅನುಭವಿಸಿದ್ದರು. ಅದರಲ್ಲೂ ಕಳೆದ ಕೆಲ ಕಾಲದಿಂದ ಕಳಪೆ ಫಾರ್ಮ್‌ನಲ್ಲಿರುವ ಭುವನೇಶ್ವರ್ ಕುಮಾರ್ ಅವರನ್ನು ಕಿವೀಸ್ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗಿಡುವುದು ಸೂಕ್ತ ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್. ಈ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಬೇಕೆಂಬುದು ಲಕ್ಷ್ಮಣ್ ಅಭಿಪ್ರಾಯವಾಗಿದೆ.

ಟಿ20 ವಿಶ್ವಕಪ್: ಅಫ್ಘಾನಿಸ್ತಾನ vs ನಮೀಬಿಯಾ ಸಂಭಾವ್ಯ ಆಡುವ ಬಳಗ, ಪಿಚ್ ವರದಿ, ನೇರಪ್ರಸಾರಟಿ20 ವಿಶ್ವಕಪ್: ಅಫ್ಘಾನಿಸ್ತಾನ vs ನಮೀಬಿಯಾ ಸಂಭಾವ್ಯ ಆಡುವ ಬಳಗ, ಪಿಚ್ ವರದಿ, ನೇರಪ್ರಸಾರ

ಸ್ಟಾರ್ ಸ್ಪೋರ್ಟ್ಸ್‌ನ 'ಗೇಮ್ ಪ್ಲಾನ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿವಿಎಸ್ ಲಕ್ಷ್ಮಣ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ನಾನುಈ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಆಡುವುದನ್ನು ಬಯಸುತ್ತೇನೆ. ಯಾಕೆಂದರೆ ಆತ ರನ್ ಕೂಡ ಬಾರಿಸಬಲ್ಲ ಹಾಗೂ ವಿಕೆಟ್ ಕೂಡ ತೆಗೆಯುವ ಸಾಮರ್ಥ್ಯಹೊಂದಿರುವ ಆಟಗಾರ. ಇದು ಭಾರತದ ಬ್ಯಾಟಿಂಗ್ ಲೈನ್‌ಅಪ್‌ಗೆ ಹೆಳಿನ ಬಲವನ್ನು ನೀಡುತ್ತದೆ. ಹಾಗಾಗಿ ಭುವನೇಶ್ವರ್ಕುಮಾರ್ ಅವರಿಗಿಂತ ಖಂಡಿತವಾಗಿಯೂ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಲು ಬಯಸುತ್ತೇನೆ ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್.

ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

ಭಯವನೇಶ್ವರ್ ಕುಮಾರ್ ಖಂಡಿತವಾಗಿಯೂ ಓರ್ವ ಅನುಭವಿ ಆಟಗಾರನಾಗಿದ್ದಾರೆ. ಆದರೆ ತಂಡದ ಸಮತೋಲನ ಹಾಗೂ ಆಡುವ 11ರ ಬಳಗದ ಸಂಯೋಜನೆ ಗಮನಿಸಿದರೆ ನನ್ನ ಪ್ರಕಾರ ಭುವನೇಶ್ವರ್‌ಗಿಂತ ಶಾರ್ದೂಲ್ ಠಾಕೂರ್ ಉತ್ತಮ ಆಯ್ಕೆಯಾಗುತ್ತಾರೆ ಎಂದು ಲಕ್ಷ್ಮಣ್ ವಿವರಿಸಿದ್ದಾರೆ.

ಶಾರ್ದೂಲ್ ಠಾಕೂರ್ ಇತ್ತೀಚೆಗಷ್ಟೇ ಅಂತ್ಯವಾದ ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದರು. ಬೌಲಿಂಗ್‌ನಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ವಿಕೆಟ್ ಕಬಳಿಸುವ ಶಾರ್ದೂಲ್ ಠಾಕೂರ್ ಸಿಎಸ್‌ಕೆ ತಂಡದ ಯಶಸ್ಸಿಗೆ ಉತ್ತಮ ಕೊಡುಗೆ ನೀಡಿದ್ದರು. ಅಲ್ಲದೆ ಬ್ಯಾಟಿಂಗ್‌ನಲ್ಲಿಯೂ ಸ್ಪೋಟಕವಾಗಿ ಆಟಬಲ್ಲ ಸಾಮರ್ಥ್ಯ ಶಾರ್ದೂಲ್ ಠಾಕೂರ್‌ಗೆ ಇದೆ. ಮತ್ತೊಂದೆಡೆ ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದರು. ಸನ್‌ರೈಸರ್ಸ್ ಹೈದರಾಬಾದ್ ಪರವಾಗಿ ಕಣಕ್ಕಿಳಿದಿದ್ದ ಭುವಿ ಬೌಲಿಂಗ್ ಭಾರೀ ನಿರಾಸೆ ಮೂಡಿಸಿತ್ತು.

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!

ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್ , ರಾಹುಲ್ ಚಹಾರ್

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಟಾಡ್ ಆಸ್ಟಲ್, ಮಾರ್ಕ್ ಚಾಪ್ಮನ್

For Quick Alerts
ALLOW NOTIFICATIONS
For Daily Alerts
Story first published: Sunday, October 31, 2021, 16:01 [IST]
Other articles published on Oct 31, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X