Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup: ಅಭ್ಯಾಸದ ವೇಳೆ ದಿನೇಶ್ ಕಾರ್ತಿಕ್‌ರನ್ನು ಬೌಲ್ಡ್ ಮಾಡಿದ ಮೊಹಮ್ಮದ್ ಶಮಿ

T20 World Cup: Mohammad Shami Bowled Dinesh Karthik In Nets During Practice

ಟೀಮ್ ಇಂಡಿಯಾ ಬ್ರಿಸ್ಬೇನ್‌ನ ಗಬ್ಬಾದಲ್ಲಿ ಟಿ20 ವಿಶ್ವಕಪ್‌ನ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದ ಗಾಯಗೊಂಡಿದ್ದರಿಂದ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಸ್ಟಾರ್ ವೇಗಿ ಸ್ಥಾನಕ್ಕೆ ಮೊಹಮ್ಮದ್ ಶಮಿಯನ್ನು ತಂಡದಲ್ಲಿ ನೇಮಿಸಿದೆ.

ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಮೀಸಲು ಆಟಗಾರರ ಪಟ್ಟಿಗೆ ಸೇರಿಕೊಂಡಿದ್ದಾರೆ. ಮೊದಲ ಅಭ್ಯಾಸ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಸೇರಿಕೊಂಡಿದ್ದ ಮೊಹಮ್ಮದ್ ಶಮಿ ನೆಟ್ಸ್‌ನಲ್ಲಿ ಬೌಲಿಂಗ್ ಅಭ್ಯಾಸ ಮಾಡಿದರು. ಅವರು ಬ್ರಿಸ್ಬೇನ್‌ನಲ್ಲಿ ನೆಟ್ಸ್‌ನಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್‌ರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಕಳೆದ ವರ್ಷ ಟಿ20 ವಿಶ್ವಕಪ್‌ನಿಂದ ಹೆಚ್ಚಿನ ವೈಟ್‌ಬಾಲ್ ಪಂದ್ಯಗಳನ್ನು ಆಡದ ಶಮಿ, ಮುಂದಿನ ಭಾನುವಾರ ಮೆಲ್ಬೋರ್ನ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೆ ಮುನ್ನ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ.

ಶಮಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಆರು ಟಿ20 ಪಂದ್ಯಗಳಲ್ಲಿ ಆಡಬೇಕಿತ್ತು ಆದರೆ ಕೋವಿಡ್‌ ಸೋಂಕಿಗೆ ತುತ್ತಾದ ಕಾರಣ, ಅವರು ಎರಡೂ ಸರಣಿಗಳಿಂದ ಹೊರಗುಳಿದರು. ಸೋಂಕಿನಿಂದ ಚೇತರಿಸಿಕೊಂಡ ನಂತರ ಅವರು ಆಸ್ಟ್ರೇಲಿಯಾಕ್ಕೆ ಹೋಗುವ ಮುನ್ನ ಎನ್‌ಸಿಎಗೆ ಹಾಜರಾಗಿ ತಮ್ಮ ಫಿಟ್ನೆಸ್ ಸಾಬೀತುಪಡಿಸಿದರು.

ಭಾರತವು ಈಗಾಗಲೇ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಿದೆ. ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ಅವರು ಎರಡನೇ ಪಂದ್ಯದಲ್ಲಿ ಸೋಲನುಭವಿಸಿದರು.

T20 World Cup: Mohammad Shami Bowled Dinesh Karthik In Nets During Practice

ನೆಟ್‌ನಲ್ಲಿ ಭರ್ಜರಿ ಅಭ್ಯಾಸ ಮಾಡಿದ ಕೊಹ್ಲಿ

ಇನ್ನು ಬ್ರಿಸ್ಬೇನ್‌ ಗಬ್ಬಾ ಅಂಗಳದಲ್ಲಿ ವಿರಾಟ್ ಕೊಹ್ಲಿ ಕೂಡ ಸತತವಾಗಿ ಬ್ಯಾಟಿಂಗ್ ಅಭ್ಯಾಸ ಮಾಡಿದರು. ಸಾಕಷ್ಟು ದೀರ್ಘಾವಧಿಯವರೆಗೆ ಬ್ಯಾಟಿಂಗ್ ಅಭ್ಯಾಸ ಮಾಡಿದ ಕೊಹ್ಲಿ, ಉತ್ತಮ ಹೊಡೆತಗಳನ್ನು ಬಾರಿಸಿದರು.

ಅಕ್ಟೋಬರ್ 17ರಂದು ಭಾರತ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲನೇ ಅಧಿಕೃತ ಅಭ್ಯಾಸ ಪಂದ್ಯವನ್ನು ಆಡಲಿದೆ. ನಂತರ, ಅಕ್ಟೋಬರ್ 19ರಂದು ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನಾಡಲಿದೆ.

ಅದಾದ ನಂತರ, ಅಕ್ಟೋಬರ್ 23ರಂದು ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಭಾರತ ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

Story first published: Sunday, October 16, 2022, 20:03 [IST]
Other articles published on Oct 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+