ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

T20 WC 2022 Final : ಪಾಕಿಸ್ತಾನ vs ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅಂಪೈರ್‌ಗಳನ್ನು ಘೋಷಿಸಿದ ಐಸಿಸಿ

T20 world cup: ICC announces match officials for Final match between England and Pakistan

ಟಿ20 ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ನಡೆಯಲಿದ್ದು ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಈ ಸೆಣೆಸಾಟ ನಡೆಯಲಿದೆ. ಚಾಂಪಿಯನ್ ಪಟ್ಟಕ್ಕಾಗಿ ನಡೆಯುವ ಈ ಕಾದಾಟ ಸಾಕಷ್ಟು ಕುತೂಹಲಕಾರಿಯಾಗಿದ್ದು ಯಾವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಮಹತ್ವದ ಪಂದ್ಯಕ್ಕೆ ಐಸಿಸಿ ಈಗ ಅಂಫೈರ್‌ಗಳನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌(ಎಂಸಿಜಿ)ಯಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕೆ ಖ್ಯಾತ ಅಂಪೈರ್‌ಗಳಾ್ ಮರೈಸ್ ಎರಾಸ್ಮಸ್ ಮತ್ತು ಕುಮಾರ್ ಧರ್ಮಸೇನಾ ಅವರು ಆನ್ ಫೀಲ್ಡ್ ಅಂಪೈರ್‌ಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇನ್ನು ಕ್ರಿಸ್ ಗಫಾನಿ ಪಂದ್ಯದ ಟಿವಿ ಅಂಪೈರ್ ಆಗಿದ್ದರೆ, ಪಾಲ್ ರೀಫೆಲ್ ನಾಲ್ಕನೇ ಅಂಪೈರ್ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಬಿಗ್‌ಬ್ಯಾಷ್‌ನಲ್ಲಿ ಆಡಿದ್ದು ಆಂಗ್ಲರಿಗೆ ಅನುಕೂಲವಾಯಿತು, ಬಿಸಿಸಿಐ ಈ ಬಗ್ಗೆ ಯೋಚಿಸಲಿ ಎಂದ ದ್ರಾವಿಡ್ಬಿಗ್‌ಬ್ಯಾಷ್‌ನಲ್ಲಿ ಆಡಿದ್ದು ಆಂಗ್ಲರಿಗೆ ಅನುಕೂಲವಾಯಿತು, ಬಿಸಿಸಿಐ ಈ ಬಗ್ಗೆ ಯೋಚಿಸಲಿ ಎಂದ ದ್ರಾವಿಡ್

ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಇಂಗ್ಲೆಂಡ್ ತಂಡ ಉತ್ತಮ ಫಾರ್ಮ್‌ನಲ್ಲಿದ್ದು ಎರಡನೇ ಬಾರಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಸೆಮಿಫೈನಲ್‌ನಲ್ಲಿ ಭಾರತ ತಂಡದ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಇಂಗ್ಲೆಂಡ್ ಭಾರತ ತಂಡ ಸ್ಪೋಟಕ ಪ್ರದರ್ಶನ ನೀಡಿ ಭಾರತವನ್ನು 10 ವಿಕೆಟ್‌ಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಪಾಕಿಸ್ತಾನದ ವಿರುದ್ಧದ ಫೈನಲ್ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ಆತ್ಮವಿಶ್ವಾದಲ್ಲಿದೆ ಇಂಗ್ಲೆಂಡ್ ಪಡೆ.

ಮತ್ತೊಂದೆಡೆ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾರತ ಮತ್ತು ಜಿಂಬಾಬ್ವೆ ವಿರುದ್ಧ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ನಂತರ ಉತ್ತಮ ಪ್ರದರ್ಶನ ನೀಡುವುದರ ಜೊತೆಗೆ ಅದೃಷ್ಟ ಕೂಡ ಪಾಕ್ ತಂಡದ ಕೈಹಿಡಿದಿತ್ತು. ಹೀಗಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದ ಪಾಕಿಸ್ತಾನ ಈ ಹಂತದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿ ಫೈನಲ್ ಪ್ರವೇಶಿಸಿದೆ.

ಚಹಾಲ್, ರವಿ ಬಿಷ್ಣೋಯಿ ಬಿಟ್ಟು ಅಶ್ವಿನ್‌ರನ್ನು ನಾನು ಆಯ್ಕೆ ಮಾಡುತ್ತಿರಲಿಲ್ಲ: ಫಾರೂಕ್ ಎಂಜಿನಿಯರ್ಚಹಾಲ್, ರವಿ ಬಿಷ್ಣೋಯಿ ಬಿಟ್ಟು ಅಶ್ವಿನ್‌ರನ್ನು ನಾನು ಆಯ್ಕೆ ಮಾಡುತ್ತಿರಲಿಲ್ಲ: ಫಾರೂಕ್ ಎಂಜಿನಿಯರ್

ಪಾಕಿಸ್ತಾನ ಸ್ಕ್ವಾಡ್ ಹೀಗಿದೆ: ಬಾಬರ್ ಅಜಂ (ನಾಯಕ), ಶದಬ್ ಖಾನ್, ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಅಫ್ರಿದಿ, ಶಾನ್ ಮಸೂದ್, ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್

ಇಂಗ್ಲೆಂಡ್ ಸ್ಕ್ವಾಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್‌ಸ್ಟನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಅಲೆಕ್ಸ್ ಹೇಲ್ಸ್, ಟೈಮಲ್ ಮಿಲ್ಸ್

Story first published: Saturday, November 12, 2022, 5:10 [IST]
Other articles published on Nov 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X