ಟಿ20 ವಿಶ್ವಕಪ್: ಕೊಹ್ಲಿ ನೆಚ್ಚಿನ ಸ್ನೇಹಿತರು, ಆರ್‌ಸಿಬಿ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡದೇ ಹೊರಗಿಟ್ರಾ?

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ವಿಷಯಗಳೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮತ್ತು ಇದಾದ ಬಳಿಕ ನಡೆಯಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ. ಈ ಎರಡೂ ಟೂರ್ನಿಗಳು ಸಹ ಸಾಕಷ್ಟು ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಎರಡೂ ಟೂರ್ನಿಗಳು ಸಹ ಯುಎಇಯಲ್ಲಿಯೇ ನಡೆಯಲಿದ್ದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ತಿಂಗಳ 19ರಂದು ಆರಂಭವಾಗಲಿದೆ ಹಾಗೂ ಅಕ್ಟೋಬರ್ 17ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನವೆಂಬರ್‌ 14ಕ್ಕೆ ಮುಕ್ತಾಯಗೊಳ್ಳಲಿದೆ.

ಐಪಿಎಲ್: ಕೊಹ್ಲಿ ಮತ್ತು ಎಬಿಡಿಯನ್ನು ಈ ದೊಡ್ಡ ಸಮಸ್ಯೆ ಕಾಡಲಿದೆ ಎಂದ ಗೌತಮ್ ಗಂಭೀರ್ಐಪಿಎಲ್: ಕೊಹ್ಲಿ ಮತ್ತು ಎಬಿಡಿಯನ್ನು ಈ ದೊಡ್ಡ ಸಮಸ್ಯೆ ಕಾಡಲಿದೆ ಎಂದ ಗೌತಮ್ ಗಂಭೀರ್

ಹೀಗೆ ಒಂದಾದರ ಮೇಲೊಂದು ಚುಟುಕು ಕದನಗಳು ನಡೆಯಲಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯ ಭರ್ಜರಿ ರಸದೌತಣ ಸಿಗುವುದಂತೂ ಖಚಿತ. ಅದರಲ್ಲಿಯೂ ಬರೋಬ್ಬರಿ 5 ವರ್ಷಗಳ ಬಳಿಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮರಳಿ ಬಂದಿದ್ದು ಕ್ರಿಕೆಟ್ ಪ್ರೇಮಿಗಳಿಗೆ, ಅದರಲ್ಲಿಯೂ ಟಿ ಟ್ವೆಂಟಿ ಲೀಗ್‌ಗಳನ್ನು ಹೆಚ್ಚಾಗಿ ಇಷ್ಟಪಡುವವರಿಗೆ ಇದು ಹಬ್ಬದ ವಾತಾವರಣವೇ ಸರಿ. ಹೌದು, 2016ರಲ್ಲಿ ಕೊನೆಯದಾಗಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆದಿತ್ತು, ಆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ರೋಚಕ ಜಯವನ್ನು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ನಂತರ ಇಲ್ಲಿಯವರೆಗೂ ಯಾವುದೇ ವರ್ಷದಲ್ಲಿಯೂ ಸಹ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಆಯೋಜಿಸಿರಲಿಲ್ಲ. ಸದ್ಯ ಈ ವರ್ಷ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ನಡೆಸಲು ಕಾಲ ಕೂಡಿ ಬಂದಿದ್ದು ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ.

ಆಂಗ್ಲರಿಗೆ 5ನೇ ಟೆಸ್ಟ್‌ಗಿಂತ ಬರಬೇಕಾಗಿರುವ ಆ ದುಡ್ಡೇ ಹೆಚ್ಚಾಯ್ತು; ಕಿಡಿಕಾರಿದ ಮಾಜಿ ಕ್ರಿಕೆಟಿಗಆಂಗ್ಲರಿಗೆ 5ನೇ ಟೆಸ್ಟ್‌ಗಿಂತ ಬರಬೇಕಾಗಿರುವ ಆ ದುಡ್ಡೇ ಹೆಚ್ಚಾಯ್ತು; ಕಿಡಿಕಾರಿದ ಮಾಜಿ ಕ್ರಿಕೆಟಿಗ

ಇದೆಲ್ಲದರ ನಡುವೆ ಇತ್ತೀಚಿಗಷ್ಟೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟವಾಗಿದ್ದು, ತಂಡದಲ್ಲಿ 15 ಆಟಗಾರರಿಗೆ ಅವಕಾಶವನ್ನು ನೀಡಲಾಗಿದೆ. ಹೌದು, ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಇನ್ನೂ ತಿಂಗಳು ಬಾಕಿ ಇರುವಾಗಲೇ ಭಾರತ ತಂಡ ಪ್ರಕಟವಾಗಿದ್ದು ಭಾರೀ ಚರ್ಚೆಗಳು ಮತ್ತು ವಾದ ವಿವಾದಗಳಿಗೆ ನಾಂದಿಯನ್ನು ಹಾಡಿದೆ. ತಂಡ ಪ್ರಕಟವಾದ ನಂತರ ಎಲ್ಲರೂ ಯಾವ ಆಟಗಾರರಿಗೆ ಸ್ಥಾನ ನೀಡಿದ್ದಾರೆ ಮತ್ತು ಯಾರನ್ನು ತಂಡದಿಂದ ಕೈ ಬಿಟ್ಟಿದ್ದಾರೆ ಎಂದು ಕುತೂಹಲದಿಂದ ಆಟಗಾರರ ಪಟ್ಟಿಯನ್ನು ನೋಡಲಾರಂಭಿಸಿದರು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡವನ್ನು ಸೂಕ್ಷ್ಮವಾಗಿ ಗಮನಿಸಿದವರ ಗಮನಕ್ಕೆ ಬಂದದ್ದು ತಂಡದಲ್ಲಿ ವಿರಾಟ್ ಕೊಹ್ಲಿ ಹೊರತುಪಡಿಸಿ ಬೇರೆ ಯಾವುದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಕೂಡ ಅವಕಾಶ ಪಡೆದುಕೊಂಡಿಲ್ಲ ಎನ್ನುವುದು. ಹೌದು, ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ಕುರಿತು ಐಪಿಎಲ್ ತಂಡಗಳ ಹೋಲಿಕೆಯನ್ನು ಮಾಡಿ ಈ ಕೆಳಕಂಡಂತೆ ಚರ್ಚೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನಡೆಸಲಾಗುತ್ತಿದೆ.

ಕೊಹ್ಲಿ ಅಪ್ಪಟ ಸ್ನೇಹಿತರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗಿಲ್ಲ ತಂಡದಲ್ಲಿ ಸ್ಥಾನ

ಕೊಹ್ಲಿ ಅಪ್ಪಟ ಸ್ನೇಹಿತರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗಿಲ್ಲ ತಂಡದಲ್ಲಿ ಸ್ಥಾನ

ಹೌದು ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಹೊರತುಪಡಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೇರೆ ಯಾವುದೇ ಆಟಗಾರರಿಗೂ ಕೂಡ ಸ್ಥಾನವನ್ನು ನೀಡಿಲ್ಲ. ಕೊಹ್ಲಿಯ ಅಪ್ಪಟ ಸ್ನೇಹಿತರಿಗೂ ಕೂಡ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ತಂಡದಲ್ಲಿ ಸ್ಥಾನ ನೀಡದೆ ತಂಡದಿಂದ ಹೊರಗಿಟ್ಟಿರುವುದು ಸದ್ಯ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದೆ. ಯುಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್ ಮತ್ತು ದೇವದತ್ ಪಡಿಕ್ಕಲ್ ಅವರಿಗೆ ಸ್ಥಾನ ನೀಡದೆ ತಂಡದಿಂದ ಕೈಬಿಟ್ಟಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾ

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾ

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ

RCB ಜೆರ್ಸಿ ಚೇಂಜಾಗಿರೋದು ಯಾಕೆ ಅಂತಾ ಗೊತ್ತಾದ್ರೆ ನೀವು ಚಪ್ಪಾಳೆ ತಟ್ತೀರಾ? | Oneindia Kannada
ಮುಂಬೈ ಇಂಡಿಯನ್ಸ್ ತಂಡದ 6 ಆಟಗಾರರಿಗೆ ತಂಡದಲ್ಲಿ ಸ್ಥಾನ!

ಮುಂಬೈ ಇಂಡಿಯನ್ಸ್ ತಂಡದ 6 ಆಟಗಾರರಿಗೆ ತಂಡದಲ್ಲಿ ಸ್ಥಾನ!

ಒಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ಆಟಗಾರರಲ್ಲಿ ವಿರಾಟ್ ಕೊಹ್ಲಿ ಹೊರತುಪಡಿಸಿ ಬೇರೆ ಯಾವುದೇ ಆಟಗಾರರಿಗೂ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ. ಆದರೆ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಬರೋಬ್ಬರಿ 6 ಆಟಗಾರರಿಗೆ ತಂಡದಲ್ಲಿ ಸ್ಥಾನವನ್ನು ನೀಡಲಾಗಿದ್ದು ಉತ್ತಮ ಪ್ರದರ್ಶನ ನೀಡಿದರೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುತ್ತದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಈ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಪ್ರದರ್ಶನವನ್ನು ನೀಡಿ ಇದೀಗ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ಆಟಗಾರರ ಪಟ್ಟಿ: ಮುಂಬೈ ಇಂಡಿಯನ್ಸ್ ತಂಡದ 6 ಆಟಗಾರರ ಪಟ್ಟಿ ಇಲ್ಲಿದೆ: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 9 - October 21 2021, 03:30 PM
ಬಾಂಗ್ಲಾದೇಶ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Monday, September 13, 2021, 23:30 [IST]
Other articles published on Sep 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X