For Quick Alerts
ALLOW NOTIFICATIONS  
For Daily Alerts
 

T20 World cup: ಟಿ20 ತಂಡಕ್ಕೆ ಮರಳುವ ಆಸೆ ವ್ಯಕ್ತಪಡಿಸಿದ ಕೊಹ್ಲಿ-ರೋಹಿತ್: 2024ರ ವಿಶ್ವಕಪ್‌ಗೆ ಅವಕಾಶ?

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಿರುವ ದೊಡ್ಡ ಪ್ರಶ್ನೆ ಟಿ20 ವಿಶ್ವಕಪ್‌ ತಂಡವನ್ನು ಕಟ್ಟುವುದಾಗಿದೆ. ಏಕೆಂದರೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರು ಚುಟುಕು ಫಾರ್ಮಟ್‌ನಿಂದ ದೂರ ಸರೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾ ಸ್ಟಾರ್ಸ್‌ ಮೌನ ಮುರಿದಿದ್ದಾರೆ.

ಟೀಮ್ ಇಂಡಿಯಾ ವೆಸ್ಟ್‌ ಇಂಡೀಸ್‌ ಹಾಗೂ ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ತನ್ನದಾಗಿಸಿಕೊಳ್ಳಬೇಕೆಂಬ ಛಲವನ್ನು ಹೊಂದಿದೆ. ಈ ನಿಟ್ಟಿನಲ್ಲಿ ತಂಡ ಬಲಿಷ್ಠ ತಂಡವನ್ನು ಕಟ್ಟುವ ಇರಾದೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ನದ್ದಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಬ್ಬರೂ ಸ್ಟಾರ್ ಆಟಗಾರರು ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರಾ? ಭಾರತದ ಪರ ಟಿ20 ಪಂದ್ಯಗಳಲ್ಲಿ ಉಭಯ ಆಟಗಾರರು ಕಣಕ್ಕೆ ಇಳಿಯುವುದಿಲ್ಲವೇ? ಈ ಪ್ರಶ್ನೆಗಳು ಸದ್ಯ ಅಭಿಮಾನಿಗಳ ಮನದಲ್ಲಿ ಮೂಡಿವೆ.

T20 World cup: Kohli-Rohit expressed desire to return to T20 team

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೇ ತಮ್ಮ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರೂ ದಿಗ್ಗಜರು ಭಾರತಕ್ಕಾಗಿ ಟಿ20 ಮಾದರಿಯಲ್ಲಿ ಆಡಲು ಬಯಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಟಿ20 ಪಂದ್ಯಗಳಿಗೆ ಆಯ್ಕೆಯಾದರೆ ಆಡಲು ಲಭ್ಯವಿರುವುದಾಗಿಯೂ ಹೇಳಿದ್ದಾರೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿಲ್ಲ. ಆದರೆ ಇಬ್ಬರೂ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಹಲವು ಮಾಧ್ಯಮಗಳಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಲು ಬಯಸುವುದಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಇಬ್ಬರೂ ದಿಗ್ಗಜರು ಟಿ20 ವಿಶ್ವಕಪ್ ನಲ್ಲಿ ಆಡುತ್ತಾರಾ ಎಂಬ ಅನುಮಾನ ಮೂಡಿದ್ದು, ಇದೀಗ ಮುಂಬರುವ ಟಿ20 ವಿಶ್ವಕಪ್ ನಲ್ಲಿ ಇಬ್ಬರೂ ಹಿರಿಯ ಆಟಗಾರರು ಕಣಕ್ಕಿಳಿಯಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

T20 World cup: Kohli-Rohit expressed desire to return to T20 team

ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಗಾಯದಿಂದ ಬಳಲುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಭಾರತ ಟಿ20 ತಂಡಕ್ಕೆ ಹೊಸ ನಾಯಕನ ಅಗತ್ಯವಿದೆ. ಹೀಗಾಗಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಬೇಕಿದೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಜನವರಿ 11 ರಂದು ನಡೆಯಲಿದೆ. ಇದಾದ ಬಳಿಕ ಭಾರತ ತಂಡ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಜನವರಿ 25 ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದೆ.

Story first published: Friday, January 5, 2024, 12:46 [IST]
Other articles published on Jan 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+