ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಗೌರವ ಧನ ಪಡೆಯದೆ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಧೋನಿ

T20 world cup: MS Dhoni to not charge any fees for mentoring Team India

ಟಿ20 ವಿಶ್ವಕಪ್‌ ಆರಂಭಕ್ಕೆ ಬೆರಳೆಣಿಗೆಯ ದಿನಗಳು ಮಾತ್ರ ಬಾಕಿಯಿದೆ. ಮುಂದಿನ ಭಾನುವಾರದಿಂದಲೇ ಟಿ20 ವಿಶ್ವಕಪ್ ಆರಂಭವಾಗಲಿದ್ದು ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ. ಈ ಬಾರಿಯ ಚುಟುಕು ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಮಾಜಿ ನಾಯಕ ಎಂಎಸ್ ಧೋನಿ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಲಿದ್ದು ಈ ವಿಚಾರವಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರಮುಖ ಹೇಳಿಕೆಯಿಂದನ್ನು ನೀಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಲಿರುವ ಎಂಎಸ್ ಧೋನಿ ಈ ಸೇವೆಗಾಗಿ ಬಿಸಿಸಿಐ ಕಡೆಯಿಂದ ಯಾವುದೇ ಶುಲ್ಕವನ್ನು ಕೂಡ ಪಡೆಯುತ್ತಿಲ್ಲ ಎಂದು ಜಯ್ ಶಾ ತಿಳಿಸಿದ್ದಾರೆ. ಮಂಗಳವಾರ ಜಯ್ ಶಾ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಐಪಿಎಲ್‌ನಲ್ಲಿ ಆರ್‌ಸಿಬಿ ನಾಯಕರಾಗಿ ವಿರಾಟ್ ಕೊಹ್ಲಿ ಅಂಕಿ-ಅಂಶಗಳು!ಐಪಿಎಲ್‌ನಲ್ಲಿ ಆರ್‌ಸಿಬಿ ನಾಯಕರಾಗಿ ವಿರಾಟ್ ಕೊಹ್ಲಿ ಅಂಕಿ-ಅಂಶಗಳು!

ಭಾರತ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಟಿ20 ವಿಶ್ವಕಪ್‌ನಲ್ಲಿ ಭಾಗಿಯಾಗಲಿರುವ 15 ಸದಸ್ಯರ ಭಾರತ ತಂಡವನ್ನು ಘೋಷಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಮೆಂಟರ್ ಆಗಿ ಮಾಜಿ ನಾಯಕ ಎಂಎಸ್ ಧೋನಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಕೂಡ ಘೋಷಣೆ ಮಾಡಲಾಗಿತ್ತು. ಇದು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳ ಸಂತಸವನ್ನು ಹೆಚ್ಚುಗೊಳಿಸಿತ್ತು.

ಎಎನ್‌ಐ ಸುದ್ದಿ ಸಮಸ್ಥೆಯ ಜೊತೆಗೆ ಮಾತನಾಡಿರುವ ಜಯ್ ಶಾ "ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಲು ಎಂಎಸ್ ಧೋನಿ ಬಿಸಿಸಿಐ ಕಡೆಯಿಂದ ಯಾವುದೇ ರೀತಿಯ ಶುಲ್ಕವನ್ನು ಕೂಡ ಪಡೆಯುತ್ತಿಲ್ಲ" ಎಂದು ಜಯ್ ಶಾ ಎಎನ್‌ಐಗೆ ವಿವರಿಸಿದ್ದಾರೆ. ಈ ವಿಚಾರವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಖಚಿತಪಡಿಸಿದ್ದಾರೆ. 40ರ ಹರೆಯದ ಎಂಎಸ್ ಧೋನಿ 2019ರ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೋಲು ಕಂಡು ಹೊರ ಬಿದ್ದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿದ್ದರು. ಅದಾದ ಬಳಿಕ ಸುಮಾರು ಒಂದು ವರ್ಷದ ಬಳಿಕ 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗೂ ನಿವೃತ್ತಿ ಘೋಷಿಸಿದರು.

ಪಂಜಾಬ್ ಕಿಂಗ್ಸ್‌ ಬಿಟ್ಟು ಹೊರಬರುವ ಕೆಎಲ್ ರಾಹುಲ್‌ಗೆ ನಾಯಕ ಸ್ಥಾನ ನೀಡಲು ಸಿದ್ಧವಾಗಿವೆ ಈ 3 ತಂಡಗಳು!ಪಂಜಾಬ್ ಕಿಂಗ್ಸ್‌ ಬಿಟ್ಟು ಹೊರಬರುವ ಕೆಎಲ್ ರಾಹುಲ್‌ಗೆ ನಾಯಕ ಸ್ಥಾನ ನೀಡಲು ಸಿದ್ಧವಾಗಿವೆ ಈ 3 ತಂಡಗಳು!

ಜಾರ್ಖಂಡ್ ಮೂಲದ ಎಂಎಸ್ ಧೋನಿ 90 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು 4876 ರನ್ ಗಳಸಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ 10773 ರನ್‌ಗಳಿಸಿರುವ ಅವರು 98 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು ಚುಟುಕು ಮಾದರಿಯಲ್ಲಿ 1617 ರನ್‌ಗಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರೂ ಎಂಎಸ್ ಧೋನಿ ಐಪಿಎಲ್‌ನಲ್ಲಿ ಸದ್ಯ ಸಕ್ರಿಯವಾಗಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಧೋನಿ ನೇತೃತ್ವದ ಸಿಎಸ್‌ಕೆ ಅತ್ಯುತ್ತಮ ಪ್ರದರ್ಶನ ನಿಡಿದ್ದು ಐಪಿಎಲ್ ಇತಿಹಾಸದಲ್ಲಿ 9ನೇ ಬಾರಿಗೆ ಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಿದೆ. ಫೈನಲ್‌ನಲ್ಲಿ ಗೆದ್ದು ನಾಲ್ಕನೇ ಐಪಿಎಲ್ ಟ್ರೋಫಿ ಗೆಲ್ಲುವ ಸನಿಹದಲ್ಲಿದ್ದಾರೆ ಎಂಎಸ್ ಧೋನಿ. ಫುನಲ್‌ನಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಲಿದ್ದಾರೆ.

'ಈತ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ'; ಐಪಿಎಲ್ ಕಳಪೆ ನಾಯಕನ ವಿರುದ್ಧ ವ್ಯಂಗ್ಯವಾಡಿದ ಸೆಹ್ವಾಗ್'ಈತ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ'; ಐಪಿಎಲ್ ಕಳಪೆ ನಾಯಕನ ವಿರುದ್ಧ ವ್ಯಂಗ್ಯವಾಡಿದ ಸೆಹ್ವಾಗ್

Glenn Maxwell ಪಂದ್ಯ ಮುಗಿದ ನಂತರ ಹೀಗೆ ಕೋಪಗೊಂಡಿದ್ದೇಕೆ | Oneindia Kannada

ಭಾರತದ ಟಿ 20 ವಿಶ್ವಕಪ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹರ್ ಮತ್ತು ವರುಣ್ ಚಕ್ರವರ್ತಿ.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್

Story first published: Wednesday, October 13, 2021, 9:56 [IST]
Other articles published on Oct 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X