Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸೆಮಿಫೈನಲ್‌ ಪಂದ್ಯಕ್ಕೂ ಮುನ್ನ ವಿಶೇಷ ಭೋಜನ ಸವಿದ ಟೀಮ್ ಇಂಡಿಯಾ ಆಟಗಾರರು

T20 world cup: Indian Players Enjoys Dinner At British Raj Before Semi-final clash against England

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧದ ಸೆಣೆಸಾಟಕ್ಕೂ ಮುನ್ನ ಭಾರತೀಯ ಆಟಗಾರರು 'ಬ್ರಿಟಿಷ್ ರಾಜ್' ನಲ್ಲಿ ಭೋಜನ ಸವಿದಿದ್ದಾರೆ. ಆಸ್ಟ್ರೇಲಿಯಾಕ್ಕೆ ಆಗಮಿಸಿದಾಗಿನಿಂದ 'ಮೆನ್ ಇನ್ ಬ್ಲೂ' ಪಡೆ ಟೂರ್ನಿಯ ಮೇಲೆಯೇ ಸಂಪೂರ್ಣವಾಗಿ ಕೇಂದ್ರೀಕರಿಸಿದ್ದರು. ಇದೀಗ ವಿಶ್ವಕಪ್ ಟೂರ್ನಿ ಅಂತಿಮ ಘಟ್ಟಕ್ಕೆ ತಲುಪುತ್ತಿದ್ದಂತೆಯೇ ಸೆಮಿ-ಫೈನಲ್‌ಗೆ ಮುಂಚಿತವಾಗಿ ಪ್ರಸಿದ್ಧ ಭಾರತೀಯ ರೆಸ್ಟೋರೆಂಟ್‌ನಲ್ಲಿ ಭೋಜನ ಕೂಟದಲ್ಲಿ ಭಾಗಿಯಾಗಿದ್ದಾರೆ

ಗುರುವಾರ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೆಣೆಸಾಟಲಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ ವಿಶ್ವಕಪ್‌ನ ಫೈನಲ್ ಹಂತಕ್ಕೇರುವ ವಿಶ್ವಾಸದಲ್ಲಿದೆ. ಅಡಿಲೇಡ್‌ನಲ್ಲಿರುವ ಅಡಿಲೇಡ್ ಓವಲ್‌ನಲ್ಲಿ ಈ ಪಂದ್ಯ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ಸೆಮಿಫೈನಲ್‌ಗೇರುವಲ್ಲಿ ಯಶಸ್ವಿಯಾಗಿದೆ. ಸೂಪರ್ 12 ಹಂತದಲ್ಲಿ ಆಡಿರುವ ಐದು ಪಂದ್ಯಗಳ ಪೈಕಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 8 ಅಂಕಗಳನ್ನು ಪಡೆದು ಮೊದಲ ಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಸೆಮಿಫೈನಲ್‌ನಲ್ಲಿ ಭಾರತ ತಂಡಕ್ಕೆ ಇಂಗ್ಲೆಂಡ್ ಎದುರಾಳಿಯಾಗಿದ್ದು ಗುರುವಾರ ಈ ಎರಡು ತಂಡಗಳ ಮುಖಾಮುಖಿಯ ನಡೆಯಲಿದೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಅಲೆಕ್ಸ್ ಹೇಲ್ಸ್, ಟೈಮಲ್ ಮಿಲ್ಸ್

Story first published: Tuesday, November 8, 2022, 23:58 [IST]
Other articles published on Nov 8, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+