ಟಿ20 ವಿಶ್ವಕಪ್: ಭಾರತ vs ಪಾಕಿಸ್ತಾನ, ವಿಶ್ವಕಪ್ ಇತಿಹಾಸದ ಹೆಡ್ ಟು ಹೆಡ್ ಅಂಕಿ ಅಂಶ

ಎರಡು ವರ್ಷಗಳ ನಂತರ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿದೆ. ಟಿ20 ವಿಶ್ವಕಪ್‌ನಲ್ಲಿ ಮುಂದಿನ ಭಾನುವಾರ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ನಡೆಯಲಿದೆ. ವಿಶ್ವಕಪ್‌ನಂತಾ ಪ್ರಮುಖ ವೇದಿಕೆಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಅಜೇಯ ದಾಖಲೆ ಹೊಂದಿದ್ದು ಈ ಗೆಲುವಿನ ಓಟ ಮುಂದುವರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಮತ್ತೊಂದು ಕಡೆ ಪಾಕಿಸ್ತಾನ ಕೂಡ ಭಾರತದ ವಿರುದ್ಧ ಮೊದಲ ಗೆಲುವಿಗಾಗಿ ಹರಸಾಹಸ ಪಡಲಿದೆ.

ಭಾರತ ಹಾಗೂ ಪಾಕಿಸ್ತಾನಗಳ ನಡುವೆ ರಾಜಕೀಯ ಸಂಬಂಧ ಹಳಸಿರುವ ಕಾರಣದಿಂದಾಗಿ ಈ ಎರಡು ದೇಶಗಳ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಯೋಜನೆಯಾಗದೆ ದಶಕಗಳೇ ಆಗುತ್ತಾ ಬಂದಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಈಗ ಕೇವಲ ಐಸಿಸಿ ಟೂರ್ನಮೆಂಟ್‌ನಲ್ಲಿ ಮಾತ್ರವೇ ಆಡುತ್ತಿದೆ.

ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ: ಸಾಮಾಜಿಕ ಜಾಲತಾಣದಿಂದ ಸಾನಿಯಾ ಮಿರ್ಜಾ ಹೊರಕ್ಕೆಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ: ಸಾಮಾಜಿಕ ಜಾಲತಾಣದಿಂದ ಸಾನಿಯಾ ಮಿರ್ಜಾ ಹೊರಕ್ಕೆ

ಇನ್ನು ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದು ಕಳೆದ 2019ರ ಏಕದಿನ ವಿಶ್ವಕಪ್‌ನಲ್ಲಿ. ರೋಹಿತ್ ಶರ್ಮಾ ಸಿಡಿಸಿದ ಭರ್ಜರಿ ಶತಕದ ನೆರವಿನಿಂಧ ಭಾರತ ಆ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿತ್ತು. ಆದರೆ ಈ ಬಾರಿ ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಕ್ಕೂ ಮುನ್ನ ಈ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಸಾಕಷ್ಟು ಒತ್ತಾಯಗಳು ಬಂದಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಸೈನಿಕರು ಮತ್ತು ಭಯೋತ್ಪಾದಕರ ಮಧ್ಯೆ ಸಂಘರ್ಷ ಮುಂದುವರಿದಿದ್ದು ಈ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದುಗೊಳಿಸುವ ಒತ್ತಾಯಗಳು ಕೇಳಿ ಬಂದಿದೆ. ಆದರೆ ಇದು ಈ ಪಂದ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ.

ಟಿ20 ವಿಶ್ವಕಪ್: ಟೀಮ್ ಇಂಡಿಯಾ ಆಟಗಾರರಿಗೆ ಹೆಚ್ಚಿನ ಸಿದ್ಧತೆಯ ಅವಶ್ಯಕತೆಯಿಲ್ಲ: ರವಿ ಶಾಸ್ತ್ರಿಟಿ20 ವಿಶ್ವಕಪ್: ಟೀಮ್ ಇಂಡಿಯಾ ಆಟಗಾರರಿಗೆ ಹೆಚ್ಚಿನ ಸಿದ್ಧತೆಯ ಅವಶ್ಯಕತೆಯಿಲ್ಲ: ರವಿ ಶಾಸ್ತ್ರಿ

ಭಾರತ ಹಾಗೂ ಪಾಕಿಸ್ತಾನ ನಡುವಿನ ಮುಖಾಮುಖಿಯ ಇತಿಹಾಸ ಹೇಗಿದೆ? ಹೆಡ್ ಟು ಹೆಡ್ ಅಂಕಿಅಂಶ ಇಲ್ಲಿದೆ. ಮುಂದೆ ಓದಿ..

ಟಿ20, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಡ್‌ ಟು ಹೆಡ್ ಮಾಹಿತಿ

ಟಿ20, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಡ್‌ ಟು ಹೆಡ್ ಮಾಹಿತಿ

ಟಿ20 ಕ್ರಿಕೆಟ್: ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಟಿ20 ಕ್ರಿಕೆಟ್‌ನಲ್ಲಿ ಈವರೆಗೆ ಒಟ್ಟು 8 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಒಂದು ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ.

ಏಕದಿನ ಕ್ರಿಕೆಟ್: ಏಕದಿನ ಕ್ರಿಕೆಟ್ ಮಾದರಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಈವರೆಗೆ 132 ಪಂದ್ಯಗಳಲ್ಲಿಪರಸ್ಪರ ಹೋರಾಟ ನಡೆಸಿದೆ. ಇದರಲ್ಲಿ ಪಾಕಿಸ್ತಾನ ಮುನ್ನಡೆ ಸಾದಿಸಿದ್ದು 73ರಲ್ಲಿ ಗೆಲುವು ಸಾಧಿಸಿದೆ. ಭಾರತ ಪಾಕಿಸ್ತಾನದ ವಿರುದ್ಧ ಒಟ್ಟು 59 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. 4 ಪಂದ್ಯಗಳು ಫಲಿತಾಂಶವಿಲ್ಲದೆ ರದ್ದಾಗಿದೆ.

ಟೆಸ್ಟ್ ಕ್ರಿಕೆಟ್: ಇನ್ನು ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಈವರೆಗೆ 59 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಪಾಕಿಸ್ತಾನ 12 ಪಂದ್ಯಗಳನ್ನು ಗೆದ್ದುಕೊಂಡಿದೆ. 38 ಪಂದ್ಯಗಳು ಫಲಿತಾಂಶವಿಲ್ಲದೆ ರದ್ದಾಗಿದೆ.

ಇನ್ನು ಭಾರತ ಹಾಗೂ ಪಾಕಿಸ್ತಾನ ತಂಡಗಳು ಈವರೆಗೆ ಒಟ್ಟಾರೆಯಾಗಿ 199 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ 86 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಭಾರತ 70 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಟ್ಟಾರೆಯಾಗಿ ಪಾಕಿಸ್ತಾನದ ಕೈ ಮೇಲಿದೆ. ಆದರೆ ಇತ್ತೀಚಿನ ದಶಕದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಭಾರೀ ಮೇಲುಗೈ ಸಾಧಿಸಿದೆ.

ಐಸಿಸಿ ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ

ಐಸಿಸಿ ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ

ಏಕದಿನ ವಿಶ್ವಕಪ್: ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಅಮೋಘ ದಾಖಲೆಯನ್ನು ಹೊಂದಿದೆ. ಈವರೆಗೆ ಒಂದೇ ಒಂದು ಪಂದ್ಯದಲ್ಲಿಯೂ ಭಾರತ ಪಾಕ್‌ಗೆ ಸೋತಿಲ್ಲ. ಏಕದಿನ ಕ್ರಿಕೆಟ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ಈವರೆಗೆ 7 ಬಾರಿ ಮುಖಾಮುಖಿಯಾಗಿದ್ದು ಭಾರತ 7 ಪಂದ್ಯಗಳನ್ನು ಕೂಡ ಗೆದ್ದುಕೊಂಡಿದೆ.

ಟಿ20 ವಿಶ್ವಕಪ್: ಭಾರತ ಹಾಗೂ ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಈವರೆಗೆ 5 ಬಾರಿ ಮುಖಾಮುಖಿಯಾಗಿದ್ದು ಭಾರತ 4ರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ. ಹೀಗೆ ಬಾರತ ಟಿ20 ವಿಶ್ವಕಪ್‌ನಲ್ಲಿಯೂ ಅಜೇಯ ಸಾಧನೆ ಮಾಡಿದೆ.

ರವಿಶಾಸ್ತ್ರಿ& ವಿರಾಟ್ ಕಾಂಬಿನೇಷನ್‌ನಲ್ಲಿ RCB ಕಪ್‌ ಗೆಲ್ಲೋದು ಗ್ಯಾರೆಂಟಿ,ಹೇಗೆ ಅಂತೀರಾ? | Oneindia Kannada
ಟಿ20 ಕ್ರಿಕೆಟ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನದ ಕುತೂಹಲಕಾರಿ ಅಂಕಿಅಂಶ

ಟಿ20 ಕ್ರಿಕೆಟ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನದ ಕುತೂಹಲಕಾರಿ ಅಂಕಿಅಂಶ

ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಟಿ20 ಕ್ರಿಕೆಟ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ. ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೈನಲ್‌ಗೆ ಪ್ರವೇಶಿಸಿತ್ತು. ಈ ಫೈನಲ್ ಪಂದ್ಯದಲ್ಲಿ ಭಾರತ ರೋಚಕವಾಗಿ ಗೆದ್ದು ಬೀಗಿತ್ತು ಈಗ ಇತಿಹಾಸ. ಇದಕ್ಕೂ ಮುನ್ನ ಲೀಗ್ ಹಂತದಲ್ಲಿಯೂ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಲೀಗ್ ಹಂತದ ಪಂದ್ಯ ಕೂಡ ರೋಮಾಂಚನಕಾರಿಯಾಗಿ ಟೈ ಫಲಿತಾಂಶ ಕಂಡುಕೊಂಡ ನಂತರ ಭಾರತ ಬಾಲ್ ಔಟ್‌ನಲ್ಲಿ ವಿಜಯಿಯಾಯಿತು.

ತಂಡದ ಹೈಯೆಸ್ಟ್ ಸ್ಕೋರ್: ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 192/5 ರನ್‌ಗಳಿಸಿರುವುದು ಈವರೆಗಿನ ಅತ್ಯಂತ ಹೆಚ್ಚಿನ ಸ್ಕೋರ್ ಆಗಿದೆ. 2012ರಲ್ಲಿ ಪಾಕಿಸ್ತಾನದ ವಿರುದ್ಧ ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಈ ರನ್ ಗಳಿಸಿತ್ತು.

ಕನಿಷ್ಠ ಮೊತ್ತ: 2016ರ ಏಷ್ಯಾಕಪ್ ಟೂರ್ನಿಯ ಢಾಕಾದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ ಕೇವಲ 83 ರನ್‌ಗಳಿಗೆ ಆಲೌಟ್ ಮಾಡಿತ್ತು. ಇದು ಈ ಎರಡು ತಮಡಗಳ ಮುಖಾಮುಖೀಯ ಕನಿಷ್ಠ ಮೊತ್ತವಾಗಿದೆ. ಈ ಪಂದ್ಯವನ್ನು ಭಾರತ 5 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿತ್ತು.

ಅತಿ ಹೆಚ್ಚು ವೈಯಕ್ತಿಕ ಸ್ಕೋರ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಮುಖಾಮುಖಿಯಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. 2012ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ 78 ರನ್‌ಗಳಿಸಿದ್ದರು. ಈ ಪಂದ್ಯ ಕೊಲಂಬೋದಲ್ಲಿ ನಡೆದಿತ್ತು.

ಅತ್ಯುತ್ತಮ ಬೌಲಿಂಗ್ ಪ್ರದರ್ಶನ: ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಮೊಹಮ್ಮದ್ ಆಸಿಫ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ದಾಖಲೆ ಹೊಂದಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆದ ಪಂದ್ಯದಲ್ಲಿ 18 ರನ್‌ಗಳನ್ನು ನೀಡಿ 4 ವಿಕೆಟ್ ಕಬಳಿಸಿತ್ತು. ಈ ಪಂದ್ಯ ಟೈನಲ್ಲಿ ಅಂತ್ಯವಾಗಿ ಬಳಿಕ ಭಾರತ ಬಾಲ್‌ಔಟ್‌ನಲ್ಲಿ ಗೆದ್ದಿತ್ತು.

For Quick Alerts
ALLOW NOTIFICATIONS
For Daily Alerts
Story first published: Wednesday, October 20, 2021, 16:12 [IST]
Other articles published on Oct 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X