ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು

These are the 3 Players Who Can Replace Hardik Pandya In Team India

ಸದ್ಯ ಎಲ್ಲೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ಸಾಕಷ್ಟು ಚರ್ಚೆಗೀಡಾಗಿದ್ದು ಈ ಟೆಸ್ಟ್ ಸರಣಿ ಮುಗಿದ ನಂತರ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದೆ. ಈ ಬಾರಿಯ ಐಪಿಎಲ್ ಟೂರ್ನಿ ಮುಗಿದ ನಂತರ ಯುಎಇಯಲ್ಲಿಯೇ ಬಹು ನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಅಕ್ಟೋಬರ್ 17 ರಂದು ಆರಂಭವಾಗಿ ನವೆಂಬರ್ 14 ರಂದು ಕೊನೆಗೊಳ್ಳಲಿದೆ.

ಭಾರತ vs ಇಂಗ್ಲೆಂಡ್: ಲಾರ್ಡ್ಸ್ ಅಂಗಳದಲ್ಲಿ ಸೋತರೂ ಟೀಮ್ ಇಂಡಿಯಾ ಎಂದರೆ ಭಯವಿಲ್ಲ ಎಂದ ಸಿಲ್ವರ್‌ವುಡ್!ಭಾರತ vs ಇಂಗ್ಲೆಂಡ್: ಲಾರ್ಡ್ಸ್ ಅಂಗಳದಲ್ಲಿ ಸೋತರೂ ಟೀಮ್ ಇಂಡಿಯಾ ಎಂದರೆ ಭಯವಿಲ್ಲ ಎಂದ ಸಿಲ್ವರ್‌ವುಡ್!

ಹೀಗೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅಧಿಕೃತ ವೇಳಾಪಟ್ಟಿಯನ್ನು ಕಳೆದ ಮಂಗಳವಾರದಂದು ( ಆಗಸ್ಟ್ 17 ) ಐಸಿಸಿ ಪ್ರಕಟಿಸಿದೆ. ಮುಂಬರಲಿರುವ ಈ ವಿಶ್ವಕಪ್ ಟೂರ್ನಿಯ ಕುರಿತು ಈಗಾಗಲೇ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗುತ್ತಿದ್ದು ಟೀಮ್ ಇಂಡಿಯಾ ತಂಡದಲ್ಲಿ ಯಾವ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಟೀಮ್ ಇಂಡಿಯಾವನ್ನು 2 ಪ್ರತ್ಯೇಕ ತಂಡಗಳಾಗಿ ವಿಂಗಡಿಸಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸಲಾಗಿತ್ತು. ಹೀಗಾಗಿ ಟೀಂ ಇಂಡಿಯಾದಲ್ಲಿ ಪ್ರಸ್ತುತ ಲಭ್ಯವಿರುವ ಆಟಗಾರರ ಸಂಖ್ಯೆ ದೊಡ್ಡ ಮಟ್ಟದಲ್ಲಿಯೇ ಇದ್ದು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಯಾವ ಯಾವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಿದೆ ಎಂಬುದು ಸದ್ಯ ಸಾಕಷ್ಟು ಚರ್ಚೆಗೀಡಾಗುತ್ತಿದೆ.

ಭಾರತ vs ಇಂಗ್ಲೆಂಡ್: ಆಗೊಂದು ಈಗೊಂದು ಶತಕ ಬಾರಿಸುವವರೇ ತಂಡದಲ್ಲಿದ್ದಾರೆ ಎಂದ ಸಚಿನ್!ಭಾರತ vs ಇಂಗ್ಲೆಂಡ್: ಆಗೊಂದು ಈಗೊಂದು ಶತಕ ಬಾರಿಸುವವರೇ ತಂಡದಲ್ಲಿದ್ದಾರೆ ಎಂದ ಸಚಿನ್!

ಇನ್ನು ಕಳೆದ ಕೆಲ ತಿಂಗಳುಗಳಿಂದ ಸತತವಾಗಿ ಕೆಟ್ಟ ಪ್ರದರ್ಶನ ನೀಡುತ್ತಾ ಮಂಕಾಗಿರುವ ಹಾರ್ದಿಕ್ ಪಾಂಡ್ಯಗೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ಸಿಗುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ 2 ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದಿದ್ದ ಹಾರ್ದಿಕ್ ಪಾಂಡ್ಯ ಒಂದು ಪಂದ್ಯದಲ್ಲಿ 9 ರನ್ ಮತ್ತು ಮತ್ತೊಂದು ಪಂದ್ಯದಲ್ಲಿ ಡಕ್ ಔಟ್ ಆಗುವುದರ ಮೂಲಕ ಮತ್ತೆ ನಿರಾಸೆ ಮೂಡಿಸಿದರು. ಭಾರತದ ಟಿಟ್ವೆಂಟಿ ಸ್ಪೆಷಲಿಸ್ಟ್ ಎಂದೇ ಖ್ಯಾತಿಯನ್ನು ಪಡೆದಿದ್ದ ಹಾರ್ದಿಕ್ ಪಾಂಡ್ಯ ಕಳಪೆ ಫಾರ್ಮ್‌ನಲ್ಲಿದ್ದು, ಅತ್ತ ಭಾರತದ ಇನ್ನಿತರ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದುಕೊಳ್ಳುವುದು ಬಹುತೇಕ ಅನುಮಾನವಾಗಿದ್ದು, ಪಾಂಡ್ಯ ಬದಲು ಈ ಕೆಳಕಂಡ ಮೂವರು ಆಟಗಾರರು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಬದಲು ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

1. ಶಾರ್ದೂಲ್ ಠಾಕೂರ್

1. ಶಾರ್ದೂಲ್ ಠಾಕೂರ್

ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ್ದ ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಪಂದ್ಯಗಳಲ್ಲಿಯೂ ಸಹ ಟೀಮ್ ಇಂಡಿಯಾ ಪರ ಉತ್ತಮ ಆಟವನ್ನು ಪ್ರದರ್ಶಿಸಿದ್ದರು. ಹಾರ್ದಿಕ್ ಪಾಂಡ್ಯ ಆಡುತ್ತಿದ್ದ ಮಟ್ಟದ ಆಟವನ್ನು ಆಡದೇ ಇದ್ದರೂ ಸಹ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪರ ಒಂದೊಳ್ಳೆ ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರ ಎನಿಸಿಕೊಂಡಿದ್ದು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಜಾಗವನ್ನು ಪಡೆದುಕೊಳ್ಳಬಹುದಾದ ಆಟಗಾರರ ಪಟ್ಟಿಯಲ್ಲಿದ್ದಾರೆ.

2. ದೀಪಕ್ ಚಹಾರ್

2. ದೀಪಕ್ ಚಹಾರ್

ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ 82 ಎಸೆತಗಳಿಗೆ 69 ರನ್ ಬಾರಿಸಿ ಟೀಮ್ ಇಂಡಿಯಾವನ್ನು ಜಯದ ದಡ ತಲುಪಿಸಿದ ದೀಪಕ್ ಚಹರ್ ಸದ್ಯ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಈಗಾಗಲೇ ತಾನು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಬಲ್ಲ ಎಂಬುದನ್ನು ದೀಪಕ್ ಚಹರ್ ನಿರೂಪಿಸಿಕೊಂಡಿದ್ದು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಿವೆ. ದೀಪಕ್ ಚಹಾರ್ ಹಾರ್ದಿಕ್ ಪಾಂಡ್ಯ ಮಾತ್ರವಲ್ಲದೆ ಭುವನೇಶ್ವರ್ ಕುಮಾರ್‌‌ ಸ್ಥಾನವನ್ನೂ ತುಂಬಬಲ್ಲ ಆಟಗಾರನಾಗಿದ್ದಾರೆ.

ಕೊಹ್ಲಿ ಜಾಗದಲ್ಲಿ ನಾನಿದ್ದಿದ್ದರೆ ಈ ತಪ್ಪನ್ನು ಮಾಡ್ತಾನೆ ಇರ್ಲಿಲ್ಲ ಅಂದ್ರು ಸಚಿನ್ | Oneindia Kannada
3. ಹರ್ಷಲ್ ಪಟೇಲ್

3. ಹರ್ಷಲ್ ಪಟೇಲ್

ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 6 ಪಂದ್ಯಗಳನ್ನಾಡಿದ ಹರ್ಷಲ್ ಪಟೇಲ್ 17 ವಿಕೆಟ್ ಪಡೆದು ಮಿಂಚಿದರು. ಹರ್ಷಲ್ ಪಟೇಲ್ ಕೇವಲ ಬೌಲಿಂಗ್ ವಿಭಾಗದಲ್ಲಿ ಮಾತ್ರವಲ್ಲದೇ ಬ್ಯಾಟಿಂಗ್ ವಿಭಾಗದಲ್ಲಿಯೂ ಸಹ ಬಲಿಷ್ಠರಾಗಿದ್ದಾರೆ. ಕೊನೆಯ ಓವರ್‌ಗಳಲ್ಲಿ ಕಣಕ್ಕಿಳಿದು ದೊಡ್ಡ ಹೊಡೆತಗಳನ್ನು ಬಾರಿಸಬಲ್ಲಂತ ಸಾಮರ್ಥ್ಯವಿರುವ ಹರ್ಷಲ್ ಪಟೇಲ್ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ತುಂಬಬಲ್ಲ ಆಟಗಾರನಾಗಿದ್ದಾರೆ.

Story first published: Thursday, August 19, 2021, 8:32 [IST]
Other articles published on Aug 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X