ಟಿ20 ವಿಶ್ವಕಪ್ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿವೆ. ಈ ವೇಳೆ ತಂಡ ಹಲವು ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿವೆ. ಈಗಾಗಲೇ ಸೂಪರ್ 8 ಹಂತಕ್ಕೆ ತಂಡಗಳು ಅರ್ಹತೆ ಪಡೆದಿವೆ. ಈ ವೇಳೆ ಹಲವು ತಂಡಗಳು ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರೆಸಿವೆ. ಹಾಗಿದ್ದರೆ ಯಾವೆಲ್ಲಾ ತಂಡಗಳು ಲೀಗ್ ಹಂತದಲ್ಲಿ ಅಜೇಯ ಓಟವನ್ನು ಮುಂದುವರೆಸಿವೆ ಎಂಬ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಎ ಗುಂಪಿನಲ್ಲಿ ಅಜೇಯ ಓಟವನ್ನು ಮುಂದುವರೆಸಿದ ದಾಖಲೆ ಟೀಮ್ ಇಂಡಿಯಾದ್ದಾಗಿದೆ. ಈ ವೇಳೆ ಭಾರತ ತಂಡ ಅಮೋಘ ಪ್ರದರ್ಶನ ನೀಡಿದೆ. ಯುಎಸ್‌ಎ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಭಾರತ 29 ರನ್‌ಗಳಿಂದ ಜಯ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಸೂರ್ಯ ಪಡೆ ನಮೀಬಿಯಾ ವಿರುದ್ಧ 93 ರನ್ ಗೆಲುವು ಸಾಧಿಸಿದೆ. ಮೂರನೇ ಪಂದ್ಯದಲ್ಲಿ ಬ್ಲ್ಯೂ ಬಾಯ್ಸ್ ಪಾಕ್ ತಂಡವನ್ನು 61 ರನ್‌ಗಳಿಂದ, ನಾಲ್ಕನೇ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು 17 ರನ್‌ಗಳಿಂದ ಮಣಿಸಿ ಲೀಗ್ ಹಂತದಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ.

ಬಿ ಗುಂಪಿನ ಪಂದ್ಯದಲ್ಲಿ ಜಿಂಬಾಬ್ವೆ ಅಜೇಯ ಓಟವನ್ನು ಕಂಡಿದೆ. ಮೊದಲ ಪಂದ್ಯದಲ್ಲಿ ಓಮನ್ ವಿರುದ್ಧ 8 ವಿಕೆಟ್ ಜಯ ಸಾಧಿಸಿದ ಜಿಂಬಾಬ್ವೆ, ಎರಡನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಶಾಕ್ ನೀಡಿತ್ತು. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಮಳೆ ಕಾಟ ನೀಡಿದ್ದರಿಂದ ಪಂದ್ಯವನ್ನು ರದ್ದು ಮಾಡಲಾಯಿತು. ಇನ್ನು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಸೋಲಿಲ್ಲದೆ ಮುನ್ನಡೆದಿದೆ.
ಸಿ ಗುಂಪಿನಲ್ಲಿ ವೆಸ್ಟ್ ಇಂಡೀಸ್ ಸಹ ಇಂತಹದ್ದೇ ಸಾಧನೆ ಮಾಡಿದೆ. ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿದೆ. ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ 35 ರನ್‌ಗಳಿಂದ, ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 30 ರನ್, ಮೂರನೇ ಪಂದ್ಯದಲ್ಲಿ ನೇಪಾಳ ವಿರುದ್ಧ 9 ವಿಕೆಟ್ ಗಳಿಂದ, ನಾಲ್ಕನೇ ಪಂದ್ಯದಲ್ಲಿ 42 ರನ್‌ಗಳಿಂದ ಗೆದ್ದು ಬೀಗಿದೆ.

ಡಿ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಅಜೇಯ ಓಟವನ್ನು ಕಂಡಿದೆ. ಮೊದಲ ಪಂದ್ಯದಲ್ಲಿ ಕೇನಡಾ ವಿರುದ್ಧ 57 ರನ್, ಎರಡನೇ ಅಫ್ಘಾನಿಸ್ತಾನ ವಿರುದ್ಧ ಸೂಪರ್ ಓವರ್‌ನಲ್ಲಿ ಜಯ, ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್, ಯುಎಇ ವಿರುದ್ಧ 6 ವಿಕೆಟ್ ಕಬಳಿಸಿದೆ.