ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸೋಲಿನ ಸರಪಳಿ ಮುರಿಯುತ್ತಾ ಪಾಕಿಸ್ತಾನ: ಭಾರತದ ವಿರುದ್ಧ ಪಾಕಿಸ್ತಾನದ ಸಂಭಾವ್ಯ ಪ್ಲೇಯಿಂಗ್ XI

T20 World Cup: India vs Pakistan: Probable Playing XI of Pakistan Against India on October 24

ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ಈಗ ನಡೆಯುತ್ತಿದೆ. ಮುಂದಿನ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ವಿರುದ್ಧ ವಿಶ್ವಕಪ್‌ನಲ್ಲಿ ಹೊಂದಿರುವ ಸತತ ಸೋಲಿನ ದಾಖಲೆಯನ್ನು ಅಂತ್ಯಗೊಳಿಸಲು ಪಾಕಿಸ್ತಾನ ತಂಡ ರಣತಂತ್ರವನ್ನು ರೂಪಿಸುತ್ತಿರುವುದರಲ್ಲಿ ಅನುಮಾನವಿಲ್ಲ. ಇದಕ್ಕಾಗಿ ಅತ್ಯುತ್ತಮ ಆಟಗಾರರ ಆಟಗಾರರ ಆಡುವ ಬಳಗದೊಂದಿಗೆ ಕಣಕ್ಕಿಳಿಯಲು ಪಾಕ್ ಸಿದ್ಧತೆ ನಡೆಸುತ್ತಿದೆ.

ಕಳೆದ ಒಂದೆರಡು ವರ್ಷಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ಕ್ರಿಕೆಟ್‌ನಲ್ಲಿ ಭಾರತದ ರೀತಿಯಲ್ಲಿಯೇ ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಹೀಗಾಗಿ ಭಾರತದ ವಿರುದ್ಧವೂ ಈ ಪ್ರದರ್ಶನವನ್ನು ಮುಂದಿವರಿಸಲು ಪಾಕಿಸ್ತಾನ ಬಯಸುತ್ತಿದೆ. ಭಾರತದ ಬಲಿಷ್ಠ ಬಳಗದ ವಿರುದ್ಧ ಪಾಕಿಸ್ತಾನ ಅತ್ಯುತ್ತಮ ಆಟಗಾರರೊಂದಿಗೆ ಕಣಕ್ಕಿಳಿಯಲಿದೆ.

ಟಿ20 ವಿಶ್ವಕಪ್: ಭಾರತ vs ಪಾಕಿಸ್ತಾನ ಪಂದ್ಯದ ಬಗ್ಗೆ ಯಾರು ಏನು ಹೇಳಿದ್ದಾರೆ?ಟಿ20 ವಿಶ್ವಕಪ್: ಭಾರತ vs ಪಾಕಿಸ್ತಾನ ಪಂದ್ಯದ ಬಗ್ಗೆ ಯಾರು ಏನು ಹೇಳಿದ್ದಾರೆ?

ಹಾಗಾದರೆ ಈ ಅತ್ಯಂತ ಕುತೂಹಲ ಮೂಡಿಸಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಆಡುವ ಬಳಗ ಹೇಗಿರಲಿದೆ ಎಂಬ ಕುತೂಹಲ ಸಹಜವಾಗಿದೆ. ಹೀಗಾಗಿ ಸಂಭಾವ್ಯ ಆಡುವ ಬಳಗವನ್ನು ನಿಮ್ಮ ಮುಂದಿಡುತ್ತಿದ್ದೇವೆ. ಮುಂದೆ ಓದಿ..

ಆರಂಭಿಕ ಆಟಗಾರರು

ಆರಂಭಿಕ ಆಟಗಾರರು

ಮೊಹಮ್ಮದ್ ರಿಜ್ವಾನ್, ಫಖಾರ್ ಜಮಾನ್: ಪಾಕಿಸ್ತಾನದ ಈ ಆರಂಭಿಕ ಜೋಡಿ ಮಿಂಚಿನ ಆರಂಭವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿರುವ ರಿಜ್ವಾನ್ ಪಾಕಿಸ್ತಾನ ತಂಡದ ಅತ್ಯಂತ ಪ್ರಮುಖ ಆಟಗಾರನಾಗಿ ರೂಪುಗೊಂಡಿದ್ದಾರೆ. ಹೀಗಾಗಿ ಈ ಆಟಗಾರನ ಮೇಲೆ ಪಾಕಿಸ್ತಾನ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದೆ.

ಟಿ20 ವಿಶ್ವಕಪ್ 2021: ಶ್ರೀಲಂಕಾ ನಂತರ ಸೂಪರ್ 12 ಹಂತಕ್ಕೆ ಪ್ರವೇಶಿಸಿದ ಸ್ಕಾಟ್ಲೆಂಡ್

ಮಧ್ಯಮ ಕ್ರಮಾಂಕದ ಆಟಗಾರರು

ಮಧ್ಯಮ ಕ್ರಮಾಂಕದ ಆಟಗಾರರು

ಬಾಬರ್ ಅಜಂ, ಮೊಹಮ್ಮದ್ ಹಫೀಜ್, ಆಸಿಪ್ ಅಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನಾಗಿರುವ ಬಾಬರ್ ಅಜಂ ಮೂರನೇ ಕ್ರಮಾಂಕದಲ್ಲಿ ಪಾಕಿಸ್ತಾನ ತಂಡಕ್ಕೆ ಶಕ್ತಿ ನೀಡುವ ಆಟಗಾರ. ಟಿ20 ಕ್ರಿಕೆಟ್‌ನಲ್ಲಿ ಸಾಕಷ್ಟು ದಾಖಲೆಗಳನ್ನು ಬರೆಯುತ್ತಿರುವ ಬಾಬರ್ ಅಜಂ ಇತ್ತೀಚೆಗೆ ಅದ್ಭುತ ಫಾರ್ಮ್‌ನಲ್ಲಿದ್ದು ಅತ್ಯಂತ ಸ್ಥಿರ ಪ್ರದರ್ಶನ ನೀಡುವ ಆಟಗಾರ ಎನಿಸಿದ್ದಾರೆ. ಇನ್ನು ಅನುಭವಿ ಮೊಹಮ್ಮದ್ ಹಫೀಜ್ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿ ಮಿಂಚಿದ್ದಾರೆ. ಇನ್ನು ಆಸಿಫ್ ಅಲಿ ಕೂಡ ಸ್ಪೋಟಕ ಪ್ರದರ್ಶನ ನೀಡಬಲ್ಲ ಆಟಗಾರನಾಗಿದ್ದಾರೆ.

ಆಲ್‌ರೌಂಡರ್‌ಗಳು

ಆಲ್‌ರೌಂಡರ್‌ಗಳು

ಅನುಭವಿ ಶೋಯೆಬ್ ಮಲಿಕ್ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೌಲಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಕೊಡುಗೆಯನ್ನು ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಶೋಯೆಬ್ ಮಲಿಕ್ ಭಾರತದ ವಿರುದ್ಧ ಈ ಹಿಂದೆಯೂ ಅತ್ಯುತ್ತಮ ಪ್ರದರ್ಶನ ನೀಡಿದ ಉದಾಹರಣೆಯಿದೆ. ಜೊತೆಗೆ ಮೊಹಮ್ಮದ್ ಹಫೀಜ್ ಕೂಡ ಬೌಲಿಂಗ್‌ನಲ್ಲಿಯೂ ಮಿಂಚುವ ಆಟಗಾರನಾಗಿದ್ದಾರೆ. ಹಸನ್ ಅಲಿ ಬೌಲರ್ ಆಗಿದ್ದರೂ 7ನೇ ಕ್ರಮಾಂಕದಲ್ಲಿ ತಂಡಕ್ಕೆ ಬ್ಯಾಟಿಂಗ್‌ನಲ್ಲಿಯೂ ನೆರವಾಗುವ ಆಟಗಾರನಾಗಿದ್ದಾರೆ.

ಪಾಕಿಸ್ತಾನದ ಬೌಲಿಂಗ್ ಪಡೆ

ಪಾಕಿಸ್ತಾನದ ಬೌಲಿಂಗ್ ಪಡೆ

ಶಾಹೀನ್ ಅಫ್ರಿದಿ, ಇಮಾದ್ ವಾಸಿಂ, ಶಾದಬ್ ಖಾನ್, ಹಾರಿಸ್ ರೌಫ್: ಪಾಕಿಸ್ತಾನ ಪ್ರತಿಭಾನ್ವಿತ ಬೌಲರ್‌ಗಳ ಪಡೆಯನ್ನು ಹೊಂದಿದೆ. ಯುವ ವೇಗಿ ಶಾಹೀನ್ ಅಫ್ರಿದಿ ಪಾಕಿಸ್ತಾನಕ್ಕೆ ಆರಂಭದಲ್ಲಿಯೇ ಮೇಲುಗೈ ಒದಗಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ ಅನುಭವಕ್ಕೆ ಹೋಲಿಸಿದರೆ ಪಾಕಿಸ್ತಾನ ಯುವ ಆಟಗಾರರನ್ನು ನೆಚ್ಚಿಕೊಂಡಿದೆ. ಭಾರತದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಟಿ20 ಕ್ರಿಕೆಟ್‌ನಲ್ಲಿ ಸಾಕಷ್ಟು ಅನುಭವ ಇರುವ ಆಟಗಾರರಿದ್ದಾರೆ. ಇದು ಪಾಕಿಸ್ತಾನದ ಬೌಲರ್‌ಗಳಿಗೆ ಅತ್ಯಂತ ಸವಾಲಾಗಿರುವುದರಲ್ಲಿ ಅನುಮಾನವಿಲ್ಲ.

ಭಾರತ ಹಾಗೂ ಪಾಕಿಸ್ತಾನದ ಸಂಪೂರ್ಣ ಸ್ಕ್ವಾಡ್
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ
ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್

ಪಾಕಿಸ್ತಾನ ತಂಡ: ಬಾಬರ್ ಅಝಾಮ್ (ನಾಯಕ), ಶಾದಬ್ ಖಾನ್, ಆಸಿಫ್ ಅಲಿ, ಅಜಮ್ ಖಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಇಮದ್ ವಾಸಿಂ, ಖುಷ್ದಿಲ್ ಶಾ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ, ಶಾಹೀನ್ ಶಾ ಅಫ್ರಿದಿ, ಶೋಯೆಬ್ ಮಲಿಕ್

ಪಾಕಿಸ್ತಾನದ ಈ ಆಟಗಾರರ ಮೇಲೆ ಒಂದು ಕಣ್ಣಿಡಿ | Oneindia Kannada

Story first published: Friday, October 22, 2021, 14:23 [IST]
Other articles published on Oct 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X