ಟಿ20 ವಿಶ್ವಕಪ್ 2022: ಸೂರ್ಯಕುಮಾರ್ ಈಗಾಗಲೇ ನನಗೆ ಸರಣಿ ಶ್ರೇಷ್ಠ ಆಟಗಾರ; ಗೌತಮ್ ಗಂಭೀರ್

ನವೆಂಬರ್ 6ರ ಭಾನುವಾರದಂದು ಮೆಲ್ಬೋರ್ನ್‌ನಲ್ಲಿ ನಡೆದ ಅಂತಿಮ ಪಂದ್ಯವನ್ನು 71 ರನ್‌ಗಳಿಂದ ಗೆದ್ದ ಭಾರತ ತಂಡವು ಟಿ20 ವಿಶ್ವಕಪ್‌ನ ಸೂಪರ್-12 ಹಂತವನ್ನು ಸಮಗ್ರ ಗೆಲುವಿನೊಂದಿಗೆ ಮುಕ್ತಾಯಗೊಳಿಸಿತು.
ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಭಾರತವನ್ನು ಗೆಲ್ಲಿಸಿದರು ಮತ್ತು ಪಂದ್ಯಾವಳಿಯ ಸೆಮಿಫೈನಲ್‌ಗೆ ಅಧಿಕೃತ ಪ್ರವೇಶ ಪಡೆದರು. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಟಿ20 ಕ್ರಿಕೆಟ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ತಮ್ಮ ಅತ್ಯದ್ಭುತ ಫಾರ್ಮ್ ಅನ್ನು ಮುಂದುವರೆಸಿದರು.
ಬಲಿಷ್ಠ ಬೌಲಿಂಗ್ ದಾಳಿಯ ವಿರುದ್ಧ 187 ರನ್‌ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ 17.2 ಓವರ್‌ಗಳಲ್ಲಿ ಕೇವಲ 115 ರನ್‌ಗಳಿಗೆ ಆಲೌಟ್ ಆಯಿತು. ರವಿಚಂದ್ರನ್ ಅಶ್ವಿನ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ಅವರ ಉತ್ತಮ ಗುಣಮಟ್ಟದ ಬೌಲಿಂಗ್ ಎದುರು ಪ್ರತಿದಾಳಿ ನಡೆಸಲು ವಿಫಲವಾಯಿತು. ಭಾರತದ ಬೌಲರ್‌ಗಳಲ್ಲಿ ರವಿಚಂದ್ರನ್ ಅಶ್ವಿನ್ ಅವರು ಕೇವಲ 22 ರನ್‌ಗಳಿಗೆ ಮೂರು ವಿಕೆಟ್ ಪಡೆದರು.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022ರ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ಪಡೆಯಬೇಕು ಎಂದು ಮಾಜಿ ಭಾರತೀಯ ಬ್ಯಾಟರ್ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ
32 ವರ್ಷ ವಯಸ್ಸಿನ ಸೂರ್ಯಕುಮಾರ್ ಯಾದವ್ ಪ್ರಸ್ತುತ ಪ್ರಮುಖ ಟೂರ್ನಿಯಲ್ಲಿ ಮೆನ್ ಇನ್ ಬ್ಲೂ ತಂಡಕ್ಕಾಗಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಐದು ಪಂದ್ಯಗಳಿಂದ 75ರ ಸರಾಸರಿಯಲ್ಲಿ ಮತ್ತು 193.96ರ ಸ್ಟ್ರೈಕ್ ರೇಟ್‌ನಲ್ಲಿ 225 ರನ್ ಗಳಿಸಿದ್ದಾರೆ.
ನೆದರ್ಲ್ಯಾಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅರ್ಧಶತಕಗಳನ್ನು ಗಳಿಸಿದ ನಂತರ, ಸೂರ್ಯಕುಮಾರ್ ಭಾನುವಾರ ಜಿಂಬಾಬ್ವೆ ವಿರುದ್ಧ 25 ಎಸೆತಗಳಲ್ಲಿ ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಾಯದಿಂದ ಅಜೇಯ 61 ರನ್ ಗಳಿಸಿದರು.
ನಂ.4ರಲ್ಲಿ ಬ್ಯಾಟಿಂಗ್ ಮಾಡಿದ ಮುಂಬೈ ಮೂಲದ ಸೂರ್ಯಕುಮಾರ್ ಯಾದವ್ ಭಾರತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್‌ಗಳ ಬೃಹತ್ ಸ್ಕೋರ್ ದಾಖಲಿಸಲು ನೆರವಾದರು.

ಸೂರ್ಯಕುಮಾರ್ ಯಾದವ್ ಎಲ್ಲರಿಗಿಂತ ಭಿನ್ನ
"ನಾವು ಸೂರ್ಯಕುಮಾರ್ ಯಾದವ್ ಬಗ್ಗೆ ಸಾಕಷ್ಟು ಮಾತನಾಡಿದ್ದೇವೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರಂತಹ ಆಟಗಾರರು ತುಂಬಾ ಸಾಂಪ್ರದಾಯಿಕ ಆಟಗಾರರು. ಸೂರ್ಯಕುಮಾರ್ ಯಾದವ್ ಭಿನ್ನ. ಭಾರತವು ಈ ರೀತಿಯ ಆಟಗಾರರನ್ನು ಹೊಂದಿಲ್ಲ, ವಿಶೇಷವಾಗಿ ನಂ.4ರಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ," ಎಂದು ಗೌತಮ್ ಗಂಭೀರ್ ಸ್ಟಾರ್ ಸ್ಪೋರ್ಟ್ಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
"ಸೂರ್ಯಕುಮಾರ್ ಯಾದವ್ ಮೂರು ಅರ್ಧ ಶತಕಗಳೊಂದಿಗೆ 200ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ನನಗೆ, ಭಾರತ ವಿಶ್ವಕಪ್ ಗೆಲ್ಲದಿದ್ದರೂ ಸೂರ್ಯಕುಮಾರ್ ಯಾದವ್ ಆಡಿದ ರೀತಿಯಿಂದಾಗಿ ಅವರು ಈಗಾಗಲೇ ಪಂದ್ಯಾವಳಿಯ ಆಟಗಾರರಾಗಿದ್ದಾರೆ," ಎಂದು ಗೌತಮ್ ಗಂಭೀರ್ ಹೇಳಿದರು.

ಕ್ಯಾಲೆಂಡರ್ ವರ್ಷದಲ್ಲಿ 1000 ಟಿ20 ರನ್
ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ನಂತರ ಕ್ಯಾಲೆಂಡರ್ ವರ್ಷದಲ್ಲಿ 1000 ಟಿ20 ರನ್‌ಗಳನ್ನು ಗಳಿಸಿದ ಒಟ್ಟಾರೆ ಎರಡನೇ ಆಟಗಾರರಾದರು ಮತ್ತು ಸೂರ್ಯಕುಮಾರ್ ಯಾದವ್ ಅವರು ಮೊದಲ ಭಾರತೀಯ ಬ್ಯಾಟರ್ ಎನಿಸಿದರು.
ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಕ್ರೇಗ್ ಎರ್ವಿನ್ ನಾಯಕತ್ವದ ಜಿಂಬಾಬ್ವೆ ತಂಡದ ವಿರುದ್ಧ ಸಮಗ್ರ 71 ರನ್‌ಗಳ ಜಯವನ್ನು ಗಳಿಸಿದ ನಂತರ ಭಾರತವು ತಮ್ಮ ಸೂಪರ್ 12 ಗುಂಪಿನಲ್ಲಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸುವುದು ಖಚಿತವಾಯಿತು.
ಭಾರತವು ಇದೀಗ ನವೆಂಬರ್ 10ರ ಗುರುವಾರದಂದು ಅಡಿಲೇಡ್ ಮೈದಾನದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್‌ನೊಂದಿಗೆ ಎರಡನೇ ಸೆಮಿಫೈನಲ್‌ನಲ್ಲಿ ಸೆಣಸಾಡುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications