ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಸ್ಪಿನ್ ದಾಳಿಗೆ ಪರದಾಡಿದ ಭಾರತೀಯ ಆಟಗಾರರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಇನ್ಜಮಾಮ್

T20 World Cup: Inzamam ul Haq shocked after India performence against New zealand

ನ್ಯೂಜಿಲೆಂಡ್ ತಂಡದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಸ್ಪಿನ್ ದಾಳಿಯನ್ನು ಎದುರಿಸಲು ಪರದಾಡಿದ ರೀತಿಗೆ ಅಚ್ಚರಿಯಾಯಿತು ಎಂದು ಪಾಖಿಸ್ತಾನ ಕ್ರಿಕೆಟ್ ತಮಡದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ಹೇಳಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಇನ್ಜಮಾಮ್ ಉಲ್ ಹಕ್ ಭಾರತ ತಂಡ ಪಾಕ್ ವಿರುದ್ಧದ ಪಂದ್ಯದಲ್ಲಿ ತನಗೆ ತಾನೇ ಯಾವ ಕಾರಣಕ್ಕಾಗಿ ಒತ್ತಡವನ್ನು ಹೇರಿಕೊಂಡಿತು ಎಂಬುದು ಅರ್ಥವಾಗಲಿಲ್ಲ ಎಂದಿದ್ದಾರೆ.

ಇನ್ನು ಭಾರತದ ಈವರೆಗಿನ ಪ್ರದರ್ಶನವನ್ನು ನೋಡಿದರೆ ಭಾರತ ತಂಡ ನಿರುತ್ಸಾಹಗೊಂಡಂತೆ ಭಾಸವಾಗುತ್ತಿದೆ ಎಂದಿದ್ದಾರೆ ಇನ್ಜಮಾಮ್ ಉಲ್ ಹಕ್. ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ 10 ವಿಕೆಟ್‌ಗಳ ಅಂತರದಿಂದ ಆಘಾತಕಾರಿಯಾಗಿ ಸೋಲು ಕಂಡಿತ್ತು. ಪಾಕಿಸ್ತಾನದ ವಿರುದ್ಧಧ ಆಘಾತಕಾರಿ ಸೋಲಿನ ಬಳಿಕ ಭಾರತ ಪಿಟಿದೇಳಲಿದೆ ಎಂಬ ವಿಶ್ವಾಸ ಎಲ್ಲರಲ್ಲಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ನ್ಯೂಜಿಲೆಂಡ್ ವಿರುದ್ಧ ಭಾರತ 8 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ. ಇನ್ನು ಈ ಎರಡು ಪಂದ್ಯಗಳಲ್ಲಿಯೂ ಭಾರತದ ಬ್ಯಾಟಿಂಗ್ ವಿಭಾಗ ಬೆದರಿದಂತೆ ಕಂಡು ಬಂದಿತ್ತು ಎಂದಿದ್ದಾರೆ.

ಟಿ20 ವಿಶ್ವಕಪ್: ಭಾರತಕ್ಕೆ ಸೋಲುಣಿಸಿದ ಕಿವೀಸ್ ಪಡೆ; ವಿಶ್ವಕಪ್ ಕನಸು ಬಹುತೇಕ ಭಗ್ನಟಿ20 ವಿಶ್ವಕಪ್: ಭಾರತಕ್ಕೆ ಸೋಲುಣಿಸಿದ ಕಿವೀಸ್ ಪಡೆ; ವಿಶ್ವಕಪ್ ಕನಸು ಬಹುತೇಕ ಭಗ್ನ

ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ 151 ರನ್‌ಗಳಿಸಲು ಶಕ್ತವಾಗಿದ್ದ ಭಾರತದ ಬ್ಯಾಟಿಂಗ್ ಪಡೆ ನ್ಯೂಜಿಲೆಂಡ್ ವಿರುದ್ಧ ಕೇವಲ 110 ರನ್‌ಗಳಿಸಲಷ್ಟೇ ಶಕ್ತವಾಗಿತ್ತು. ಅದರಲ್ಲೂ 7-15 ಓವರ್‌ಗಳ ಅಂತರದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗ ಒಂದೇ ಒಂದು ಬೌಂಡರಿ ಬಾರಿಸಲು ಕೂಡ ವಿಫಲವಾಗಿತ್ತು. ಇಂಗ್ಲೆಂಡ್ ಸ್ಪಿನ್ನರ್‌ಗಳಾದ ಮಿಚೆಲ್ ಸ್ಯಾಂಟ್ನರ್ ಹಾಗೂ ಇಶ್ ಸೋಧಿ ಬೌಲಿಂಗ್‌ನಲ್ಲಿ ಭಾರತ ತಣಡದ ದಾಂಡಿಗರು ಸಂಫೂರ್ಣ ಪರದಾಡಿದರು. ಈ ಇಬ್ಬರು ಎಸೆದ 8 ಓವರ್‌ಗಳಲ್ಲಿ ಭಾರತ ಕೇವಲ 32 ರನ್‌ಗಳಿಸಿತ್ತು. ಅದರಲ್ಲೂ ಇಶ್ ಸೋಧಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ದೊಡ್ಡ ಆಘಾತ ನೀಡಿದ್ದರು.

"ಭಾರತ vs ಪಾಕಿಸ್ತಾನ ಪಂದ್ಯದ ನಂತ ಈ ಪಂದ್ಯವೇ ಅತಿ ದೊಡ್ಡ ಪಂದ್ಯ ಎನಿಸಿತ್ತು. ಆಸ್ಟ್ರೇಲಿಯಾ vs ಇಂಗ್ಲೆಂಡ್ ಪಂದ್ಯಕ್ಕಿಂತಲೂ ಹೆಚ್ಚಿನ ಕುತೂಹಲವನ್ನು ಈ ಪಂದ್ಯ ಮೂಡಿಸಿತ್ತು. ಆದರೆ ಭಾರತ ತಂಡದ ಆಡಿದ ರೀತಿಗೆ ನಾನು ಅಚ್ಚರಿಗೊಳಗಾಗಿದ್ದೇನೆ. ಅವರು ಸ್ಪಷ್ಟವಾಗಿ ತಮ್ಮ ಉತ್ಸಾಹವನ್ನು ಕಳೆದುಕೊಂಡಿದ್ದರು. ಇಂತಾ ದೊಡ್ಡ ತಂಡ ಅದ ಹೇಗೆ ತನ್ನ ಮೇಲೆ ಒತ್ತಡವನ್ನು ಹೇರಿಕೊಳ್ಳುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ" ಎಂದು ಇನ್ಜಮಾಮ್ ಉಲ್ ಹಕ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

"ನ್ಯೂಜಿಲೆಂಡ್ ತಮಡದ ಈ ಸ್ಪಿನ್ನರ್‌ಗಳು ಉತ್ತಮ ಬೌಲರ್‌ಗಳು, ಆದರೆ ಅವರು ವಿಶ್ವದರ್ಜೆಯ ಬೌಲರ್‌ಗಳು ಅಲ್ಲ. ಅದರೆ ಭಾರತೀಯ ಬ್ಯಾಟರ್‌ಗಳು ಅವರ ವಿರುದ್ಧ ಒಂಟಿ ರನ್ ಪಡೆಯಲು ಪರದಾಡಿದರು. ವಿರಾಟ್ ಕೊಹ್ಲಿಯ ತಾಕತ್ತು ಸ್ಪಿನ್ ಬೌಲಿಂಗ್ ಎದುರಿಸುವುದು. ಆತ ಕೂಡ ಸ್ಪಿನ್ ಬೌಲಿಂಗ್‌ನಲ್ಲಿ ಸಿಂಗಲ್ಸ್ ಪಡೆಯಲು ಕೂಡ ಕಷ್ಟ ಪಟ್ಟಿದ್ದಾರೆ" ಎಂದು ಇನ್ಜಮಾಮ್ ಉಲ್ ಹಕ್ ಹೇಳಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಮೊದಲಿಗೆ ಬ್ಯಾಟಿಂಗ್ ನಡೆಸಿ ಕೇವಲ 110 ರನ್‌ಗಳಿಸಲಷ್ಟೇ ಶಕ್ತವಾಯಿತು. ಟೀಮ್ ಇಂಡಿಯಾ ಪರವಾಗಿ ಯಾರಿಂದಲೂ ಕೂಡ ಉತ್ತಮ ಜೊತೆಯಾಟ ಬಂದಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ಉತ್ತಮ ಮೊತ್ತದ ಗುರಿ ನೀಡಲು ಸಾಧ್ಯವಾಗಲೇ ಇಲ್ಲ. ಭಾರತ ನೀಡಿದ 111 ರನ್‌ಗಳ ಗುರಿಯನ್ನು ನ್ಯೂಜಿಲೆಂಡ್ ಪಡೆ ಕೇವಲ 2 ವಿಕೆಟ್ ಕಳೆದುಕೊಂಡು 14ನೇ ಓವರ್‌ನ್ಲಲಿಯೇ ಗೆದ್ದು ಬೀಗಿತು. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಪಡೆ ಗೆಲುವು ಸಾಧಿಸಲು ಯಶಸ್ವಿಯಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಗೆಲ್ಲಲು ಈ ಮೂವರು ಭಾರತ ತಂಡದಲ್ಲಿ ಇರಲೇಬೇಕು: ಸಲ್ಮಾನ್ ಬಟ್ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಗೆಲ್ಲಲು ಈ ಮೂವರು ಭಾರತ ತಂಡದಲ್ಲಿ ಇರಲೇಬೇಕು: ಸಲ್ಮಾನ್ ಬಟ್

ಈ ಬಾರಿಯ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತಕ್ಕೇರಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೇರುವ ಅವಕಾಶ ಬಹುತೇಕ ಕಮರಿದಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಭಾರತ 8 ವಿಕೆಟ್‌ಗಳ ಅಂತರದಿಂದ ಕಳೆದುಕೊಂಡ ಕಾರಣ ಸತತ ಎರಡನೇ ಸೋಲು ಅನುಭವಿಸಿದೆ. ಈ ಸೋಲಿನ ಬಗ್ಗೆ ಈಗ ಸಾಕಷ್ಟು ಚರ್ಚೆ ನಡೆಯುತ್ತಿದ್ದು ತಮ್ಮದೇ ಆದ ವಿಶ್ಲೇಷಣೆಗಳನ್ನು ಮಾಡಿತ್ತಿದ್ದಾರೆ.

ಟೀಮ್ ಇಂಡಿಯಾ ತನ್ನ ಮುಂದಿನ ಪಂದದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಈ ಪಂದ್ಯ ನವೆಂಬರ್ 3 ರಂದು ನಡೆಯಲಿದ್ದು ಅಬುಧಾಬಿಯಲ್ಲಿ ಆಯೋಜನೆಯಾಗಲಿದೆ.

Story first published: Monday, November 1, 2021, 18:24 [IST]
Other articles published on Nov 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X