ಇಂಗ್ಲೆಂಡ್ ಇಷ್ಟು ಮಾಡಿದರೆ ಸಾಕು ಪಾಕಿಸ್ತಾನ ಗೆಲ್ಲಲ್ಲ: ಇಯಾನ್ ಮಾರ್ಗನ್

ಟಿ20 ವಿಶ್ವಕಪ್‌ನ ಫೈನಲ್ ಮುಖಾಮುಖಿಗೆ ಕೆಲವೇ ಕ್ಷಣಗಳು ಮಾತ್ರವೇ ಬಾಕಿಯಿದೆ. ಈ ಸಂದರ್ಭದಲ್ಲಿ ಯಾವ ತಂಡ ಗೆಲುವು ಸಾಧಿಸಬಹುದು ಎಂಬ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಪ್ರತಿಕ್ರಿಯಿಸಿದ್ದು ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ಗೆಲುವು ಸಾಧಿಸಬೇಕಾದರೆ ಏನು ಮಾಡಬೇಕಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯ ಭಾನುವಾರ ಮೆಲ್ಬರ್ನ್‌ನಲ್ಲಿರುವ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಆಯೋಜನೆಯಾಗಲಿದೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿರುವ ಪಾಕಿಸ್ತಾನ ಹಾಗೂ ಭಾರತ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡಗಳು ಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಿದ್ದು ಈ ಹಂತದಲ್ಲಿ ಚಾಂಪಿಯನ್ ಪಟ್ಟಕ್ಕೇರಲು ಹವಣಿಸುತ್ತಿದೆ.

ಪಾಕಿಸ್ತಾನಕ್ಕೆ ಇಷ್ಟು ಗುರಿ ನೀಡಿದರೆ ಸಾಕು!
ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ಗೆಲುವು ಸಾಧಿಸಬೇಕಾದರೆ ಇಂಗ್ಲೆಂಡ್ ತಂಡ 200 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳಿಸಿದರೆ ಸಾಕು ಎಂದಿದ್ದಾರೆ ಇಯಾನ್ ಮಾರ್ಗನ್. ಇಷ್ಟು ರನ್‌ಗಳಿಸಲು ಇಂಗ್ಲೆಂಡ್‌ಗೆ ಸಾಧ್ಯವಾದರೆ ಅದನ್ನು ಬೆನ್ನಟ್ಟಲು ಪಾಕಿಸ್ತಾನ ತಂಡಕ್ಕೆ ಸಾಧ್ಯವಾಗದು ಎಂಬ ಅಭಿಪ್ರಾಯವನ್ನು ಮಾರ್ಗನ್ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪಾಕಿಸ್ತಾನದ ಬೌಲರ್‌ಗಳಾದ ಹ್ಯಾರಿಸ್ ರೌಫ್, ಶಾಹೀನ್ ಶಾ ಅಫ್ರಿದಿ ನಸೀಮ್ ಶಾ ಹಾಗೂ ಶದಬ್ ಖಾನ್ ಪ್ರದರ್ಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಾಕ್ ಬೌಲರ್‌ಗಳ ಬಗ್ಗೆ ಮಾರ್ಗನ್ ಮೆಚ್ಚುಗೆ
ಪಾಕಿಸ್ತಾನದ ಬೌಲಿಂಗ್ ವಿಭಾಗ ಈ ಬಾರಿಯ ವಿಶ್ವಕಪ್‌ನಲ್ಲಿ ನೀಡಿರುವ ಪ್ರದರ್ಶನಕ್ಕೆ ಮಾರ್ಗನ್ ಮೆಚ್ಚಿಗೆ ಸೂಚಿಸಿದ್ದಾರೆ. "ಪಾಕಿಸ್ತಾನದ ಎಲ್ಲಾ ವೇಗದ ಬೌಲರ್‌ಗಳು ಕೂಡ 90 ಮೈಲಿಗಿಂತ ಹೆಚ್ಚಿನ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇದು ನಿಜಕ್ಕೂ ಸವಾಲಾಗಿರುತ್ತದೆ. ಇನ್ನು ಸ್ಪಿನ್ನರ್ ಶದಬ್ ಖಾನ್ ಕೂಡ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಅವರು ಇಂಗ್ಲೆಂಡ್ ತಂಡವನ್ನು ಸಾಧ್ಯವಾದಷ್ಟು ಶೀಘ್ರವಾಗಿ ಆಲೌಟ್ ಮಾಡುವ ಪ್ರಯತ್ನ ನಡೆಸುತ್ತಾರೆ. ಆದರೆ ಇಂಗ್ಲೆಂಡ್ 20 ಓವರ್‌ಗಳನ್ನು ಸಂಪೂರ್ಣವಾಗಿ ಆಡಿ 200ಕ್ಕೂ ಅಧಿಕ ರನ್‌ಗಳಿಸಿದರೆ ಪಾಕಿಸ್ತಾನ ಆ ಮೊತ್ತವನ್ನು ಬೆನ್ನಟ್ಟಲಿದೆ ಎಂದು ನನಗೆ ಅನಿಸುತ್ತಿಲ್ಲ" ಎಂದಿದ್ದಾರೆ ಇಯಾನ್ ಮಾರ್ಗನ್.

ಪಾಕ್ ಬೌಲರ್‌ಗಳ ಅದ್ಬುತ ಯಶಸ್ಸು
ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಬೌಲಿಂಗ್ ವಿಭಾಗ ಅದ್ಭುತ ಯಶಸ್ಸು ಸಾಧಿಸಿದೆ ಎಂಬುದನ್ನು ಮರೆಯುವಂತಿಲ್ಲ. ಸ್ಪಿನ್ನರ್ ಶಾದಬ್ ಖಾನ್ ಮತ್ತು ಶಾಹೀನ್ ಶಾ ಆಫ್ರಿದಿ ಈ ಟೂರ್ನಿಯಲ್ಲಿ ಈವರೆಗೆ ತಲಾ 10 ವಿಕೆಟ್ ಪಡೆದು ಮಿಂಚಿದ್ದರೆ, ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ವಾಸಿಮ್ ಇಬ್ಬರು ಸೇರಿಕೊಂಡು ಎದುರಾಳಿಗಳ 13 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ರೌಫ್ ಮಾತ್ರ ಈ ಟೂರ್ನಿಯಲ್ಲಿ ಏಳಕ್ಕಿಂತ ಹೆಚ್ಚಿನ ಎಕಾನಮಿಯಲ್ಲಿ ಬೌಲಿಂಗ್ ಮಾಡಿರುವ ಪಾಕ್ ಆಟಗಾರ ಎನಿಸಿದ್ದಾರೆ. ಹೀಗಾಗಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ದಾಂಡಿಗರು ಹಾಗೂ ಪಾಕಿಸ್ತಾನದ ಬೌಲರ್‌ಗಳ ನಡುವಿನ ಕದನ ಸಾಕಷ್ಟು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications