ಟಿ20 ವಿಶ್ವಕಪ್: ಭಾರತದ ವಿರುದ್ಧ ಗೆಲ್ಲುವುದು ಹೇಗೆಂದು ಪಾಕಿಸ್ತಾನಕ್ಕೆ ಸಲಹೆ ನೀಡಿದ ಮಿಯಾಂದಾದ್

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಮುಖಾಮುಖಿ ತೀವ್ರ ಕುತೂಹಲ ಮೂಡಿಸಿದೆ. ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ಭಾರತವನ್ನು ಈವರೆಗೆ ಸೋಲಿಸಲು ಸಾಧ್ಯವಾಗದಿರುವುದು ಪಾಕಿಸ್ತಾನ ಕ್ರಿಕೆಟ್ ತಂಡದ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಅಲ್ಲದೆ ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಸಾಧಿಸುತ್ತಿರುವ ಪಾರಮ್ಯ ಕೂಡ ಪಾಕಿಸ್ತಾನ ತಂಡದ ಆತ್ಮವಿಶ್ವಾಸವನ್ನು ಕುಸಿಯುವಂತೆ ಮಾಡಿದೆ. ಈ ಮಧ್ಯೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರರು ಅನೇಕ ರೀತಿಯ ಸಲಹೆಗಳನ್ನು ಪಾಕ್ ತಂಡಕ್ಕೆ ನೀಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಕಂಡ ದಿಗ್ಗಜ ಆಟಗಾರ ಜಾವೇದ್ ಮಿಯಾಂದಾದ್ ಕೂಡ ಈಗ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಈತನೇ ಟೀಮ್ ಇಂಡಿಯಾಗೆ ಆಧಾರ: ಕನ್ನಡಿಗನ ಬಗ್ಗೆ ಬ್ರೇಟ್ ಲೀಗೆ ಭರವಸೆಟಿ20 ವಿಶ್ವಕಪ್‌ನಲ್ಲಿ ಈತನೇ ಟೀಮ್ ಇಂಡಿಯಾಗೆ ಆಧಾರ: ಕನ್ನಡಿಗನ ಬಗ್ಗೆ ಬ್ರೇಟ್ ಲೀಗೆ ಭರವಸೆ

ಭಾರತದ ವಿರುದ್ಧ ಗೆಲುವು ಸಾಧಿಸಬೇಕಾದರೆ ಪಾಕಿಸ್ತಾನ ತಂಡ ಯಾವ ರೀತಿಯಾಗಿ ಸಿದ್ಧತೆಯನ್ನು ನಡೆಸಬೇಕು ಎಂಬುದನ್ನು ಮಿಯಾಂದಾದ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ಪಾಕಿಸ್ತಾನ ಕ್ರಿಕೆಟ್ ತಮಡದ ಆಟಗಾರರು ಭಾರತದ ವಿರುದ್ಧ ಭಯ ಮತ್ತು ಒತ್ತಡವಿಲ್ಲದೆ ಆಡಿದರೆ ಮಾತ್ರವೇ ಗೆಲುವು ಸಾಧ್ಯ ಎಂಬ ಮಾತನ್ನು ಹೇಳಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿದ್ದು ಈ ಎರಡು ತಂಡಗಳು ತಮ್ಮ ಮೊದಲ ಮುಖಾಮುಖಿಯಲ್ಲಿಯೇ ಪರಸ್ಪರ ಎದುರಾಗಲಿದೆ. ಅಕ್ಟೋಬರ್ 24ರಂದು ನಡೆಯುವ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಗೆಲುವಿಗಾಗಿ ಪೈಪೋಟಿ ನಡೆಸಲಿದೆ.

ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಬೇಕಾದರೆ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಮಡದ ಪ್ರತಿಯೊಬ್ಬ ಆಟಗಾರ ಕೂಡ ತಮ್ಮ ಕೊಡುಗೆಯನ್ನು ನೀಡಲೇಬೇಕಿದೆ. ಹಾಗಿದ್ದಾಗ ಮಾತ್ರವೇ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿರುವ ಭಾರತವನ್ನು ಮಣಿಸಲು ಸಾಧ್ಯವಿದೆ ಎಂದಿದ್ದಾರೆ.

ಐಪಿಎಲ್ 2021: ಕೆಕೆಆರ್‌ ಬ್ಯಾಟ್ಸ್‌ಮನ್‌ ದಿನೇಶ್ ಕಾರ್ತಿಕ್‌ಗೆ ದಂಡಐಪಿಎಲ್ 2021: ಕೆಕೆಆರ್‌ ಬ್ಯಾಟ್ಸ್‌ಮನ್‌ ದಿನೇಶ್ ಕಾರ್ತಿಕ್‌ಗೆ ದಂಡ

"ಈ ಟೂರ್ನಿಯನ್ನು ಅದ್ಭುತವಾಗಿ ಆರಂಬಿಸಲು ಭಾರತ ವಿರುದ್ಧದ ಪಂದ್ಯದ ಗೆಲುವು ಮಹತ್ವವಾಗಲಿದೆ. ಅವರದ್ದು ಬಲಿಷ್ಠವಾದ ತಂಡವಾಗಿದೆ. ಅವರ ತಂಡದಲ್ಲಿ ಕೆಲ ಅತ್ಯುನ್ನತ ಆಟಗಾರರು ಇದ್ದಾರೆ, ಆದರೆ ನಾವು ಭಾರತದ ವಿರುದ್ಧದ ಪಂದ್ಯದಲ್ಲಿ ಭಯ ಹಾಗೂ ಒತ್ತಡವಿಲ್ಲದೆ ಆಡಿದರೆ ಹಾಗೂ ಪ್ರತಿಯೊಬ್ಬರು ಕೂಡ ತಮ್ಮ ಕೊಡುಗೆಯನ್ನು ನೀಡಿದರೆ ನಾವು ಗೆಲ್ಲುವ ಅವಕಾಶವಿದೆ ಎಂದಿದ್ದಾರೆ ಜಾವೇದ್ ಮಿಯಾಂದಾದ್.

ಟಿ20 ಮಾದರಿಯಲ್ಲಿ ಒಬ್ಬರು ಅಥವಾ ಇಬ್ಬರು ಆಟಗಾರರು ಉತ್ತಮವಾಗಿ ಆಡಿದರೆ ಪಂದ್ಯವನ್ನು ಗೆಲ್ಲಬಹುದು ಎಂಬ ಅಭಿಪ್ರಾಯವಿದೆ. ಆದರೆ ನನ್ನ ಪ್ರಕಾರ ಪ್ರತಿಯೊಬ್ಬರು ಕುಡ ಒಂದಲ್ಲ ಒಂದು ರೀತಿಯಲ್ಲಿ ಕೊಡುಗೆ ನಿಡಿದರೆ ಮಾತ್ರವೇ ಗೆಲುವು ಸಾಧ್ಯ" ಎಂದಿದ್ದಾರೆ ಜಾವೇದ್ ಮಿಯಾಂದಾದ್. ಪಾಕಿಸ್ತಾನ ಜಿಯೋ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಿಯಾಂದಾದ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಆಡುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಸಂಪೂರ್ಣ ಸ್ಕ್ವಾಡ್ ಹಾಗೂ ವೇಳಾಪಟ್ಟಿ

ಭಾರತ ತಂಡ: ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಇಶಾನ್ ಕಿಶನ್ (ವಿಕೆ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ
ಮೀಸಲು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್
ವೇಳಾಪಟ್ಟಿ: 24 ಅಕ್ಟೋಬರ್‌ vs ಪಾಕಿಸ್ತಾನ, 31 ಅಕ್ಟೋಬರ್‌ vs ನ್ಯೂಜಿಲೆಂಡ್, 3 ನವೆಂಬರ್‌ vs ಅಫ್ಘಾನಿಸ್ತಾನ, 5 ನವೆಂಬರ್‌ vs ಬಿ1, 8 ನವೆಂಬರ್‌ vs ಎ2.

ಪಾಕಿಸ್ತಾನ ತಂಡ: ಬಾಬರ್ ಅಝಾಮ್ (ಸಿ), ಶಾದಬ್ ಖಾನ್, ಆಸಿಫ್ ಅಲಿ, ಅಜಮ್ ಖಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಇಮದ್ ವಾಸಿಂ, ಖುಷ್ದಿಲ್ ಶಾ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ, ಶಾಹೀನ್ ಶಾ ಅಫ್ರಿದಿ, ಶೋಯೆಬ್ ಮಲಿಕ್
ವೇಳಾಪಟ್ಟಿ: 24 ಅಕ್ಟೋಬರ್‌ vs ಭಾರತ, 26 ಅಕ್ಟೋಬರ್‌ vs ನ್ಯೂಜಿಲೆಂಡ್, 29 ಅಕ್ಟೋಬರ್‌ vs ಅಫ್ಘಾನಿಸ್ತಾನ, 2 ನವೆಂಬರ್‌ vs ಎ2, 7 ನವೆಂಬರ್ vs ಬಿ1

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 13 - October 23 2021, 03:30 PM
ಆಸ್ಟ್ರೇಲಿಯಾ
ದಕ್ಷಿಣ ಆಫ್ರಿಕಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, October 14, 2021, 23:42 [IST]
Other articles published on Oct 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X