Breaking: ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ: ಜಸ್ಪ್ರೀತ್ ಬೂಮ್ರಾ ಸಂಪೂರ್ಣ ಟೂರ್ನಿಯಿಂದ ಔಟ್!

ಟಿ20 ವಿಶ್ವಕಪ್‌ನ ಸನಿಹದಲ್ಲಿಯೇ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾ ತೀವ್ರ ಬೆನ್ನು ನೋವಿಗೆ ತುತ್ತಾಗಿದ್ದು ವಿಶ್ವಕಪ್ ಟೂರ್ನಿಗೆ ಅಲಭ್ಯವಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ. ಹೀಗಾಗಿ ಭಾರತ ತಂಡಕ್ಕೆ ಟಿ20 ವಿಶ್ವಕಪ್‌ನ ಆರಂಭಕ್ಕೂ ಮುನ್ನವೇ ಭಾರೀ ಹಿನ್ನಡೆಯಾಗಿದೆ.
ಸುದೀರ್ಘ ಕಾಲದ ವಿಶ್ರಾಂತಿಯ ಬಳಿಕ ಕಳೆದ ಆಸ್ಟ್ರೇಲಿಯಾ ಸರಣಿಯ ಮೂಲಕ ಜಸ್ಪ್ರಿತ್ ಬೂಮ್ರಾ ಕಮ್‌ಬ್ಯಾಕ್ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಎರಡು ಪಂದ್ಯಗಳಲ್ಲಿ ಆಡಿದ್ದ ಬೂಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಆಯ್ಕೆಯಾಗಿದ್ದರು. ಆದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಬೂಮ್ರಾ ಬೆನ್ನು ನೋವಿಗೆ ಒಳಖಗಾಗಿರುವ ವಿಚಾರವನ್ನು ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದರು. ಇದೀಗ ಗಾಯದ ತೀವ್ರತೆ ಗಂಭೀರವಾಗಿದ್ದು ಸಂಪೂರ್ಣ ವಿಶ್ವಕಪ್‌ನಿಮದಲೇ ಬೂಮ್ರಾ ಹೊರಗುಳಿಯಳಿಯಲಿದ್ದಾರೆ ಎಂಬ ಸಂಗತಿ ಬಹಿರಂಗವಾಗಿದೆ.

ಮಹತ್ವದ ಟೂರ್ನಿಯಲ್ಲಿ ಭಾರತಕ್ಕೆ ಹಿನ್ನಡೆ
ಜಸ್ಪ್ರೀತ್ ಬೂಮ್ರಾ ಟಿ20 ವಿಶ್ವಕಪ್‌ಗೆ ಅಲಭ್ಯವಾಗುತ್ತಿರುವುದು ಭಾರತ ತಂಡಕ್ಕೆ ದೊಡ್ಡ ಆಘಾತ ಎಂಬುದರಲ್ಲಿ ಅನುಮಾನವೇ ಇಲ್ಲ. ಅದರಲ್ಲೂ ಬೂಮ್ರಾ ಅಲಭ್ಯತೆಯಲ್ಲಿ ಏಷ್ಯಾಕಪ್‌ನಲ್ಲಿ ಭಾರತದ ವೇಗಿಗಳ ಪ್ರದರ್ಶನದಿಂದ ತಂಡ ಆಘಾತಕಾರಿಯಾಗಿ ಹೊರಬಿದ್ದಿತ್ತು. ಇದೀಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್‌ಗೂ ಅಲಭ್ಯವಾದರೆ ತಂಡ ಮತ್ತಷ್ಟು ಸಂಕಟಕ್ಕೆ ಸಿಲುಕುವ ಸಾಧ್ಯತೆಯಿದೆ. ಅನುಭವಿ ವೇಗಿಯ ಅನುಪಸ್ಥಿತಿಯನ್ನು ಭಾರತ ತಂಡ ಹೇಗೆ ಭರಿಸಲಿದೆ ಎಂಬುದು ಕೂಡ ಸವಾಲಾಗಿದೆ. ಆಸ್ಟ್ರೇಲಿಯಾದ ವೇಗದ ಪಿಚ್‌ನಲ್ಲಿ ಪರಿಣಾಮಕಾರಿಯಾಗಿ ಪ್ರದರ್ಶನ ನೀಡುವ ಸಾಮರ್ಥ್ಯ ಬೂಈಮರಾ ಅವರಿಗೆ ಇದ್ದ ಕಾರಣ ಆ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಆಟಗಾರನ ಸೇರ್ಪಡೆ ಅಗತ್ಯವಿದೆ.

ಬೂಮ್ರಾ ಬದಲಿಗೆ ಯಾರಿಗೆ ಸ್ಥಾನ
ಇನ್ನು ಜಸ್ಪ್ರೀತ್ ಬೂಮ್ರಾ ವಿಶ್ವಕಪ್ ಟೂರ್ನಿಗೆ ಅಲಭ್ಯವಾಗಲಿದ್ದಾರೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಬೂಮ್ರಾ ಬದಲಿಗೆ ಯಾರಿಗೆ ಅವಕಾಶ ದೊರೆಯಲಿದೆ ಎಂಬುದು ಕುತೂಹಲಕಾರಿಯಾಗಿದೆ. ಟೀಮ್ ಇಂಡಿಯಾದ ಮೀಸಲು ವಿಭಾಗದಲ್ಲಿ ವೇಗಿಗಳಾಗಿ ಅನುಭವಿ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಾಹರ್ ಸ್ಥಾನವನ್ನು ಪಡೆದುಕೊಂಡಿದ್ದು ಈ ಪೈಕಿ ಮೊಹಮ್ಮದ್ ಶಮಿಗೆ ಸ್ಥಾನ ದೊರೆಯುವ ಸಾಧ್ಯತೆಯಿದೆ. ಅನುಭವದ ಹಿನ್ನೆಲೆಯಲ್ಲಿ ಶಮಿ ಭಾರತ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಾಹರ್ ಕೂಡ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದು ಆಯ್ಕೆ ಮಂಡಳಿ ಶೀಘ್ರದಲ್ಲೇ ನಿರ್ಧಾರವನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ.

ಇಬ್ಬರು ಪ್ರಮುಖ ಆಟಗಾರರು ಅಲಭ್ಯ
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಅಲಭ್ಯವಾಗಲಿದ್ದಾರೆ. ಕಳೆದ ಏಷ್ಯಾಕಪ್‌ನಲ್ಲಿ ಭಾರತ ತಂಡದ ಭಾಗವಾಗಿದ್ದ ರವೀಂದ್ರ ಜಡೇಜಾ ಬಳಿಕ ಅವರು ಕುಡ ಗಾಯಕ್ಕೆ ತುತ್ತಾಗಿದ್ದು ಸದ್ಯ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ದೀರ್ಘ ಕಾಲದ ವಿಶ್ರಾಂತಿಯ ಅಗತ್ಯವಿರುವ ಕಾರಣ ಜಡೇಜಾ ಮಹತ್ವದ ಟೂರ್ನಿಯಿಂದ ಈಗಾಗಲೇ ಹೊರಗುಳಿದಿದ್ದಾರೆ. ಇದೀಗ ಜಸ್ಪ್ರಿತ್ ಬೂಮ್ರಾ ಕೂಡ ಚುಟುಕು ವಿಶ್ವಕಪ್‌ನಿಂದ ಹೊರಗುಳಿಯುತ್ತಿರುವುದು ನಿರಾಸೆ ಮೂಡಿಸಿದೆ.

ಈಗಾಗಲೇ ಪ್ರಕಟವಾಗಿರುವ ವಿಶ್ವಕಪ್ ಸ್ಕ್ವಾಡ್ ಹೀಗಿದೆ
ಟಿ20 ವಿಶ್ವಕಪ್‌ಗಾಗಿ ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್
ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications