ಟಿ20 ವಿಶ್ವಕಪ್: ಟೀಮ್ ಇಂಡಿಯಾದ ಹೊಸ ಜರ್ಸಿ ಬಗ್ಗೆ ನೆಟ್ಟಿಗರಿಂದ ಭಿನ್ನ ಅಭಿಪ್ರಾಯ!

ಟಿ20 ವಿಶ್ವಕಪ್‌ನ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಐಪಿಎಲ್ ಮುಕ್ತಾಯವಾಗುತ್ತಿದ್ದಂತೆಯೇ ಭಾರತೀಯ ಆಟಗಾರರು ಟೀಮ್ ಇಂಡಿಯಾ ಬಯೋಬಬಲ್ ಸೇರಿಕೊಳ್ಳಲಿದ್ದು ವಿಶ್ವಕಪ್‌ನ ಆರಂಭಕ್ಕೂ ಮುನ್ನ ಎರಡು ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗಲಿದೆ. ಈ ಮಧ್ಯೆ ಟೀಮ್ ಇಂಡಿಯಾ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಧರಿಸುವ ಜರ್ಸಿ ಹೇಗಿರಲಿದೆ ಎಂಬ ಕುತೂಹಲ ಈಗ ತಣಿದಿದ್ದು ಹೊಸ ಜರ್ಸಿಯನ್ನು ಇಂದು ಬಿಡುಗಡೆಗೊಳಿಸಲಾಗಿದೆ.

ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಈ ಹೊಸ ವಿನ್ಯಾಸದ ಜರ್ಸಿ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲ ಅಭಿಮಾನಿಗಳು ಈ ಹೊಸ ಜರ್ಸಿಯ ಬಣ್ಣ ಹಾಗೂ ವಿನ್ಯಾಸದ ಬಗ್ಗೆ ಬೇಸರ ವ್ಯಕ್ತಪಡಿಸಿದರೆ ಇನ್ನೂ ಕೆಲವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಐಪಿಎಲ್, ಕ್ವಾ.-2: ಕೋಲ್ಕತ್ತಾ vs ಡೆಲ್ಲಿ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್ಐಪಿಎಲ್, ಕ್ವಾ.-2: ಕೋಲ್ಕತ್ತಾ vs ಡೆಲ್ಲಿ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್, ರವೀಂದ್ರ ಜಡೇಜಾ ಹಾಗೂ ಜಸ್ಪ್ರೀತ್ ಬೂಮ್ರಾ ಹೊಸ ಜರ್ಸಿಯ ಅನಾವರಣದಲ್ಲಿ ಕಾಣಿಸಿಕೊಂಡಿದ್ದಾರೆ. ಕಡು ನೀಲಿ ಬಣ್ಣ ಹಾಗೂ ಕಿತ್ತಲೆ ಬಣ್ಣವಿರುವ ಈ ಜರ್ಸಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಕಣಕ್ಕಿಳಿಯಲಿದ್ದಾರೆ. ಈ ಹಿಂದೆ 2020ರ ಆಸ್ಟ್ರೇಲಿಯಾದಲ್ಲಿ ನಡೆಸ ಟಿ20 ಸರಣಿಯ ಬಳಿಕ ಧರಿಸಿದ್ದ ರೆಟ್ರೋ ಮಾದರಿಯ ಜರ್ಸಿಯಿಂದ ಪ್ರೇರಣೆಗೊಂಡು ಈ ಜರ್ಸಿಯ ವಿನ್ಯಾಸವನ್ನು ಮಾಡಿದಂತಿದೆ. ತಂಡದ ಸಾಂಪ್ರದಾಯಿಕ ತಿಳಿನೀಲಿ ಬಣ್ಣವನ್ನು ಬಿಟ್ಟು ಕಡು ನೀಲಿ ಬಣ್ಣವನ್ನೇ ಆಯ್ಕೆ ಮಾಡಲಾಗಿದೆ.

ಇನ್ನು ಈ ಹೊಸ ಜರ್ಸಿಯ ಅನಾವರಣದ ಬಳಿಕ ನೆಟ್ಟಿಗರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್, ಕೂ ಸೇರಿದಂತೆ ನಾನಾ ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ ಟೀಮ್ ಇಂಡಿಯಾದ ಹೊಸ ಜರ್ಸಿಯ ಬಗ್ಗೆ ಸಂತಸ ಹಾಗೂ ಅಸಮಾಧಾನಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

20 ವಿಶ್ವಕಪ್‌: ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಆವೇಶ್ ಖಾನ್20 ವಿಶ್ವಕಪ್‌: ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಆವೇಶ್ ಖಾನ್

ಒಂದೆಡೆ ಈ ಬಾರಿಯ ಟಿ20 ವಿಶ್ವಕಪ್‌ ಹತ್ತಿರಕ್ಕೆ ಬರುತ್ತಿದ್ದರೂ ಬಿಸಿಸಿಐ ಟೀಮ್ ಇಂಡಿಯಾದ ಹೊಸ ಜರ್ಸಿಯ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಪ್ರಮುಖ ಟೂರ್ನಿಗಳ ಸಂದರ್ಭದಲ್ಲಿ ಭಾರತ ಹೊಸ ವಿನ್ಯಾಸದ ಜರ್ಸಿಯೊಮದಿಗೆ ಕಣಕ್ಕಿಳಿಯುವುದು ಸಾಮಾನ್ಯ ಸಂಪ್ರದಾಯ. ಆದರೆ ಈ ಬಾರಿ ಈ ಬಗ್ಗೆ ಯಾವುದೇ ಮಾಹಿತಿಗಳು ಇಲ್ಲದಿದ್ದ ಕಾರಣ ಭಾರತ ಈ ಹಿಂದೆ ಬಳಸುತ್ತಿದ್ದ ರೆಟ್ರೋ ಮಾದರಿಯ ಜರ್ಸಿಯಲ್ಲಿಯೇ ಕಣಕ್ಕಿಳಿಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಳೆದ ವಾರ ಬಿಸಿಸಿಐ ಭಾರತದ ಹೊಸ ವಿನ್ಯಾಸದ ಜರ್ಸಿ ಬಿಡುಗಡೆಯಾಗುವುದನ್ನು ಖಚಿತಪಡಿಸಿತ್ತು. ಅದರಂತೆಯೇ ಟೀಮ್ ಇಂಡಿಯಾದ ಕಿಟ್ ಪ್ರಾಯೋಜಕರಾದ ಎಂಪಿಎಲ್ ಇಂದು ಹೊಸ ಕಿಟ್ ಬಿಡುಗಡೆಗೊಳಿಸಿದೆ.

ಐಸಿಸಿ ಟಿ 20 ವಿಶ್ವಕಪ್‌ಗೆ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್, ಅಕ್ಷರ್ ಪಟೇಲ್

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Wednesday, October 13, 2021, 18:57 [IST]
Other articles published on Oct 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X