ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಟೀಮ್ ಇಂಡಿಯಾ ಜೊತೆ ಹೊಸ ಜವಾಬ್ಧಾರಿಯೊಂದಿಗೆ ಕಾಣಿಸಿದ ಎಂಎಸ್ ಧೋನಿ

T20 World Cup: MS Dhoni joins team india squad as mentor
Photo Credit: BCCI

ಐಪಿಎಲ್ 14ನೇ ಆವೃತ್ತಿ ಮುಕ್ತಾಯವಾಗಿದ್ದು ಕ್ರಿಕೆಟ್ ಅಭಿಮಾನಿಗಳ ಚಿತ್ತ ಈಗ ವಿಶ್ವಕಪ್‌ನತ್ತ ನೆಟ್ಟಿದೆ. ಟೀಮ್ ಇಂಡಿಯಾದ ವಿಶ್ವಕಪ್ ಅಭಿಯಾನ ಮುಂದಿನ ಭಾನುವಾರ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಅಧಿಕೃತವಾಗಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ಎರಡು ಅಭ್ಯಾಸ ಪಂದ್ಯವನ್ನಾಡಲಿದೆ. ಈ ಮಧ್ಯೆ ಐಪಿಎಲ್ ಟೂರ್ನಿ ಮುಗಿಸಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಟೀಮ್ ಇಂಡಿಯಾ ಬಯೋಬಬಲ್ ಸೇರಿಕೊಂಡಿದ್ದು ತಾಲೀಮು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೊಸ ಜವಾಬ್ಧಾರಿಯೊಂದಿಗೆ ಭಾರತೀಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಂಭವಿಸಿದ ಐದು ಕುತೂಹಲಕಾರಿ ಸಂಗತಿಗಳಿವುಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಂಭವಿಸಿದ ಐದು ಕುತೂಹಲಕಾರಿ ಸಂಗತಿಗಳಿವು

ಎಂಎಸ್ ಧೋನಿ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಎಂಎಸ್ ಧೋನಿ ತಂಡದ ಹೆಡ್ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಜೊತೆಗೆ ಸಂವಾದದಲ್ಲಿ ನಡೆಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಐಪಿಎಲ್: ಮೆಗಾ ಆಕ್ಷನ್‌ನಲ್ಲಿ ಧೋನಿಯನ್ನು ರೀಟೈನ್ ಮಾಡಿಕೊಳ್ಳುವುದು ಖಚಿತ ಎಂದ ಸಿಎಸ್‌ಕೆಐಪಿಎಲ್: ಮೆಗಾ ಆಕ್ಷನ್‌ನಲ್ಲಿ ಧೋನಿಯನ್ನು ರೀಟೈನ್ ಮಾಡಿಕೊಳ್ಳುವುದು ಖಚಿತ ಎಂದ ಸಿಎಸ್‌ಕೆ

ಕಳೆದ ತಿಂಗಳು ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಸ್ಕ್ವಾಡ್ ಘೋಷಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿಯೇ ಬಿಸಿಸಿಐ ತಂಡದ ಮೆಂಟರ್ ಆಗಿ ಎಂಎಸ್ ಧೋನಿ ಈ ವಿಶ್ವಕಪ್‌ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂಬುದನ್ನು ಕೂಡ ತಿಳಿಸಿತ್ತು. ಅದರಂತೆ ಧೋನಿ ಈಗ ತಂಡವನ್ನು ಸೇರಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್‌ನ ವಿಜೇತ ತಂಡದ ನಾಯಕನಾಗಿರುವ ಎಂಎಸ್ ಧೋನಿ ಈ ಬಾರಿ ವಿರಾಟ್ ಕೊಹ್ಲಿ ನೇತೃತ್ವದ ತಂಡಕ್ಕೆ ಮಾರ್ಗದರ್ಶಕರಾಗಿ ಸಹಾಯ ಮಾಡಲಿದ್ದಾರೆ.

ಟಿ20 ವಿಶ್ವಕಪ್: ಧೋನಿ ಮೆಂಟರ್ ಆಗುತ್ತಿರುವ ಬಗ್ಗೆ ನಾಯಕ ಕೊಹ್ಲಿ ಹೇಳಿದ್ದಿಷ್ಟು!ಟಿ20 ವಿಶ್ವಕಪ್: ಧೋನಿ ಮೆಂಟರ್ ಆಗುತ್ತಿರುವ ಬಗ್ಗೆ ನಾಯಕ ಕೊಹ್ಲಿ ಹೇಳಿದ್ದಿಷ್ಟು!

ಟೀಮ್ ಇಂಡಿಯಾ ಜೊತೆ ಅಭ್ಯಾಸದಲ್ಲಿ ಕಾಣಿಸಿಕೊಂಡ ಧೋನಿ | Oneindia Kannada

ಟೀಮ್ ಇಂಡಿಯಾ ಮುಂದಿನ ಭಾನುವಾರ ಅಕ್ಟೋಬರ್ 24ರಂದು ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಉಇವ ಮೂಲಕ ಟಿ20 ವಿರ್ಶವಕಪ್‌ನ ಅಭಿಯಾನವನ್ನು ಆರಂಭಿಸಲಿದೆ. ಅದಕ್ಕೂ ಮು್ನನ ಭಾರತ ಎರಡು ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಭಾರತಕ್ಕೆ ಇಂಗ್ಲೆಂಡ್ ತಂಡ ಎದುರಾಗಲಿದ್ದು ಈ ಪಂದ್ಯ ಅಕ್ಟೋಬರ್ 18ರಂದು ನಡೆಯಲಿದೆ. ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ತಂಡ ಎದುರಾಳಿಯಾಗಿರಲಿದೆ.

ಭಾರತ ತಂಡ: ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆ), ಇಶಾನ್ ಕಿಶನ್ (ವಿಕೆ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ ಮೀಸಲು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್; ಮಾರ್ಗದರ್ಶಕ: ಎಂಎಸ್ ಧೋನಿ

Story first published: Monday, October 18, 2021, 19:06 [IST]
Other articles published on Oct 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X