ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind Vs Zim: ಕೆಎಲ್ ರಾಹುಲ್, ಸೂರ್ಯಕುಮಾರ್ ಅರ್ಧಶತಕ, 186 ರನ್‌ ಕಲೆಹಾಕಿದ ಟೀಂ ಇಂಡಿಯಾ

T20 World Cup: KL Rahul And Suryakumar Yadav Power Helps Team India To Get 186 Runs

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 20 ಓವರ್ ಗಳಲ್ಲಿ ವಿಕೆಟ್ ನಷ್ಟಕ್ಕೆ ರನ್ 186 ಕಲೆಹಾಕಿದ್ದು, ಜಿಂಬಾಬ್ವೆ ಗೆಲುವಿಗೆ ಬೃಹತ್ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿತು. ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. 13 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಎಚ್ಚರಿಕೆಯಿಂದ ರಾಹುಲ್ ಜೊತೆಗೂಡಿ ರನ್ ಗಳಿಸಿದರು.

ಕೆಎಲ್ ರಾಹುಲ್ ಕಳೆದ ಪಂದ್ಯದಲ್ಲಿ ಕಂಡುಕೊಂಡ ಫಾರ್ಮ್‌ ಅನ್ನು ಮುಂದುವರೆಸಿದರು. 35 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಸಹಿತ 51 ರನ್ ಗಳಿಸಿದರು. ಈ ಟಿ20 ವಿಶ್ವಕಪ್‌ನಲ್ಲಿ ತಮ್ಮ ಎರಡನೇ ಅರ್ಧಶತಕವನ್ನು ದಾಖಲಿಸಿದರು.

Pakistan Vs Bangladesh: ಮೂರನೇ ಅಂಪೈರ್ ಮಾಡಿದ ಎಡವಟ್ಟಿಗೆ ಬಲಿಯಾದ ಶಕೀಬ್Pakistan Vs Bangladesh: ಮೂರನೇ ಅಂಪೈರ್ ಮಾಡಿದ ಎಡವಟ್ಟಿಗೆ ಬಲಿಯಾದ ಶಕೀಬ್

ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 26 ರನ್‌ ಗಳಿಸಿ ಔಟಾದರು. ದಿನೇಶ್ ಕಾರ್ತಿಕ್ ಬದಲು ತಂಡದಲ್ಲಿ ಸ್ಥಾನ ಪಡೆದ ರಿಷಬ್ ಪಂತ್ ರನ್ ಗಳಿಸುವಲ್ಲಿ ವಿಫಲರಾದರು. 5 ಎಸೆತಗಳಲ್ಲಿ ಕೇವಲ 3 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಅಂತಿಮವಾಗಿ ಸೂರ್ಯಕುಮಾರ್ ಯಾದವ್ ಜಿಂಬಾಬ್ವೆ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. ಕೇವಲ 25 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಿತ 61 ರನ್ ಚಚ್ಚಿದ ಸೂರ್ಯಕುಮಾರ್ ಭಾರತ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು.

2022ರ ಕ್ಯಾಲೆಂಡರ್ ವರ್ಷದಲ್ಲಿ ಟಿ20 ಮಾದರಿಯಲ್ಲಿ 1000 ರನ್ ಗಳಿಸಿ ಸೂರ್ಯಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದರು.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಟೋನಿ ಮುನ್ಯೊಂಗಾ, ರಿಯಾನ್ ಬರ್ಲ್, ಟೆಂಡೈ ಚಟಾರಾ, ರಿಚರ್ಡ್ ನಾಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ

Story first published: Sunday, November 6, 2022, 15:22 [IST]
Other articles published on Nov 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X