For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಸೆಣೆಸಾಡಲು ಸಜ್ಜಾದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್

T20 world cup: New zealand vs England, Semi Final-1 match preview

ಟಿ20 ವಿಶ್ವಕಪ್‌ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಸೂಪರ್ 12 ಹಂತದ ಪಂದ್ಯಗಳು ಮುಕ್ತಾಯವಾಗಿದ್ದು ಬುಧವಾರ ಹಾಗೂ ಗುರುವಾರ ಸೆಮಿಫೈನಲ್ ಪಂದ್ಯಗಳು ನಡೆಯಲಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ. ಈ ಪಂದ್ಯವನ್ನು ಗೆದ್ದು ಫೈನಲ್‌ ಹಂತಕ್ಕೆ ತಲುಪುವ ತಂಡ ಯಾವುದು ಎಂಬುದು ಕುತೂಹಲ ಮೂಡಿಸಿದೆ.

ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು 2019ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಮುಖಾಮುಖಿಯಾಗಿ ನಾಟಕೀಯ ಫಲಿತಾಂಶಕ್ಕೆ ಸಾಕ್ಷಿಯಾಗಿತ್ತು. ಇದೀಗ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಮಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳ ಕಾತುರತೆ ಹೆಚ್ಚಿಸಿದೆ. ಈ ಪಂದ್ಯ ಅಬುಧಾಬಿಯ ಶೇಕ್ ಝಾಯೇದ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಗ್ರೂಫ್ 1ರಲ್ಲಿ ಇಂಗ್ಲೆಂಡ್ ತಂಡ ಆಡಿದ ಐದು ಪಂದ್ಯಗಳ ಪೈಕಿ ಒಂದು ಸೋಲು ಅನುಭವಿಸಿ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿತ್ತು. ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಗ್ರೂಫ್ 2ಲ್ಲಿ ಆಡಿದ ಐದು ಪಂದ್ಯಗಳಲ್ಲಿ ಒಂದು ಸೋಲು ಅನುಭವಿಸಿತ್ತು. ಆದರೆ ಎರಡನೇ ತಂಡವಾಗಿ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಹೀಗಾಗಿ ಈ ಎರಡು ತಂಡಗಳು ಈ ನಾಕೌಟ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿದೆ.

ಇಂಗ್ಲೆಂಡ್ ತಂಡ ಅತ್ಯಂತ ಬಲಿಷ್ಠ ತಂಡದಂತೆ ಕಂಡು ಬರುತ್ತಿದ್ದು ಹೆಚ್ಚಿನ ಆಟಗಾರರು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅಲ್ಲದೆ ಇಂಗ್ಲೆಂಡ್ ತಂಡ ಕೆಳ ಕ್ರಮಾಂಕದವರೆಗೂ ಅದ್ಭುತವಾದ ಬಲವನ್ನು ಹೊಂದಿದ್ದು ನ್ಯೂಜಿಲೆಂಡ್ ತಂಡದ ಚಿಂತೆ ಹೆಚ್ಚಲು ಕಾರಣವಾಗಿದೆ. ಕಿವೀಸ್ ವೇಗಿಗಳು ಇಂಗ್ಲೆಂಡ್‌ನ ಬಲಿಷ್ಠ ಲೈನ್‌ಅಪ್ ವಿರುದ್ಧ ಯಾವ ರೀತಿ ಮೇಲುಗೈ ಸಾಧಿಸಬಹುದು ಎಂಬುದು ಪ್ರಶ್ನೆಯಾಗಿದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ ಗಾಯದ ಸಮಸ್ಯೆಯಿಂದ ಬಳಲುತ್ತಿದೆ. ಟೈಮಲ್ ಮಿಲ್ಸ್ ನಂತರ ತಂಡದ ಪ್ರಮುಖ ಆಟಗಾರ ಜೇಸನ್ ರಾಯ್ ಕೂಡ ಗಾಯಗೊಂಡಿದ್ದು ಮುಂದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಇಂಗ್ಲೆಂಡ್ ಸಂಪೂರ್ಣ ಸ್ಕ್ವಾಡ್: ಇಯಾನ್ ಮಾರ್ಗನ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟನ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಟಾಮ್ ಕರ್ರಾನ್, ರೀಸ್ ಟೋಪ್ಲಿ

ನ್ಯೂಜಿಲೆಂಡ್ ಸಂಪೂರ್ಣ ಸ್ಕ್ವಾಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ

Story first published: Tuesday, November 9, 2021, 21:59 [IST]
Other articles published on Nov 9, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+