T20 World Cup: ಭಾರತ Vs ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ, ಗಬ್ಬಾದಲ್ಲಿ ಯಾರಿಗೆ ಸಿಗಲಿದೆ ಜಯ?

ಭಾರತ ಇಂದು ಆಸ್ಟ್ರೇಲಿಯಾ ವಿರುದ್ಧ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಆಡಲಿದೆ. ವೆಸ್ಟರ್ನ್ ಆಸ್ಟ್ರೇಲಿಯಾ XI ವಿರುದ್ಧ ರೋಹಿತ್ ಶರ್ಮಾ ಬಳಗ ಎರಡು ಅನಧಿಕೃತ ಅಭ್ಯಾಸ ಪಂದ್ಯಗಳನ್ನು ಆಡಿದರು, ಒಂದನ್ನು ಗೆದ್ದರು ಮತ್ತು ಇನ್ನೊಂದರಲ್ಲಿ ಸೋತರು. ಮತ್ತೊಂದೆಡೆ ಆಸ್ಟ್ರೇಲಿಯಾ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಕಳೆದುಕೊಂಡಿದೆ.
ಎರಡೂ ತಂಡಗಳೂ ಕೂಡ ಈ ಪಂದ್ಯದಲ್ಲಿ ಗೆಲವು ಸಾಧಿಸಲು ನೋಡುತ್ತಿವೆ. ಟೂರ್ನಿಯ ಆರಂಭಕ್ಕೆ ಎರಡೂ ತಂಡಗಳು ತಮ್ಮ ಆಡುವ ಬಳಗವನ್ನು ಅಂತಿಮಗೊಳಿಸಲು, ಈ ಪಂದ್ಯ ಪರೀಕ್ಷೆಯಾಗಲಿದೆ.
ಭಾರತ ಆಸ್ಟ್ರೇಲಿಯಾ ನಡುವಿನ ಅಭ್ಯಾಸ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಣೆ ಮಾಡಬಹುದು. ಡಿಸ್ನಿ ಹಾಟ್ ಸ್ಟಾರ್ ಕೂಡ ಡಿಜಿಟಲ್ ವೇದಿಕೆಯಲ್ಲಿ ಈ ಪಂದ್ಯವನ್ನು ಪ್ರಸಾರ ಮಾಡಲಿದೆ.
ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ 13 ರನ್‌ಗಳಿಂದ ಗೆದ್ದಿತ್ತು. ಎರಡನೇ ಅಭ್ಯಾಸ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯ XI ವಿರುದ್ಧ ಭಾರತ 36 ರನ್‌ಗಳ ಸೋಲು ಅನುಭವಿಸಿತು. ಕೆಎಲ್ ರಾಹುಲ್ ಅವರ 55 ಎಸೆತಗಳಲ್ಲಿ 74 ರನ್‌ಗಳ ಹೊರತಾಗಿಯೂ ಭಾರತ 36 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು.

ಎರಡೂ ತಂಡಗಳಿಗೆ ಗೆಲ್ಲುವ ವಿಶ್ವಾಸ
ಟಿ20 ವಿಶ್ವಕಪ್ 2022 ಗಾಗಿ ಭಾರತೀಯ ತಂಡವು ಮೂರು ಸ್ಪೆಷಲಿಸ್ಟ್ ಸ್ಪಿನ್ನರ್‌ಗಳನ್ನು (ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್) ಮತ್ತು ಅರೆಕಾಲಿಕ ಸ್ಪಿನ್ನರ್ ದೀಪಕ್ ಹೂಡಾರನ್ನು ಒಳಗೊಂಡಿದೆ. ಈ ನಾಲ್ವರಲ್ಲಿ ಇಬ್ಬರು ಮಾತ್ರ ತಂಡದಲ್ಲಿ ಸ್ಥಾನ ಪಡೆಯುತ್ತಾರೆ. ಯಾರಿಗೆ ಅವಕಾಶ ಸಿಗುತ್ತದೆ ಎನ್ನುವುದನ್ನು ನೋಡಬೇಕಿದೆ.
ಮತ್ತೊಂದೆಡೆ ಆಸ್ಟ್ರೇಲಿಯ ಕೂಡ ಗೆಲುವಿನ ಹಾದಿಗೆ ಮರಳಲು ಉತ್ಸುಕವಾಗಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೇನ್ ರಿಚರ್ಡ್‌ಸನ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್‌ರಂತಹ ಬೌಲರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ರನ್ ಗಳಿಸಲು ವಿಫಲರಾಗಿದ್ದು, ತಮ್ಮ ಲಯ ಕಂಡುಕೊಳ್ಳಲು ನೋಡುತ್ತಿದ್ದಾರೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ ಸಂಭಾವ್ಯ ಆಡುವ ಬಳಗ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಪಂತ್, ದಿನೇಶ್ ಕಾರ್ತಿಕ್, ಅಶ್ವಿನ್, ಚಾಹಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್
ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ : ಆರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮಿನ್ಸ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications