ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಸೂಪರ್ 8 ಹಂತದ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಮಾರ್ಚ್ 5 ರಂದು ಮುಂಬೈನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಈ ಬಿಗ್ ಫೈಟ್‌ಗೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ಸೌರವ್ ಗಂಗೂಲಿ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಆಟವನ್ನು ಶ್ಲಾಘಿಸಿದ್ದಾರೆ.
ಇಂಗ್ಲೆಂಡ್ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದೆ. ಇದು ಒಂದು ಒಳ್ಳೆಯ ತಂಡವಾಗಿದೆ. ಇಂಗ್ಲೆಂಡ್ ತಂಡ ಬಲಿಷ್ಠವಾಗಿದ್ದು, ಆ ತಂಡದ ವಿರುದ್ಧ ಉತ್ತಮ ಕ್ರಿಕೆಟ್ ಆಡಬೇಕಿದೆ. ಭಾರತ ತಂಡ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ತಂಡಗಳು 2024ರ ಸೆಮಿಫೈನಲ್‌ನಲ್ಲಿ ಕಾದಾಟ ನಡೆಸಿದ್ದವು. ಗಯಾನಾದ ಪಿಚ್ ಸ್ಪಿನ್ ಸ್ನೇಹಿಯಾಗಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈ ಜಯದಲ್ಲಿ ಭಾರತದ ಸ್ಪಿನ್ ಬೌಲರ್‌ಗಳು ಮಿಂಚಿದ್ದರು.
ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸೌರವ್ ಗಂಗೂಲಿ ಸಂಜು ಅವರ ಪ್ರದರ್ಶನದಿಂದ ಪ್ರಭಾವಿತರಾದರು. ಸಂಜು ಸ್ಯಾಮ್ಸನ್ ಅವರ ಬೆಸ್ಟ್ ಪ್ಲೇಯರ್. ಇವರು ಭಾರತದ ಪರ ವೈಟ್ ಬಾಲ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಬೇಕು. ಸಂಜು ಒಮ್ಮೆ ಕ್ರೀಸ್‌ನಲ್ಲಿ ಕಚ್ಚಿನಿಂತು ಬ್ಯಾಟ್ ಮಾಡಿದರೆ, ಎದುರಾಳಿ ಬೌಲರ್‌ಗಳಿಗೆ ಕಾಟ ನೀಡುವ ಬ್ಯಾಟರ್. ಒತ್ತಡದ ಸ್ಥಿತಿಯಲ್ಲಿ ಸಂಜು ಪಂದ್ಯವನ್ನು ಆಡಿದ್ದು ತಂಡಕ್ಕೆ ಆಧಾರವಾದರು. ಅಲ್ಲದೆ ಸಂಜು ಪ್ರಬುದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು.
ವೆಸ್ಟ್ ಇಂಡೀಸ್ ತಂಡಕ್ಕಿಂತ ಇಂಗ್ಲೆಂಡ್ ಬಲಿಷ್ಠವಾಗಿದೆ. ಅಲ್ಲದೆ ಸಮತೋಲಿತವಾಗಿದೆ ಎಂದು ಗಂಗೂಲಿ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯವು ಎರಡು ತಂಡಗಳ ಸ್ಟಾರ್ ಬ್ಯಾಟ್ಸ್‌ಮನ್‌ಗಳ ನಡುವಿನ ಪವರ್ ಗೇಮ್ ಆಗಿರಲಿದೆ. ಅಲ್ಲಿ ಪರಿಸ್ಥಿತಿಗಳಿಗೆ ತ್ವರಿತವಾಗಿ ಹೊಂದಿಕೊಳ್ಳುವ ತಂಡವು ಮೇಲುಗೈ ಸಾಧಿಸುತ್ತದೆ ಎಂದು ಗಂಗೂಲಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಬಲಿಷ್ಠವಾಗಿವೆ. ಉಭಯ ತಂಡಗಳು ಈಗಾಗಲೇ 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 17 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 12 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು 5 ಪಂದ್ಯಗಳಲ್ಲಿ ಕಾದಾಟವನ್ನು ನಡೆಸಿದ್ದು, ಭಾರತ 2ರಲ್ಲಿ, ಇಂಗ್ಲೆಂಡ್ 3ರಲ್ಲಿ ಜಯ ಸಾಧಿಸಿದೆ.