ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ ಕದನಕ್ಕೆ ರಿಜ್ವಾನ್, ಶೋಯೆಬ್ ಮಲಿಕ್ ಫಿಟ್

ಸತತ ಐದು ಗೆಲುವು ಸಾಧಿಸಿ ಅಜೇಯವಾಗಿ ಸೆಮಿ ಫೈನಲ್‌ಗೆ ಕಾಲಿಟ್ಟಿರುವ ಪಾಕಿಸ್ತಾನ ತಂಡ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರಲು ಕಾತರಿಸುತ್ತಿದೆ. ಆದರೆ ತಂಡದ ಇಬ್ಬರು ಪ್ರಮುಖ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಹಾಗೂ ಅನುಭವಿ ಶೋಯೆಬ್ ಮಲಿಕ್ ಜ್ವರದಿಂದ ಬಳಲುತ್ತಿರುವ ಕಾರಣ ಈ ಇಬ್ಬರು ಪಂದ್ಯಕ್ಕೆ ಲಭ್ಯವಾಗುವ ಬಗ್ಗೆ ಅನುಮಾನುಗಳು ಎದ್ದಿತ್ತು. ಆದರೆ ಈಗ ಪಾಕಿಸ್ತಾನ ತಂಡ ನಿರಾಳವಾಗುವಂತಾ ಸುದ್ದಿ ಬಂದಿದೆ. ಮೊಹಮ್ಮದ್ ರಿಜ್ವಾನ್ ಹಾಗೂ ಶೋಯೆಬ್ ಮಲಿಕ್ ಇಬ್ಬರು ಕೂಡ ಇಂದಿನ ಪಂದ್ಯದಲ್ಲಿ ಆಡಲು ಸಂಪೂರ್ಣ ಸಮರ್ಥರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಮೂಲಗಳ ಮಾಹಿತಿಯ ಪ್ರಕಾರ ಮೊಹಮ್ಮದ್ ರಿಜ್ವಾನ್ ಹಾಗೂ ಶೋಯೆಬ್ ಮಲಿಕ್ ಇಬ್ಬರು ಕೂಡ ಜ್ವರದಿಂದ ಬಳಲುತ್ತಿದ್ದ ಕಾರಣ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯಕ್ಕೂ ಮುನ್ನಾದಿನ ಅಭ್ಯಾಸದಲ್ಲಿ ಭಾಗಿಯಾಗಿರಲಿಲ್ಲ. ಈ ಇಬ್ಬರು ಆಟಗಾರರು ಕೂಡ ಕೊರೊನಾವೈರಸ್ ಪರೀಕ್ಷೆಗೆ ಒಳಪಟ್ಟಿದ್ದರು. ಆದರೆ ಇಬ್ಬರ ವರದಿ ಕೂಡ ನೆಗೆಟಿವ್ ಬಂದಿತ್ತು. ಹಾಗಿದ್ದರೂ ಈ ಆಟಗಾರರು ಸೆಮಿ ಫೈನಲ್ ಕದನದಲ್ಲಿ ಭಾಗಿಯಾಗುವ ಬಗ್ಗೆ ಅನುಮಾನಗಳು ಎದ್ದಿತ್ತು.

ಬಾಬರ್ ಹಾಗೂ ಕೊಹ್ಲಿ ನಡುವಿನ ಹೋಲಿಕೆ ಸಲ್ಲದು: ಬಾಬರ್ ಅಜಮ್ ವ್ಯಕ್ತಿತ್ವ ಕೊಹ್ಲಿಗೆ ವಿರುದ್ಧವಾಗಿದೆ!ಬಾಬರ್ ಹಾಗೂ ಕೊಹ್ಲಿ ನಡುವಿನ ಹೋಲಿಕೆ ಸಲ್ಲದು: ಬಾಬರ್ ಅಜಮ್ ವ್ಯಕ್ತಿತ್ವ ಕೊಹ್ಲಿಗೆ ವಿರುದ್ಧವಾಗಿದೆ!

ಈಗ ಈ ವಿಚಾರವಾಗಿ ಪ್ರಮುಖ ಬೆಳವಣಿಗೆ ನಡೆದಿದ್ದು ಇಬ್ಬರು ಆಟಗಾರರು ಕೂಡ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡಲು ಸಂಪೂರ್ಣ ಸಮರ್ಥರಾಗಿದ್ದಾರೆ. ಪಾಕಿಸ್ತಾನ ತಂಡದ ವೈದ್ಯಕೀಯ ಸಿಬ್ಬಂದಿಗಳು ಪರೀಕ್ಷಿಸಿದ್ದು ಇಬ್ಬರು ಕೂಡ ಆಡಲು ಸಮರ್ಥರಾಗಿದ್ದಾರೆ ಎಂದು ಅನುಮತಿ ನೀಡಿದೆ. ಇದಕ್ಕೂ ಮುನ್ನ ಪಾಕಿಸ್ತಾನ ತಂಡದ ಮ್ಯಾನೇಜರ್ ಮನ್ಸೂರ್ ರಾಣಾ ಇಬ್ಬರು ಆಟಗಾರರು ಕೂಡ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡಲು ಬಯಸಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಎರಡನೇ ಸೆಮಿ ಫೈನಲ್ ಕದನದ ಸಂದರ್ಭದಲ್ಲಿ ಪಾಕಿಸ್ತಾನ ತಂಡದ ಆಡುವ ಬಳಗದ ಆಯ್ಕೆಗೆ ಮೊಹಮ್ಮದ್ ರಿಜ್ವಾನ್ ಹಾಗೂ ಶೋಯೆಬ್ ಮಲಿಕ್ ಲಭ್ಯವಾಗಿರುವ ಕಾರಣದಿಂದಾಗಿ ಆಸ್ಟ್ರೇಲುಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಪಾಕಿಸ್ತಾನದ ಸವಾಲನ್ನು ಆಸ್ಟ್ರೇಲಿಯಾ ತಂಡ ಯಾವ ರೀತಿಯಾಗಿ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಅದ್ಭುತವಾದ ಪ್ರದರ್ಶನ ನೀಡುತ್ತಿದೆ. ಪಾಕಿಸ್ತಾನದ ಈ ಪ್ರದರ್ಶನದಲ್ಲಿ ಮೊಹಮ್ಮದ್ ರಿಜ್ವಾನ್ ಹಾಗೂ ಶೋಯೆಬ್ ಮಲಿಕ್ ಫಾರ್ಮ್ ಕೂಡ ಪ್ರಮುಖ ಪಾತ್ರವಹಿಸಿದೆ. ಬ್ಯಾಟರ್‌ಗಳಾಗಿ ಇಬ್ಬರು ಕೂಡ ಅದ್ಭುತ ಕೊಡುಗೆ ನೀಡುತ್ತಿದ್ದಾರೆ. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ರಿಜ್ವಾನ್ ಆಡಿದ ಐದು ಪಂದ್ಯಗಳಲ್ಲಿ 214 ರನ್ ಸಿಡಿಸಿದ್ದಾರೆ. ಮತ್ತೊಂದೆಡೆ ಅನುಭವಿ ಶೋಯೆನ್ ಮಲಿಕ್ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ 18 ಎಸೆತಗಳಲ್ಲಿ 50 ರನ್ ಸಿಡಿಸಿ ಟೂರ್ನಿಯ ಅತಿ ವೇಗದ ಅರ್ಧ ಶತಕಗಳಿಸಿದ ಆಟಗಾರನಾಗಿ ಭಾರತದ ಕೆಎಲ್ ರಾಹುಲ್ ಜೊತೆ ಕಾಣಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲೆಂಡ್: ಸೆಮಿಫೈನಲ್‌ನ 5 ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲೆಂಡ್: ಸೆಮಿಫೈನಲ್‌ನ 5 ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆ

ಪಾಕಿಸ್ತಾನ ಸಂಪೂರ್ಣ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶದಬ್ ಖಾನ್, ಇಮಾದ್ ವಾಸಿಮ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ, ಮೊಹಮ್ಮದ್ ನವಾಜ್, ಹೈದರ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ಸರ್ಫರಾಜ್ ಅಹ್ಮದ್

David Warner ಹೀಗೆ ವಿಚಿತ್ರವಾಗಿ ನಡೆದುಕೊಂಡಿದ್ದೇಕೆ | Oneindia Kannada

ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಕೇನ್ ರಿಚರ್ಡ್ಸನ್, ಆಶ್ಟನ್ ಅಗರ್, ಮಿಚೆಲ್ ಸ್ವೆಪ್ಸನ್ , ಜೋಶ್ ಇಂಗ್ಲಿಸ್

For Quick Alerts
ALLOW NOTIFICATIONS
For Daily Alerts
Story first published: Thursday, November 11, 2021, 16:51 [IST]
Other articles published on Nov 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X