ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಪಾಕಿಸ್ತಾನ: ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿರುವ ದುಬೈ ಸ್ಟೇಡಿಯಂನ ಇತಿಹಾಸ ಹಾಗೂ ಅಂಕಿಅಂಶಗಳು

T20 world cup: India vs Pakistan, Pitch History and stats of Dubai International Cricket Stadium

ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ. ದುಬೈನಲ್ಲಿರುವ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇವತ್ತು ಭಾರತ ಹಾಗೂ ಪಾಕಿಸ್ತಾನ ನಡುವಿನ ಮೆಗಾ ಕದನಕ್ಕೆ ಸಾಕ್ಷಿಯಾಗಲಿದೆ. ಟಿ20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯ ಚಾಂಪಿಯನ್ ತಂಡವಾಗಿರುವ ಭಾರತ ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಎರಡು ವರ್ಷಗಳ ನಂತರ ಮುಖಾಮುಖಿಯಾಗುತ್ತಿದೆ. ಗ್ರೂಪ್ 2ರ ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಸುದೀರ್ಘ ಐದು ವರ್ಷಗಳ ನಂತರ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಟಿ20 ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗುತ್ತಿವೆ. ಇದಕ್ಕೂ ಮುನ್ನ 2016ರ ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಚುಟುಕು ಮಾದರಿಯಲ್ಲಿ ಕೊನೆಯ ಬಾರಿಗೆ ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿಯೂ ಭಾರತ ಗೆಲ್ಲುವ ಮೂಲಕ ಟಿ20 ವಿಶ್ವಕಪ್‌ನಲ್ಲಿ ಗೆಲುವಿನ ಅಂತರವನ್ನು 5-0ಗೆ ಏರಿಸಿಕೊಂಡಿತ್ತು.

ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!

ಇನ್ನು ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರಣದಿಂದಾಗಿ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ. ಅದರಲ್ಲೀ ಕಳೆದ ರಾತ್ರಿ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಇದೇ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿ ಲೋ ಸ್ಕೋರಿಂಗ್ ಪಂದ್ಯಕ್ಕೆ ಸಾಕ್ಷಿಯಾಗಿದ್ದು ಕಣ್ಣ ಮುಂದಿದೆ. ಹೀಗಾಗಿ ಬ್ಯಾಟರ್‌ಗಳಿಗೆ ಸವಾಲಿರುವ ಈ ಪಿಚ್‌ನಲ್ಲಿ ಯಾವ ರೀತಿಯಲ್ಲಿ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬರುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ದುಬೈ ಪಿಚ್ ಇತಿಹಾಸ ಹಾಗೂ ಅಂಕಿಅಂಶ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈವರೆಗೆ 63 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ತಂಡ 34 ಬಾರಿ ಗೆಲುವು ಸಾಧಿಸಿದ್ದರೆ ಎರಡನೇ ಸರದಿಯಲ್ಲಿ ಬ್ಯಾಟಿಂಗ್ ಮಾಡಿದ ತಂಡ 28 ಬಾರಿ ಗೆದ್ದುಕೊಂಡಿದೆ. ಒಂದು ಪಂದ್ಯ ಟೈ ಫಲಿತಾಂಶವನ್ನು ಪಡೆದುಕೊಂಡಿದೆ.

ಟಿ20 ವಿಶ್ವಕಪ್: ಟ್ರೋಫಿ ಗೆಲ್ಲುವ ತಂಡಕ್ಕೆ, ಫೈನಲ್ ಮತ್ತು ಸೆಮಿಫೈನಲ್‌ ಸೋತವರಿಗೂ ಸಿಗಲಿದೆ ಭಾರೀ ಹಣ!ಟಿ20 ವಿಶ್ವಕಪ್: ಟ್ರೋಫಿ ಗೆಲ್ಲುವ ತಂಡಕ್ಕೆ, ಫೈನಲ್ ಮತ್ತು ಸೆಮಿಫೈನಲ್‌ ಸೋತವರಿಗೂ ಸಿಗಲಿದೆ ಭಾರೀ ಹಣ!

ಇನ್ನು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಂಡವಿಂದು ಗಳಿಸಿದ ಹೈಯೆಸ್ಟ್ ಸ್ಕೋರ್ 211/3. 2013ರಲ್ಲಿ ಶ್ರಿಲಂಕಾ ತಂಡ ಪಾಕಿಸ್ತಾನದ ವಿರುದ್ಧ ಈ ರನ್‌ಗಳಿಸಿತ್ತು. ಇನ್ನು ನಿನ್ನೆ ನಡೆದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ವೆಸ್ಟ್ ಇಮಡೀಸ್ ಗಳಿಸಿದ 55 ರನ್ ಇಲ್ಲಿ ದಾಖಲಾದ ಈವರೆಗಿನ ಕನಿಷ್ಠ ಸ್ಕೋರ್ ಆಗಿದೆ. ಇಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 144 ರನ್.

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶ್ರೀಲಂಕಾದ ಕುಸಾಲ್ ಪೆರೆರ 2013ರಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗಳಿಸಿದ 84 ರನ್ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ. 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನದ ಇಮಾದ್ ವಾಸಿಂ 14 ರನ್‌ಗಳಿಗೆ 5 ವಿಕೆಟ್ ಪಡೆದುಕೊಂಡಿರುವುದು ಇಲ್ಲಿನ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

ಇನ್ನು ಕಳೆದ ಶನಿವಾರ(23/10/2021)ರಂದು ರಾತ್ರಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಇಂಗ್ಲೆಂಡ್‌ನ ಸ್ಪಿನ್ನರ್‌ಗಳ ಭಯಾನಕ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್‌ನ ಬಲಾಢ್ಯ ಬ್ಯಾಟಿಂಗ್ ಪಡೆ ಕೇವಲ 55 ರನ್‌ಗಳಿಗೆ ಆಲೌಟ್ ಆಗಿತ್ತು. ಇದು ಈ ಮೈದಾನದ ಅತ್ಯಂಯ ಕನಿಷ್ಠ ಸ್ಕೋರ್ ಆಗಿದೆ.

ಪ್ರತಿಸಲ ಭಾರತ ಗೆಲ್ಲುತ್ತದೆ ಎಂದೇನಿಲ್ಲ; ಭಾರತ vs ಪಾಕ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಹೆಸರಿಸಿದ ಗಂಗೂಲಿಪ್ರತಿಸಲ ಭಾರತ ಗೆಲ್ಲುತ್ತದೆ ಎಂದೇನಿಲ್ಲ; ಭಾರತ vs ಪಾಕ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಹೆಸರಿಸಿದ ಗಂಗೂಲಿ

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್‌ನ ಸ್ಪಿನ್ನರ್ ಆದಿಲ್ ರಶೀದ್ ಕೇವಲ 2 ರನ್ ನೀಡಿ ವೆಸ್ಟ್ ಇಂಡೀಸ್ ತಂಡದ 4 ವಿಕೆಟ್ ಪಡೆದುಕೊಂಡಿದ್ದಾರೆ. ಈ ಅದ್ಭುತ ಬೌಲಿಂಗ್ ಪ್ರದರ್ಶನಕ್ಕೆ ಶದಿಲ್ ರಶೀದ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇನ್ನೋರ್ವ ಸ್ಪಿನ್ನರ್ ಮೊಯೀನ್ ಅಲಿ ಈ ಪಂದ್ಯದಲ್ಲಿ 2 ವಿಕೆಟ್ ಕಿತ್ತು ಉತ್ತಮ ಸಾಥ್ ನೀಡಿದರು. ಈ ಪಂದ್ಯದಲ್ಲಿ ಇಂಗ್ಲೆಂಡ್ ಕೂಡ ತನ್ನ ನಾಳ್ಕು ವಿಕೆಟ್‌ಗಳನ್ನು ಕಳೆದುಕೊಂಡಿತ್ತಾದರೂ 8.2 ಓವರ್‌ಗಳಲ್ಲಿಯೇ ಪಂದ್ಯವನ್ನು ಗೆದ್ದುಕೊಳ್ಳಲು ಯಶಸ್ವಿಯಾಗಿತ್ತು.

ಈ ಪಂದ್ಯದಲ್ಲಿ ಕೇವಲ 2 ಸಿಕ್ಸರ್‌ಗಳು ಮಾತ್ರವೇ ಸಿಡಿದಿದ್ದು 14 ವಿಕೆಟ್‌ಗಳು ಉರುಳಿತ್ತು. ಇದರಲ್ಲಿ 8 ವಿಕೆಟ್‌ಗಳನ್ನು ಸ್ಪಿನ್ನರ್‌ಗಳೇ ಪಡೆದುಕೊಂಡಿದ್ದರು. ಇದು ದುಬೈ ಅಂಗಳದಲ್ಲಿ ಸ್ಪಿನ್ನರ್‌ಗಳು ಎಷ್ಟು ಪರಿಣಾಮಕಾರಿಯಾಗಬಲ್ಲರು ಎಂಬುದನ್ನು ವ್ಯಕ್ತಪಡಿಸುತ್ತಿದೆ. ಹೀಗಾಗಿ ಭಾರತ ಹಾಘೂ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್‌ಗಳು ಯಾವ ರೀತಿಯ ಪ್ರದರ್ಶನ ನೀಡಲುದ್ದಾರೆ ಎಂಬುದು ಕೂಡ ಸಾಕಷ್ಟು ಕುತೂಹಲ ಮೂಡಿಸಿರುವ ಸಂಗತಿಯಾಗಿದೆ.

ಭಾರತ ಸ್ಕ್ವಾಡ್ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ
ಮೀಸಲು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್ ; ಮಾರ್ಗದರ್ಶಕ: ಎಂಎಸ್ ಧೋನಿ

ಪಾಕಿಸ್ತಾನ ಸ್ಕ್ವಾಡ್ ಹೀಗಿದೆ : ಬಾಬರ್ ಅಜಂ (ನಾಯಕ), ಶಾದಬ್ ಖಾನ್, ಆಸಿಫ್ ಅಲಿ, ಅಜಮ್ ಖಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಇಮದ್ ವಾಸಿಂ, ಖುಷ್ದಿಲ್ ಶಾ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ, ಶಾಹೀನ್ ಶಾ ಅಫ್ರಿದಿ

Virat Kohli ಪಾಕಿಸ್ತಾನದ ಪಂದ್ಯ ಮುಗಿದಾದ ನಂತರ Rohit ಬಗ್ಗೆ ಹೇಳಿದ್ದೇನು | Oneindia Kannada

Story first published: Sunday, October 24, 2021, 10:31 [IST]
Other articles published on Oct 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X