
ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇಂದು ಎರಡನೇ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಬೇಕಾಗಿತ್ತು. ಆದರೆ ಬ್ರಿಸ್ಬೇನ್‌ನ ಗಾಬಾ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಅಭ್ಯಾಸ ಪಂದ್ಯ ರದ್ದಾಗಿದೆ.
ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ಮೂಲಕ ಭಾನುವಾರ ನಡೆಯಲಿರುವ ಪಾಕಿಸ್ತಾನದ ವಿರುದ್ಧದ ಮಹತ್ವದ ಸೆಣೆಸಾಟಕ್ಕೆ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದೆ. ಸೂಪರ್ 12 ಹಂತದ ಪಂದ್ಯಗಳು ಶನಿವಾರದಿಂದ ಆರಂಭವಾಗಲಿದ್ದು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ ಸೆಣೆಸಾಟ ನಡೆಸಲಿದೆ. ಇನ್ನು ಭಾನುವಾರದಂದು ಭಾರತ ಹಾಗೂ ಪಾಕಿಸ್ತಾನದ ವಿರುದ್ಧ ಪಂದ್ಯ ನಡೆಯಲಿದ್ದು ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳೆಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್
ನ್ಯೂಜಿಲೆಂಡ್ ಸಂಪೂರ್ಣ ಸ್ಕ್ವಾಡ್: ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಲಾಕಿ ಫರ್ಗುಸನ್, ಟಿಮ್ ಸೌಥಿ, ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಜೇಮ್ಸ್ ನೆಸ್ಹ್ಯಾಮ್ , ಟ್ರೆಂಟ್ ಬೌಲ್ಟ್