ಟಿ20 ವಿಶ್ವಕಪ್: ಭಾರತವೇ ಗೆಲ್ಲುವ ನೆಚ್ಚಿನ ತಂಡ: ವಿರಾಟ್ ಪಡೆಯನ್ನು ಹಾಡಿ ಹೊಗಳಿದ ಇನ್ಜಮಾಮ್

ಟಿ20 ವಿಶ್ವಕಪ್‌ನಲ್ಲಿ ಒಂದೆಡೆ ಅರ್ಹತಾ ಪಂದ್ಯಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಅಭ್ಯಾಸ ಪಂದ್ಯಗಳು ಭರ್ಜರಿಯಾಗಿ ನಡೆಯುತ್ತಿದೆ. ಈ ಪಂದ್ಯಗಳ ಮೂಲಕ ತಂಡಗಳು ಯಾವ ಫಾರ್ಮ್‌ನಲ್ಲಿವೆ ಎಂಬುದು ಕ್ರಿಕೆಟ್ ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಅದರಲ್ಲೂ ಟೀಮ್ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳಲ್ಲಿಯೂ ಅದ್ಭುತವಾದ ಪ್ರದರ್ಶನ ನೀಡಿ ಗೆದ್ದು ಬೀಗಿದೆ. ಮೊದಲಿಗೆ ಇಂಗ್ಲೆಂಡ್ ತಂಡದ ವಿರುದ್ಧ 8 ವಿಕೆಟ್‌ಗಳ ಗೆಲುವು ಸಾಧಿಸಿದರೆ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಜಯಭೇರಿ ಬಾರಿಸಿದೆ. ಈ ಎರಡು ಪಂದ್ಯಗಳಲ್ಲಿ ಭಾರತದ ಪ್ರದರ್ಶನ ನೋಡಿದ ನಂತರ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಹಾಗೂ ಅಭಿಮಾನಿಗಳು ತಂಡದ ಮೇಲಿನ ವಿಶ್ವಾಸವನ್ನು ಹೆಚ್ಚಿಸಿಕೊಂಡಿರುವುದರಲ್ಲಿ ಅನುಮಾನವಿಲ್ಲ.

ಟಿ20 ವಿಶ್ವಕಪ್: ಸೂಪರ್ 12 ಸುತ್ತಿಗೆ ಲಗ್ಗೆಯಿಟ್ಟ ಮೊದಲನೇ ತಂಡ ಶ್ರೀಲಂಕಾ; ಅತ್ತ ಸೋತ ಪಾಕಿಸ್ತಾನ!ಟಿ20 ವಿಶ್ವಕಪ್: ಸೂಪರ್ 12 ಸುತ್ತಿಗೆ ಲಗ್ಗೆಯಿಟ್ಟ ಮೊದಲನೇ ತಂಡ ಶ್ರೀಲಂಕಾ; ಅತ್ತ ಸೋತ ಪಾಕಿಸ್ತಾನ!

ಇನ್ನು ಟೀಮ್ ಇಂಡಿಯಾದ ಈ ಫಾರ್ಮ್ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ದೇಶಗಳಿಗೂ ಕಠಿಣ ಸಂದೇಶವನ್ನು ನೀಡುತ್ತಿದೆ. ಅದರಲ್ಲೂ ಭಾರತದ ವಿರುದ್ಧ ಮೊದಲ ಪಂದ್ಯವನ್ನಾಡಲು ಸಜ್ಜಾಗಿರುವ ಪಾಕಿಸ್ತಾನ ತಂಡದ ಆತ್ಮವಿಶ್ವಾಸ ಕುಸಿದಿರುವುದರಲ್ಲಿ ಅನುಮಾನವಿಲ್ಲ. ಈ ಮಧ್ಯೆ ಪಾಕಿಸ್ತಾನದ ಮಾಜಿ ನಾಯಕ ದಿಗ್ಗಜ ಕ್ರಿಕೆಟಿಗ ಇನ್ಜಮಾಮ್ ಉಲ್ ಹಕ್ ಟೀಮ್ ಇಂಡಿಯಾದ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಭಾರತ ಎಂದು ನೇರವಾಗಿಯೇ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತ ತಂಡಕ್ಕೆ ಈ ಬಾರಿಯ ಟಿ20 ವಿಶ್ವಕಪ್‌ ಗೆಲ್ಲುವ ಅತ್ಯುತ್ತಮ ಅವಕಾಶವಿದೆ ಎಂದಿದ್ದಾರೆ. ಇದಕ್ಕೆ ಯುಎಇ ಹಾಗೂ ಒಮಾನ್‌ನ ಪರಿಸ್ಥಿತಿ ಕಾರಣ ಎಂದು ಕೂಡ ಇನ್ಜಮಾಮ್ ತಿಳಿಸಿದ್ದಾರೆ.

ಈ ಕಾರಣದಿಂದಲೇ ಭಾರತವನ್ನು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಇದುವರೆಗೂ ಸೋಲಿಸಲು ಆಗಿಲ್ಲ: ಕಪಿಲ್ ದೇವ್ಈ ಕಾರಣದಿಂದಲೇ ಭಾರತವನ್ನು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಇದುವರೆಗೂ ಸೋಲಿಸಲು ಆಗಿಲ್ಲ: ಕಪಿಲ್ ದೇವ್

ಟೀಮ್ ಇಂಡಿಯಾಗೆ ಹೆಚ್ಚಿನ ಅವಕಾಶವಿದೆ

ಟೀಮ್ ಇಂಡಿಯಾಗೆ ಹೆಚ್ಚಿನ ಅವಕಾಶವಿದೆ

"ಯಾವುದೇ ಟೂರ್ನಮೆಂಟ್‌ನಲ್ಲಿಯೂ ನಾವು ಇದೇ ತಂಡ ಗೆಲ್ಲಲಿದೆ ಎಂದು ಹೇಳಲು ಸಾಧ್ಯವಿಲ್ಲ. ಒಂದು ತಂಡ ಗೆಲ್ಲಲು ಎಷ್ಟು ಸಾಧ್ಯತೆಯಿದೆ ಎಂದು ಊಹೆಯನ್ನು ಮಾಡಬಹುದಷ್ಟೇ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಉಳಿದ ಎಲ್ಲಾ ತಂಡಗಳಿಗಿಂತ ಟೀಮ್ ಇಂಡಿಯಾಗೆ ಹೆಚ್ಚಿನ ಅವಕಾಶವಿದೆ. ಅದರಲ್ಲೂ ಇಂತಾ ಪರಿಸ್ಥಿತಿಯಲ್ಲಿ ಅವರ ಪ್ರದರ್ಶನ ಅದ್ಭುತವಾಗಿದೆ. ಅಲ್ಲದೆ ಭಾರತ ತಂಡದಲ್ಲಿ ಸಾಕಷ್ಟು ಅನುಭವಿ ಟಿ200 ಆಟಗಾರರಿದ್ದಾರೆ" ಎಂದಿದ್ದಾರೆ ಇನ್ಜಮಾಮ್ ಉಲ್ ಹಕ್.

ಕೋಹ್ಲಿಯ ಅವಶ್ಯಕತೆಯಿಲ್ಲದೆ ಭಾರತ ಗೆದ್ದಿದೆ

ಕೋಹ್ಲಿಯ ಅವಶ್ಯಕತೆಯಿಲ್ಲದೆ ಭಾರತ ಗೆದ್ದಿದೆ

ಇನ್ನು ಮುಂದುವರಿದು ಮಾತನಾಡಿದ ಇನ್ಜಮಾಮ್ ಉಲ್ ಹಲ್ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ತಂಡ ನೀಡಿದ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 153 ರನ್‌ಗಳನ್ನು ಬೆನ್ನಟ್ಟುವ ಸಂದರ್ಭದಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಯ ಅಗತ್ಯವೇ ಇಲ್ಲದೆ ಭಾರತ ಭರ್ಜರಿಯಾಗಿ ಗೆದ್ದು ಬೀಗಿದೆ. ಭಾರತ ಎಷ್ಟು ಅಪಾಯಕಾರಿ ತಂಡ ಎಂಬುದಕ್ಕೆ ಇದು ಅತ್ಯುತ್ತಮ ಉದಾಹರಣೆ ಎಂದಿದ್ದಾರೆ.

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್; ಎಷ್ಟು ರನ್ ನೀಡಿದ್ರು ಗೊತ್ತಾ?

ಭಾರತ ಪಾಕ್ ಪಂದ್ಯ ಫೈನಲ್‌ಗೂ ಮೊದಲಿನ ಫೈನಲ್

ಭಾರತ ಪಾಕ್ ಪಂದ್ಯ ಫೈನಲ್‌ಗೂ ಮೊದಲಿನ ಫೈನಲ್

ಇನ್ನು ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯದ ಬಗ್ಗೆಯೂ ಇನ್ಜಮಾಮ್ ಉಲ್ ಹಕ್ ತಮ್ಮ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. "ಭಾರತ ಹಾಗೂ ಪಾಕಿಸ್ತಾನ ನಡುವಿನ ಸೂಪರ 12 ಹಂತದ ಮೊದಲ ಪಂದ್ಯ ಫೈನಲ್‌ಗಿಂತ ಮೊದಲಿನ ಫೈನಲ್ ಪಂದ್ಯವಾಗಿದೆ. ಇಷ್ಟು ದೊಡ್ಡ ಪ್ರಮಾಣದ ಪ್ರಚಾರ ಯಾವ ಆಟಕ್ಕೂ ದೊರೆಯುವುದಿಲ್ಲ. 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮೊದಲ ಪಂದ್ಯದಲ್ಲಿ ಹಾಗೂ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಆ ಎರಡು ಪಂದ್ಯಗಳು ಕೂಡ ಫೈನಲ್ ಪಂದ್ಯದಂತೆಯೇ ಭಾಸವಾಗಿತ್ತು. ಈ ಪಂದ್ಯದಲ್ಲಿ ಗೆದ್ದ ತಂಡ ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲಿದೆ. ಅಲ್ಲದೆ ಶೇಕಡಾ 50ರಷ್ಟು ತನ್ನ ಮೇಲಿರುವ ಒತ್ತಡವನ್ನು ಕಳೆದುಕೊಳ್ಳಲಿದೆ" ಎಂದಿದ್ದಾರೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್.

Rohit Sharma ನಾಯಕನಾಗಿ Kohliಯನ್ನು ಬಳಸಿಕೊಂಡಿದ್ದು ಹೀಗೆ | Oneindia Kannada

For Quick Alerts
ALLOW NOTIFICATIONS
For Daily Alerts
Story first published: Thursday, October 21, 2021, 9:05 [IST]
Other articles published on Oct 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X