ನ್ಯೂಜಿಲೆಂಡ್ vs ಐರ್ಲೆಂಡ್: ಸಂಭಾವ್ಯ ತಂಡ, ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಅಂತಿಮ ಘಟ್ಟವನ್ನು ತಲುಪಿದೆ. ಎಲ್ಲಾ ತಂಡಗಳಿಗೂ ಇನ್ನು ಕೇವಲ ಒಂದೊಂದು ಪಂದ್ಯಗಳು ಮಾತ್ರವೇ ಬಾಕಿಯಿದೆ. ಈ ಹಂತದವರೆಗೂ ಯಾವ ತಂಡಗಳು ಕೂಡ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ಗಮನಾರ್ಹ ಅಂಶ. ಸಾಕಷ್ಟು ಪೈಪೋಟಿಯ ಪಂದ್ಯಗಳು ನಡೆಯುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಲೆಕ್ಕಾಚಾರಗಳು ತಲೆಕೆಳಗಾಗುತ್ತಿದೆ. ಶುಕ್ರವಾರ ಗ್ರೂಪ್ 1ರ ಪಂದ್ಯಗಳು ಎರಡು ಪಂದ್ಯಗಳು ನಡೆಯಲಿದ್ದು ಎರಡು ಪಂದ್ಯಗಳು ಕೂಡ ಸಾಕಷ್ಟು ಮಹತ್ವದ್ದಾಗಿದೆ. ಈ ಪೈಕಿ ಮೊದಲಿಗೆ ನ್ಯೂಜಿಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದೆ.
ಇನ್ನು ಈ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದ್ದರೆ ಒಂದು ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ನಾಲ್ಕು ಪಂದ್ಯಗಳಲ್ಲಿ 5 ಅಂಕಗಳನ್ನು ಪಡೆದುಕೊಂಡಿದ್ದು ಶುಕ್ರವಾರ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಲಿದೆ. ಇನ್ನು ಐರ್ಲೆಂಡ್ ತಂಡ ಆಡಿದ ನಾಲ್ಕು ಪಂದ್ಯಗಳ ಪೈಕಿ ಒಂದು ಗೆಲುವು ಮಾತ್ರವೇ ಸಾಧಿಸಿದ್ದು ಎರಡು ಸೋಲು ಹಾಗೂ ಒಂದು ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ 3 ಅಂಕಗಳನ್ನು ಹೊಂದಿದ್ದು ಸೆಮಿಫೈನಲ್ ಹಂತಕ್ಕೇರುವ ರೇಸ್‌ನಲ್ಲಿ ಹಿಂದುಳಿದಿದ್ದು ಪವಾಡದ ನಿರೀಕ್ಷೆಯಲ್ಲಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ
ನ್ಯೂಜಿಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಶುಕ್ರವಾರ ಅಡಿಲೇಡ್‌ನ ಅಡಿಲೇಡ್ ಓವಲ್‌ನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್
ಹವಾಮಾನ ವರದಿ: ಪಂದ್ಯದ ದಿನ ಅಡಿಲೇಡ್‌ನಲ್ಲಿ ಸಂಪೂರ್ಣ ಆಟ ನಡೆಯಲು ಪೂರಕವಾದ ವಾತಾವರಣವಿರಲಿದೆ. ತಾಪಮಾನ 12ರಿಂದ 19 ಡಿಗ್ರಿ ಸೆಲ್ಸಿಯಸ್‌ನ ನಡುವೆ ಇರುವ ಸಾಧ್ಯತೆಯಿದ್ದು ತೇವಾಂಶಯುಕ್ತ ವಾತಾವರಣವಿರಲಿದೆ.
ಪಿಚ್ ರಿಪೋರ್ಟ್: ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವನ್ನು ನೀಡುವ ಪಿಚ್ ಆಗಿದೆ. ಬ್ಯಾಟರ್‌ಗಳಿಗೆ ಚೆಂಡು ನೇರವಾಗಿ ಬ್ಯಾಟ್‌ಗೆ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.

ಇತ್ತಂಡಗಳ ಆಡುವ ಬಳಗ ಹೀಗಿದೆ
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಫಿಯಾನ್ ಹ್ಯಾಂಡ್, ಜೋಶುವಾ ಲಿಟಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications